Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಸಿವಿನ ಆಕ್ರೋಶದ ನಡುವೆಯೇ ಸ್ಯಾನಿಟೈಸರ್...

ಹಸಿವಿನ ಆಕ್ರೋಶದ ನಡುವೆಯೇ ಸ್ಯಾನಿಟೈಸರ್ ತಯಾರಿಗೆ ಹೆಚ್ಚುವರಿ ಅಕ್ಕಿ ಬಳಸಲು ಕೇಂದ್ರದ ನಿರ್ಧಾರ !

ವಾರ್ತಾಭಾರತಿವಾರ್ತಾಭಾರತಿ20 April 2020 9:42 PM IST
share
ಹಸಿವಿನ ಆಕ್ರೋಶದ ನಡುವೆಯೇ ಸ್ಯಾನಿಟೈಸರ್ ತಯಾರಿಗೆ ಹೆಚ್ಚುವರಿ ಅಕ್ಕಿ ಬಳಸಲು ಕೇಂದ್ರದ ನಿರ್ಧಾರ !

ಹೊಸದಿಲ್ಲಿ, ಎ.20: ದೇಶದಲ್ಲಿ ಹ್ಯಾಂಡ್ ಸ್ಯಾನಿಟೈಸರ್‌ಗಳ ಪೂರೈಕೆಯಲ್ಲಿ ಕೊರತೆಯಾಗದಂತೆ ಎಥೆನಾಲ್ ಉತ್ಪಾದಿಸಲು ತನ್ನ ಕೇಂದ್ರದ ಗೋದಾಮುಗಳಲ್ಲಿರುವ ಹೆಚ್ಚುವರಿ ಅಕ್ಕಿಯನ್ನು ಬಳಸಿಕೊಳ್ಳಲು ಪೆಟ್ರೋಲಿಯಂ ಸಚಿವಾಲಯವು ಸೋಮವಾರ ನಿರ್ಧರಿಸಿದೆ. ವಾಯುಮಾಲಿನ್ಯವನ್ನು ತಗ್ಗಿಸಲು ಪೆಟ್ರೋಲಿಗೂ ಈ ಎಥೆನಾಲ್ ಅನ್ನು ಸೇರಿಸಲಾಗುತ್ತದೆ. ದೇಶವ್ಯಾಪಿ ಲಾಕ್‌ಡೌನ್ ನಿಂದಾಗಿ ಸಾವಿರಾರು ಜನರು ಹಸಿವೆಯಿಂದ ನರಳುವ ಸ್ಥಿತಿಗೆ ತಲುಪುತ್ತಿರುವ ಈ ಸಂದರ್ಭದಲ್ಲಿ ಸರಕಾರದ ಕ್ರಮವು ವಿವಾದವನ್ನು ಸೃಷ್ಟಿಸುವ ನಿರೀಕ್ಷೆಯಿದೆ.

ಹೆಚ್ಚುವರಿ ಆಹಾರ ಧಾನ್ಯಗಳನ್ನು ಎಥೆನಾಲ್ ಆಗಿ ಪರಿವರ್ತಿಸಲು ಅವಕಾಶ ಕಲ್ಪಿಸಿರುವ ರಾಷ್ಟ್ರೀಯ ಜೈವಿಕ ಇಂಧನಗಳ ನೀತಿಯನ್ನು ಉಲ್ಲೇಖಿಸಿರುವ ಸರಕಾರವು,ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಜೈವಿಕ ಇಂಧನ ಸಮನ್ವಯ ಸಮಿತಿ (ಎನ್‌ಬಿಸಿಸಿ)ಯ ಸಭೆಯು ಈ ನಿರ್ಧಾರವನ್ನು ಕೈಗೊಂಡಿದೆ ಎಂದು ತಿಳಿಸಿದೆ.

ಮದ್ಯಸಾರ ಆಧಾರಿತ ಸ್ಯಾನಿಟೈಸರ್‌ಗಳ ತಯಾರಿಕೆಗಾಗಿ ಮತ್ತು ಪೆಟ್ರೋಲ್‌ನಲ್ಲಿ ಮಿಶ್ರಗೊಳಿಸಲು ಎಥೆನಾಲ್ ಉತ್ಪಾದಿಸಲು ಭಾರತೀಯ ಆಹಾರ ನಿಗಮ(ಎಫ್‌ಸಿಐ)ದ ಗೋದಾಮುಗಳಲ್ಲಿ ರುವ ಮಿಗತೆ ಅಕ್ಕಿಯನ್ನು ಬಳಸಿಕೊಳ್ಳುವ ಪ್ರಸ್ತಾವಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಸರಕಾರವು ಹೇಳಿಕೆಯಲ್ಲಿ ತಿಳಿಸಿದೆ.

ಲಾಕ್‌ಡೌನ್ ಬಳಿಕ ಎಫ್‌ಸಿಐ ಗೋದಾಮುಗಳು ತುಂಬಿದ್ದರೂ ಲಕ್ಷಾಂತರ ಬಡವರು ಹಸಿವಿನಿಂದ ಬಳಲುತ್ತಿದ್ದಾರೆ ಎಂಬ ವರದಿಗಳ ಕುರಿತು ಕಳೆದ ಕೆಲವು ವಾರಗಳಿಂದ ತೀವ್ರ ವಿವಾದ ಸೃಷ್ಟಿಯಾಗಿದೆ.

 ಲಾಕ್‌ಡೌನ್ ಆರಂಭವಾಗುತ್ತಿದ್ದಂತೆ ಸರಕಾರವು ದೇಶಾದ್ಯಂತ ಸುಮಾರು 80 ಕೋಟಿ ಜನರಿಗೆ ಮುಂದಿನ ಮೂರು ತಿಂಗಳ ಅವಧಿಗೆ ಉಚಿತ ರೇಷನ್ ಒದಗಿಸುವುದಾಗಿ ಭರವಸೆ ನೀಡಿತ್ತು. ಆದರೆ ಇದು ಪಡಿತರ ಚೀಟಿ ಹೊಂದಿರುವವರಿಗೆ ಮಾತ್ರ ದೊರೆಯುತ್ತಿದೆ. ಹೆಚ್ಚಿನ ವಲಸೆ ಕಾರ್ಮಿಕರ ಬಳಿ ಪಡಿತರ ಚೀಟಿಗಳು ಇಲ್ಲ,ಹೀಗಾಗಿ ಅವರು ಪಡಿತರದಿಂದ ವಂಚಿತರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X