ತುಂಬೆ: ಬಾವಿಗೆ ಬಿದ್ದ ಚಿರತೆಯ ರಕ್ಷಣೆ

ಬಂಟ್ವಾಳ, ಎ.20: ತಾಲೂಕಿನ ತುಂಬೆ ಸಮೀಪದ ಮಜಿ ಎಂಬಲ್ಲಿ ಬಾವಿಗೆ ಬಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆ ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿ ಸೋಮವಾರ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ಮೇಲಕ್ಕೆತ್ತಿದ್ದಾರೆ.
ಮಜಿ ನಿವಾಸಿ ಮೋನಪ್ಪ ಎಂಬವರ ಜಮೀನಿನಲ್ಲಿರುವ ಸುಮಾರು ಆರು ಅಡಿ ಆಳದ ಬಾವಿಗೆ ರವಿವಾರ ರಾತ್ರಿ ಚಿರತೆ ಬಿದ್ದಿದ್ದು, ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಎರಡು ವರ್ಷ ಪ್ರಾಯದ ಚಿರತೆ ಇದಾಗಿದೆ ಎಂದು ಪರೀಕ್ಷೆ ನಡೆಸಿದ ವೈದ್ಯರು ತಿಳಿಸಿದ್ದಾರೆ.
ವಲಯ ಅರಣ್ಯಾಧಿಕಾರಿ ಶ್ರೀಧರ್, ಪ್ರೀತಂ, ಜಿತೇಶ್, ಭಾಸ್ಕರ್, ವಿನಯ್, ಬಂಟ್ವಾಳ ಗ್ರಾಮಾಂತರ ಎಸ್ಸೈ ಪ್ರಸನ್ನ, ಟ್ರಾಫಿಕ್ ಎಸ್ಸೈ ರಾಜೇಶ್ ಕೆ.ವಿ., ಸಿಬ್ಬಂದಿಯಾದ ಜನಾರ್ದನ, ಕಿರಣ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
Next Story







