ಮಡಿಕೇರಿ: 514 ಮಂದಿಗೆ ಗೃಹ ಸಂಪರ್ಕ ತಡೆ

ಮಡಿಕೇರಿ, ಎ.20 : ಕೊಡಗು ಜಿಲ್ಲೆಯಲ್ಲಿ ಒಟ್ಟು 514 ಮಂದಿ ಗೃಹ ಸಂಪರ್ಕ ತಡೆಯಲ್ಲಿದ್ದಾರೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ರಾಜ್ಯದ ಇತರೆ ಜಿಲ್ಲೆಗಳ 496, ಹೊರ ರಾಜ್ಯದ 18 ಮಂದಿ ಸಂಪರ್ಕ ತಡೆಯಲಿದ್ದು, ಇಲ್ಲಿಯವರೆಗೆ ಒಟ್ಟು 305 ಮಂದಿಯ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ.
234 ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿದ್ದು, 70 ಮಂದಿಯ ವರದಿ ನಿರೀಕ್ಷಿಸಲಾಗಿದೆ. ಪ್ರಸ್ತುತ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 20 ಮಂದಿ ದಾಖಲಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
Next Story





