ಕೊರೋನ ಸೋಂಕಿತರ ಫೋಟೊ ಶೇರ್ ಮಾಡಿದರೆ ಕಾನೂನು ಕ್ರಮ: ಪೊಲೀಸ್ ಇಲಾಖೆ ಎಚ್ಚರಿಕೆ

ಬಂಟ್ವಾಳ, ಎ.20: ಕೋವಿಡ್ - 19 (ಕೊರೋನ) ವೈರಸ್ ಸೋಂಕಿಗೊಳಗಾಗಿ ಮೃತಪಟ್ಟ ಬಂಟ್ವಾಳದ ಮಹಿಳೆಯ ಭಾವಚಿತ್ರವನ್ನು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿರುವುದು ಪೊಲೀಸ್ ಇಲಾಖೆಯ ಗಮನಕ್ಕೆ ಬಂದಿದ್ದು, ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.
ಕೊರೋನ ಸೋಂಕು ದೃಢಪಟ್ಟ ಅಥವಾ ಅದರಿಂದ ಮೃತಪಟ್ಟ ವ್ಯಕ್ತಿಗಳ ಭಾವಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಡುವುದು ಕಾನೂನು ಪ್ರಕಾರ ಅಪರಾಧವಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಬಂಟ್ವಾಳದಲ್ಲಿ ರವಿವಾರ ಮೃತಪಟ್ಟ ಮಹಿಳೆಯ ಭಾವಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಶೇರ್ ಮಾಡಿರುವುದು ಪೊಲೀಸ್ ಇಲಾಖೆಯ ಗಮನಕ್ಕೆ ಬಂದಿದ್ದು ಅಂಥವರ ಮಾಹಿತಿಗಳನ್ನು ಇಲಾಖೆ ಕಲೆಹಾಕುತ್ತಿದೆ ಎಂದು ಪೊಲೀಸ್ ಇಲಾಖೆಯ ಪ್ರಕಟನೆ ತಿಳಿಸಿದೆ.
Next Story





