Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರೈತರು, ಕಾರ್ಮಿಕರು, ಬಡವರು ಸೇರಿದಂತೆ...

ರೈತರು, ಕಾರ್ಮಿಕರು, ಬಡವರು ಸೇರಿದಂತೆ ಅಸಹಾಯಕರ ನೆರವಿಗೆ ಸರ್ಕಾರ ನಿಲ್ಲಬೇಕು : ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ19 April 2020 2:45 PM IST
share
ರೈತರು, ಕಾರ್ಮಿಕರು, ಬಡವರು ಸೇರಿದಂತೆ ಅಸಹಾಯಕರ ನೆರವಿಗೆ ಸರ್ಕಾರ ನಿಲ್ಲಬೇಕು : ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಹಣಕಾಸು ಪರಿಸ್ಥಿತಿ ಚೆನ್ನಾಗಿಲ್ಲ ಎಂಬುದು ಗೊತ್ತಿದೆ. ಆದರೂ ಕೈ ಕಟ್ಟಿ ಕೂರುವಂತಿಲ್ಲ. ಲಾಕ್‍ಡೌನ್ ಮುಗಿಯುವವರೆಗೆ ರೈತರು, ಕಾರ್ಮಿಕರು, ಬಡವರು ಸೇರಿದಂತೆ ಅಸಹಾಯಕರ ನೆರವಿಗೆ ಸರ್ಕಾರ ನಿಲ್ಲಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಿದರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ನಾಯಕರೊಂದಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಅವರು, ಮುಖ್ಯಮಂತ್ರಿಯನ್ನು ಭೇಟಿಯಾಗಿ ಮಾತನಾಡಿದರು.

ದ್ವಿಚಕ್ರ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡುವುದಾಗಿ ಹೇಳಿ ಬಳಿಕ ಆದೇಶ ವಾಪಸ್ ಪಡೆದಿದ್ದು ಸರಿಯಾಗಿದೆ. ಲಾಕ್‍ಡೌನ್ ನಿಯಮಗಳು ನೂರಕ್ಕೆ ನೂರರಷ್ಟು ಪಾಲನೆ ಆಗಬೇಕು. ಇದರಲ್ಲಿ ಯಾವುದೇ ರಿಯಾಯಿತಿ ಬೇಡ. ನಾನು ಎರಡು ದಿನಗಳ ಕಾಲ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಕೊರೋನ ಸೋಂಕು ನಿಯಂತ್ರಿಸುವ ವಿಷಯದಲ್ಲಿ ಸರ್ಕಾರ ಮಾಡಬೇಕಿರುವ ಕೆಲಸಗಳು ಸಾಕಷ್ಟಿವೆ. ಈ ವಿಚಾರದಲ್ಲಿ ಪ್ರತಿಪಕ್ಷವಾಗಿ ಕಾಂಗ್ರೆಸ್ ಸರ್ಕಾರಕ್ಕೆ ಅಗತ್ಯ ಸಹಕಾರ ನೀಡಲಿದೆ ಎಂದು ಹೇಳಿದರು.

ರಾಜ್ಯದಲ್ಲಿ ಅಸಂಘಟಿತ ವಲಯದ 1.32 ಕೋಟಿ ಕಾರ್ಮಿಕರಿದ್ದಾರೆ.  ಕಾರ್ಮಿಕರ ಕಲ್ಯಾಣ ನಿಧಿಯಲ್ಲಿ 8 ಸಾವಿರ ಕೋಟಿ ರೂ.ಗಳಿದೆ. ತಲಾ ಎರಡು ಸಾವಿರ ರೂ. ನೀಡುವುದಾಗಿ ಮುಖ್ಯಮಂತ್ರಿಯವರು ಹೇಳಿದ್ದಾರೆ.  ಇದುವರೆಗೆ 30 ಕೋಟಿ ರೂ. ಮಾತ್ರ ಹಂಚಿಕೆಯಾಗಿದೆ. ಎಲ್ಲ ಕಾರ್ಮಿಕರಿಗೂ ಈ ಸಹಾಯಧನದ ಸೌಲಭ್ಯ ಸಿಗಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರು ಮಹಾನಗರ ಒಂದರಲ್ಲೇ ಮೂರು ಲಕ್ಷಕ್ಕೂ ಅಧಿಕ ಕಾರ್ಮಿಕರಿದ್ದಾರೆ. ರಾಜ್ಯಾದ್ಯಂತ  ಎಲ್ಲ ಕಾರ್ಮಿಕರಿಗೂ ಆಹಾರ ಸಿಗುವಂತೆ ಆಗಬೇಕು. ಮಡಿವಾಳರು, ಸವಿತಾ ಸಮಾಜದವರು, ಕುಂಬಾರರು, ಚಮ್ಮಾರರು, ಮನೆ ಕೆಲಸದವರು ಸೇರಿದಂತೆ ಲಕ್ಷಾಂತರ ಸಂಖ್ಯೆಯಲ್ಲಿರುವ ಕಾರ್ಮಿಕರಿಗೂ ಸರ್ಕಾರದ ನೆರವು ಸಿಗಬೇಕು. ಅವರಿಗೆ ಉದ್ಯೋಗವೂ ಇಲ್ಲ. ಕೈಗೆ ಹಣವೂ ಬರುತ್ತಿಲ್ಲ ಎಂದು ವಿವರಿಸಿದರು. ಈ ವರ್ಗದ ಜನರಿಗಾಗಿಯೇ ಒಂದು ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು. 

ಕೊರೋನ ಸೋಂಕು ನಿಯಂತ್ರಿಸುವ ವಿಚಾರದಲ್ಲಿ ಬೇರೆ ರಾಜ್ಯಗಳ ಮಾದರಿಯನ್ನು ನಾವು ಅನುಸರಿಸುವುದು ಸೂಕ್ತ. ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮ್ಮಲ್ಲಿ ಪರೀಕ್ಷೆ ಪ್ರಮಾಣ ಕಡಿಮೆ ಇದೆ. ಆ ಕುರಿತು ಸಿಎಂ ಗಮನ ಹರಿಸಬೇಕು ಎಂದರು.

ಕೊರೋನ ವಿಚಾರದಲ್ಲಿ ಒಂದು ಸಮುದಾಯದವರನ್ನು ಮಾತ್ರ ಗುರಿಯಾಗಿಟ್ಟುಕೊಂಡು ಕೆಲ ಶಾಸಕರು, ಸಂಸದರು ಟೀಕೆ ಮಾಡುತ್ತಿದ್ದಾರೆ. ನೀವೇ (ಸಿಎಂ) ಮನವಿ ಮಾಡಿಕೊಂಡರೂ ಹೇಳಿಕೆ ಕೊಡುವುದನ್ನು ಕೆಲವರು ನಿಲ್ಲಿಸುತ್ತಿಲ್ಲ. ಅಂಥವರ ವಿರುದ್ಧ ಕ್ರಿಮಿನಲ್ ಕೇಸು ದಾಖಲು ಮಾಡಿ. ಈ ವಿಷಯದಲ್ಲಿ ಪೊಲೀಸರ ಮೌನವೂ ಸರಿಯಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಸಂಘ, ಸಂಸ್ಥೆಗಳಿಗೆ ಧನ್ಯವಾದ

ಕಾರ್ಮಿಕರು, ಬಡವರಿಗೆ ಆಹಾರ ಒದಗಿಸುವಲ್ಲಿ ಖಾಸಗಿ ಸಂಘ, ಸಂಸ್ಥೆಗಳ ಪಾತ್ರ ಹಿರಿದು. ಆ ಸಂಸ್ಥೆಗಳು ಇಲ್ಲದೇ ಹೋಗಿದ್ದರೆ ಆಹಾರ ಒದಗಿಸುವುದು ಸರ್ಕಾರಕ್ಕೆ ಇನಷ್ಟು ಸವಾಲು ಅಗುತ್ತಿಲ್ಲ. ಇದಕ್ಕಾಗಿ ಸಂಘ, ಸಂಸ್ಥೆಗಳಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಹಿರಿಯ ನಾಯಕರಾದ ರಮೇಶ್ ಕುಮಾರ್, ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್, ಆರ್.ವಿ. ದೇಶಪಾಂಡೆ, ಡಾ. ಜಿ. ಪರಮೇಶ್ವರ, ವಿ.ಎಸ್. ಉಗ್ರಪ್ಪ, ಸಂಸದ ಡಿ.ಕೆ. ಸುರೇಶ್, ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಅಜಯಸಿಂಗ್ ಅವರು ನಿಯೋಗದಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X