ಮದ್ಯ ಸಿಗದೆ ಸ್ಯಾನಿಟೈಸರ್ ಸೇವಿಸಿದ್ದ ವ್ಯಕ್ತಿ ಮೃತ್ಯು

ಹುಬ್ಬಳ್ಳಿ, ಎ.19: ಕೊರೋನ ಸೋಂಕು ತಡೆಗಟ್ಟಲು ಜಾರಿಗೊಳಿಸಿರುವ ಲಾಕ್ ಡೌನ್ ಹಿನ್ನೆಲೆ ಮದ್ಯ ಸಿಗದೆ ವ್ಯಕ್ತಿಯೋರ್ವ ಸ್ಯಾನಿಟೈಸರ್ ಕುಡಿದು ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಜಿಲ್ಲೆಯ ಕಲಘಟಗಿ ತಾಲೂಕಿನ ಗಂಬ್ಯಾಪುರ ಗ್ರಾಮದ ಬಸವರಾಜ ವೆಂಕಪ್ಪ ಕುರುವಿನಕೊಪ್ಪ(45) ಮೃತ ವ್ಯಕ್ತಿ ಎಂದು ಪೊಲೀಸರು ಗುರುತಿಸಿದ್ದಾರೆ.
ಮೂರು ದಿನಗಳ ಹಿಂದೆ ಮದ್ಯ ಸಿಗದೆ ಸ್ಯಾನಿಟೈಸರ್ ಕುಡಿದ ಪರಿಣಾಮ ಬಸವರಾಜ್ ವೆಂಕಪ್ಪ ಕುರುವಿನಕೊಪ್ಪ ಅಸ್ವಸ್ಥಗೊಂಡಿದ್ದರು. ನಂತರ ಚಿಕಿತ್ಸೆಗೆಂದು ಹುಬ್ಬಳ್ಳಿಯಲ್ಲಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
Next Story





