ಮದ್ಯದಂಗಡಿ ಕಳ್ಳತನ ಪ್ರಕರಣಗಳಲ್ಲಿ ಮಾಲಕರ ಕೈವಾಡ: ಸಚಿವ ರಮೇಶ್ ಜಾರಕಿಹೊಳಿ

ಬೆಳಗಾವಿ, ಎ.19: ಲಾಕ್‍ಡೌನ್ ಹಿನ್ನೆಲೆ ಮದ್ಯದಂಗಡಿಗಳಲ್ಲಿ ಕಳ್ಳತನ ಆಗಿರುವ ಪ್ರಕರಣಗಳಲ್ಲಿ ಮಾಲಕರ ಕೈವಾಡ ಇದ್ದು, ಈ ಸಂಬಂಧ ತನಿಖೆ ನಡೆಸುವಂತೆ ಸೂಚನೆ ನೀಡಲಾಗಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.
ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಸೇರಿದಂತೆ ಇನ್ನಿತರೆ ಕಡೆಗಳಲ್ಲಿ ಮದ್ಯ ಕಳ್ಳತನ ಆಗಿದೆ. ಅಂಗಡಿಗಳಿಗೆ ನುಗ್ಗಿ ಈ ಕೃತ್ಯವೆಸಗಿದ್ದಾರೆ. ಈ ಪ್ರಕರಣಗಳಲ್ಲಿ ಮಾಲಕರು ಭಾಗಿಯಾಗಿರುವ ಶಂಕೆ ಇದ್ದು, ತನಿಖೆ ನಡೆಸುವಂತೆ ಜಿಲ್ಲೆಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಕೋವಿಡ್-19 ಹರಡದಂತೆ ಸರಕಾರ ಹಲವಾರು ಮುಂಜಾಗೃತಾ ಕ್ರಮಗಳನ್ನು ಅನುಸರಿಸಿದೆ ಎಂದ ಅವರು, ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಮತ್ತು ಕೃಷಿಗೆ ಯಾವುದೇ ತೊಂದರೆಯಾಗದಂತೆ ನೀರು ಬಿಡುಗಡೆಗೆ ಹಾಗೂ ನೀರು ಸರಬರಾಜಿಗೆ ಅಧಿಕಾರಿಗಳ ಜತೆ ಸಭೆ ನಡೆಸಿ ಸೂಚಿಸಿದ್ದೇನೆ ಎಂದು ಮಾಹಿತಿ ನೀಡಿದರು.
Next Story





