Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗಂಜಿಮಠ : ಲಾಕ್‌ಡೌನ್ ಉಲ್ಲಂಘಿಸಿ...

ಗಂಜಿಮಠ : ಲಾಕ್‌ಡೌನ್ ಉಲ್ಲಂಘಿಸಿ ತೆರೆದುಕೊಂಡ ಬಿಗ್‌ಬ್ಯಾಗ್ಸ್ ಕಂಪೆನಿ

► ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿದ ಜಿಲ್ಲಾಡಳಿತ: ಆರೋಪ ► ಸಾರ್ವಜನಿಕರಿಂದ ತೀವ್ರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ20 April 2020 10:28 PM IST
share
ಗಂಜಿಮಠ : ಲಾಕ್‌ಡೌನ್ ಉಲ್ಲಂಘಿಸಿ ತೆರೆದುಕೊಂಡ ಬಿಗ್‌ಬ್ಯಾಗ್ಸ್ ಕಂಪೆನಿ

ಗುರುಪುರ, ಎ.20 : ಮಂಗಳೂರು ತಾಲೂಕಿನ ಗಂಜಿಮಠದ ಕೈಗಾರಿಕಾ ಪ್ರದೇಶದಲ್ಲಿರುವ ‘ಬಿಗ್‌ಬ್ಯಾಗ್ಸ್’ ಇಂಟರ್‌ನ್ಯಾಶನಲ್ ಕಂಪೆನಿ ಕಾರ್ಯಾಚರಿಸಲು ಸೋಮವಾರ ಸ್ಥಳೀಯ ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿದು ಜಿಲ್ಲಾಡಳಿತ ಅನುಮತಿ ನೀಡಿರುವುದರ ವಿರುದ್ಧ ಪರಿಸರವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈಗಲೂ ‘ಕೆಂಪು ವಲಯ’(ರೆಡ್ ಝೋನ್) ಎಂದೇ ಗುರುತಿಸಲ್ಪಟ್ಟ ಮಂಗಳೂರು ತಾಲೂಕಿನ ಗಂಜಿಮಠ ಸುತ್ತಲ ಪ್ರದೇಶದ ನಿವಾಸಿಗಳು ಕಳೆದೊಂಂದು ತಿಂಗಳಿಂದ ಕೆಲಸವಿಲ್ಲದೆ ಮನೆಯೊಳಗೆ ಲಾಕ್‌ಡೌನ್ ಆಗಿದ್ದರೂ ಕೂಡ ಹೊರಗಿಂದ ಬಂದು ಎರಡು ಪಾಳಿಯಲ್ಲಿ ಕೆಲಸ ಮಾಡುವ ಸುಮಾರು 3,000ರಷ್ಟು ಕಾರ್ಮಿಕರಿರುವ ಈ ಕಂಪೆನಿಗೆ ಅನುಮತಿ ನೀಡಿರುವುದು ಈಗ ಸಾರ್ವಜನಿಕ ವಲಯದಲ್ಲಿ ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ಈ ಹಿಂದೆ ಲಾಕ್‌ಡೌನ್ ಅವಧಿಯಲ್ಲೇ ಎರಡು ಬಾರಿ ಕಂಪೆನಿ ತೆರೆಯಲು ಪ್ರಯತ್ನ ನಡೆದಿತ್ತು. ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಗುರುಪುರ-ಕೈಕಂಬದ(ನಾಡಕಚೇರಿ) ಉಪತಹಶೀಲ್ದಾರ್ ಶಿವಪ್ರಸಾದ್ ನೇತೃತ್ವದ ತಂಡವು ಕಂಪೆನಿ ವಿರುದ್ಧ ಕ್ರಮ ಕೈಗೊಂಡಿತ್ತು. ಆದಾಗ್ಯೂ ಸೋಮವಾರ ಮತ್ತೆ ಈ ಕಂಪೆನಿಯ ಕಾರ್ಯಾಚರಿಸತೊಡಗಿದೆ.

ಆ ಹಿನ್ನೆಲೆಯಲ್ಲಿ ಮಂಗಳೂರು ತಹಶೀಲ್ದಾರ್, ಉಪ ತಹಶೀಲ್ದಾರ್ ಮತ್ತಿತರ ಅಧಿಕಾರಿಗಳ ತಂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ ಮಂಗಳೂರು ಸಹಾಯಕ ಆಯುಕ್ತರ ಆದೇಶದ ಮೇರೆಗೆ ಕಂಪೆನಿಯು ಕಾರ್ಯಾಚರಿಸುತ್ತಿರುವ ವಿಷಯ ಬೆಳಕಿಗೆ ಬಂದಿದೆ. ಸಾವಿರಾರು ಕಾರ್ಮಿಕರಿರುವ ಈ ಕಂಪೆನಿಗೆ ಕೆಲಸ ಮಾಡಲು ಅನುಮತಿ ನೀಡಿರುವ ಹಿರಿಯ ಅಧಿಕಾರಿಗಳು ಬೈಕಂಪಾಡಿ ಹಾಗೂ ಗ್ರಾಮೀಣ ಭಾಗಗಳಲ್ಲಿ ಏಳೆಂಟು ಕಾರ್ಮಿಕರಿರುವ ಸಣ್ಣಪುಟ್ಟ ಕೈಗಾರಿಕಾ ಘಟಕಗಳಿಗೆ ಅನುಮತಿ ನೀಡಬಹುದಲ್ಲವೇ? ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ. ಲಾಕ್‌ಡೌನ್ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಸ್ವತಃ ತಾನೇ ವಿಧಿಸಿದ ಕೆಲವು ನಿಯಮಾವಳಿಗಳನ್ನು ಉಲ್ಲಂಘಿಸಲಾಗುತ್ತಿದೆಯೇ ಎಂದೂ ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

ಲಾಕ್‌ಡೌನ್‌ಗೆ ಸಂಬಂಧಿಸಿದಂತೆ ಎ.15ರಂದು ಕೇಂದ್ರ ಸರಕಾರ ಹೊರಡಿಸಿದ ಪರಿಷ್ಕೃತ ನಿಯಮಾವಳಿಯಂತೆ ಗಂಜಿಮಠದ ಬಿಗ್‌ಬ್ಯಾಗ್ಸ್ ಕಂಪೆನಿ ಕಾರ್ಯಾಚರಿಸಲು ಆದೇಶ ನೀಡಲಾಗಿದೆ. ಅದಕ್ಕೂ ಕೆಲವು ಷರತ್ತು ವಿಧಿಸಲಾಗಿದೆ. ಅದರಂತೆ ಸೋಮವಾರ ಬಿಗ್‌ಬ್ಯಾಗ್ಸ್ ಕಂಪೆನಿಯು ತೆರೆದ ವೇಳೆ ಸ್ಥಳೀಯರಿಂದ ವಿರೋಧ ವ್ಯಕ್ತವಾದ ಬಗ್ಗೆ ಮಾಹಿತಿ ಲಭಿಸಿದೆ. ವಸ್ತುಸ್ಥಿತಿ ಅರಿಯಲು ತಾನು ಮಂಗಳವಾರ ಖುದ್ದು ಸ್ಥಳಕ್ಕೆ ಭೇಟಿ ನೀಡಲಿದ್ದೇನೆ. ಆ ಬಳಿಕ ಸೂಕ್ತ ನಿರ್ಧಾರ ತೆಗೆದುಕೊಳ್ಳುವೆ.
ಮದನ್ ಮೋಹನ್, ಸಹಾಯಕ ಆಯುಕ್ತರು
ಮಂಗಳೂರು ಉಪವಿಭಾಗ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X