Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ‘ವರ್ತನೆಯ ಸಮಸ್ಯೆ’ ಇದೆ ಎಂದ ಅಫ್ರಿದಿಗೆ...

‘ವರ್ತನೆಯ ಸಮಸ್ಯೆ’ ಇದೆ ಎಂದ ಅಫ್ರಿದಿಗೆ ಗಂಭೀರ್ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ19 April 2020 12:00 PM IST
share
‘ವರ್ತನೆಯ ಸಮಸ್ಯೆ’ ಇದೆ ಎಂದ ಅಫ್ರಿದಿಗೆ ಗಂಭೀರ್ ತಿರುಗೇಟು

ಹೊಸದಿಲ್ಲಿ, ಎ.18: ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ಪಾಕ್‌ನ ಮಾಜಿ ಆಲ್‌ರೌಂಡರ್ ಶಾಹಿದ್ ಅಫ್ರಿದಿ ವಿರುದ್ಧ ತನ್ನ ವಾಗ್ವಾದವನ್ನು ಮತ್ತೆ ಮುಂದುವರಿಸಿದ್ದಾರೆ. ಅಫ್ರಿದಿ ಓರ್ವ ಸುಳ್ಳುಗಾರ, ದೇಶದ್ರೋಹಿ ಹಾಗೂ ಅವಕಾಶವಾದಿ ಎಂದು ದೂಷಿಸಿದ್ದಾರೆ. 2019ರ ಎಪ್ರಿಲ್‌ನಲ್ಲಿ ಪ್ರಕಟವಾದ ಅಫ್ರಿದಿ ಅವರ ಆತ್ಮಚರಿತ್ರೆಯಲ್ಲಿ ತನ್ನ ಕುರಿತು ಪ್ರಸ್ತಾವವಾದ ಮತ್ತೊಂದು ಕೆಟ್ಟ ಹೇಳಿಕೆಗೆ ಟ್ವಿಟರ್‌ನ ಮೂಲಕ ಗಂಭೀರ್ ತಿರುಗೇಟು ನೀಡಿದ್ದಾರೆ.

ಕ್ರಿಕೆಟ್ ಆಡುತ್ತಿದ್ದ ಸಮಯದಲ್ಲಿ ಮೈದಾನ ದೊಳಗೆ ಈ ಇಬ್ಬರು ಮಾಜಿ ಕ್ರಿಕೆಟಿಗರು ಸಾಕಷ್ಟು ಬಾರಿ ಮಾತಿನ ಚಕಮಕಿಯಲ್ಲಿ ತೊಡಗಿದ್ದರು. ಗಂಭೀರ್ ಕುರಿತು ಅಫ್ರಿದಿ ಮಾಡಿರುವ ಆರೋಪ ಆತ್ಮಚರಿತ್ರೆ ಪುಸ್ತಕ ಬಿಡುಗಡೆಯ ಮೊದಲೇ ಭಾರೀ ಸುದ್ದಿಯಾಗಿತ್ತು.

  

ಅಫ್ರಿದಿ ತನ್ನ ಆತ್ಮಚರಿತ್ರೆಯಲ್ಲಿ, ‘‘ಗೌತಮ್ ಗಂಭೀರ್‌ಗೆ ವರ್ತನೆಯ ಸಮಸ್ಯೆ ಇದೆ. ಅವರಲ್ಲಿ ವ್ಯಕ್ತಿತ್ವವೇ ಇಲ್ಲ. ಕ್ರಿಕೆಟ್ ಎಂಬ ಮಹಾ ಜಗತ್ತಿನಲ್ಲಿ ಗಂಭೀರ್ ಒಂದು ಪಾತ್ರ ಮಾತ್ರ. ತಾನು ಡಾನ್ ಬ್ರಾಡ್ಮನ್ ಹಾಗೂ ಜೇಮ್ಸ್ ಬಾಂಡ್‌ನ ಸಂಗಮ ಎಂಬ ರೀತಿ ಅವರು ವರ್ತಿಸುತ್ತಾರೆ. ಗಂಭೀರ್ ಅವರ ಕ್ರಿಕೆಟ್ ದಾಖಲೆ ಶ್ರೇಷ್ಠಮಟ್ಟದ್ದಲ್ಲ’’ಎಂದು ಉಲ್ಲೇಖಿಸಿದ್ದರು. ಅಫ್ರಿದಿಗೆ ಟ್ವಿಟರ್‌ನಲ್ಲಿ ತಿರುಗೇಟು ನೀಡಿರುವ ಗಂಭೀರ್, ತನ್ನ ವಯಸ್ಸು ಎಷ್ಟೆಂದು ನೆನಪಿಲ್ಲದ ವ್ಯಕ್ತಿಗೆ ನನ್ನ ದಾಖಲೆಯು ಹೇಗೆ ತಾನೆ ನೆನಪಿರಲು ಸಾಧ್ಯ. ಶಾಹಿದ್ ಅಫ್ರಿದಿ ನಿಮಗೆ ಒಂದು ಘಟನೆ ನೆನಪಿಸುವೆ: 2007ರ ಟ್ವೆಂಟಿ-20 ವಿಶ್ವಕಪ್ ಫೈನಲ್‌ನಲ್ಲಿ ಭಾರತ-ಪಾಕ್ ನಡುವಿನ ಪಂದ್ಯದಲ್ಲಿ ನಾನು 54 ಎಸೆತಗ ಳಲ್ಲಿ 75 ರನ್ ಗಳಿಸಿದ್ದರೆ, ನೀವು 1 ಎಸೆತಕ್ಕೆ ಸೊನ್ನೆ ಸುತ್ತಿದ್ದೀರಿ. ಅತ್ಯಂತ ಮುಖ್ಯವಾಗಿ ನಾವು ವಿಶ್ವ ಕಪ್‌ನ್ನು ಗೆದ್ದುಕೊಂಡಿದ್ದೆವು. ಹೌದು, ಸುಳ್ಳುಗಾರರು, ದೇಶದ್ರೋಹಿಗಳು ಹಾಗೂ ಅವಕಾಶವಾದಿಗಳ ಬಳಿನಾನು ಸರಿಯಾಗಿಯೇ ವರ್ತಿಸುವೆ ಎಂದು ಬರೆದಿದ್ದಾರೆ.

ಧೋನಿ ನಾಯಕತ್ವದಲ್ಲಿ ಚೊಚ್ಚಲ ಟಿ-20 ವಿಶ್ವಕಪ್‌ನ್ನು ಎತ್ತಿಹಿಡಿದಿದ್ದ ಫೈನಲ್ ಪಂದ್ಯದಲ್ಲಿ ಆಲ್‌ರೌಂಡರ್ ಇರ್ಫಾನ್ ಪಠಾಣ್ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾಗಿದ್ದರೂ 75 ರನ್ ಸಿಡಿಸಿದ್ದ ಗಂಭೀರ್ ನೆರವಿನಿಂದ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ಸ್ಪರ್ಧಾತ್ಮಕ ಸ್ಕೋರ್ ಗಳಿಸಿತ್ತು. ಪಾಕ್ ನಾಯಕ ಮಿಸ್ಬಾವುಲ್ ಹಕ್ ಕೊನೆಯ ಓವರ್ ತನಕ ಹೋರಾಡಿದರೂ ಗೆಲುವು ಮರೀಚಿಕೆ ಯಾಗಿತ್ತು. ಇನಿಂಗ್ಸ್‌ನ ಕೊನೆಯ ಓವರ್‌ನಲ್ಲಿ ಬಿಗಿ ಬೌಲಿಂಗ್ ಮಾಡಿದ್ದ ಜೋಗಿಂದರ್ ಶರ್ಮಾ ಭಾರತಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X