ಎಂಡೋಸಲ್ಫಾನ್ ಸಂತ್ರಸ್ತರಿಗೆ ಆರೋಗ್ಯ ಕೇಂದ್ರದಲ್ಲಿ ತುರ್ತು ಔಷಧ ಲಭ್ಯ
ಮಂಗಳೂರು, ಎ.20: ದ.ಕ ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್ 19 ತೀವ್ರವಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಲಾಕ್‌ಡೌನ್ ಜಾರಿಯಲ್ಲಿದ್ದು, ಎಂಡೋಸಲ್ಫಾನ್ ಸಂತ್ರಸ್ತರಲ್ಲಿ ನಿರಂತರವಾಗಿ ಔಷಧಿ ಬೇಕಾಗಿರುವವರು ಹಾಗೂ ತುರ್ತಾಗಿ ಔಷಧ ಅಗತ್ಯವಿರುವ ಸಂತ್ರಸ್ತರು ಔಷಧದ ಬೇಡಿಕೆಯನ್ನು ಹತ್ತಿರದ ಆರೋಗ್ಯ ಕೇಂದ್ರದಲ್ಲಿ ನೀಡಿ ಅವಶ್ಯವಿರುವ ಔಷಧವನ್ನು ಪಡೆಯಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯ ಪ್ರಕಟನೆ ತಿಳಿಸಿದೆ.
Next Story





