Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಮಝಾನ್‌ನಲ್ಲಿ ಎಲ್ಲಿಯೂ ಸಾಮೂಹಿಕ...

ರಮಝಾನ್‌ನಲ್ಲಿ ಎಲ್ಲಿಯೂ ಸಾಮೂಹಿಕ ತರಾವೀಹ್ ನಮಾಝ್ ಬೇಡ : ಖಾಝಿ ಬೇಕಲ ಉಸ್ತಾದ್

ವಾರ್ತಾಭಾರತಿವಾರ್ತಾಭಾರತಿ21 April 2020 8:12 PM IST
share
ರಮಝಾನ್‌ನಲ್ಲಿ ಎಲ್ಲಿಯೂ ಸಾಮೂಹಿಕ ತರಾವೀಹ್ ನಮಾಝ್ ಬೇಡ : ಖಾಝಿ ಬೇಕಲ ಉಸ್ತಾದ್

ಮಂಗಳೂರು, ಎ. 21: ಕೊರೋನ ವೈರಸ್ ತಡೆಗಟ್ಟುವ ಸಲುವಾಗಿ ವಿಧಿಸಲ್ಪಟ್ಟ ಲಾಕ್‌ಡೌನ್‌ಗೆ ಅನುಗುಣವಾಗಿ ಈಗಾಗಲೆ ಮಸೀದಿಗಳಲ್ಲಿ ಸಾಮೂಹಿಕ ನಮಾಝ್‌ಗೆ ನಿರ್ಬಂಧ ವಿಧಿಸಲಾಗಿದೆ. ಈ ನಿರ್ಬಂಧವನ್ನು ಮೇ 3ರವರೆಗೆ ವಿಸ್ತರಿಸಿರುವ ಕಾರಣ ರಮಝಾನ್‌ನ ಸಾಮೂಹಿಕ ತರಾವೀಹ್‌ಗೂ ಇದು ಅನ್ವಯವಾಗಲಿದೆ. ಹಾಗಾಗಿ ಯಾರೂ ಕೂಡ ರಮಝಾನ್‌ನಲ್ಲಿ ಎಲ್ಲಿಯೂ ಸಾಮೂಹಿಕ ತರಾವೀಹ್ ನಮಾಝ್ ಮಾಡದೆ ಸರಕಾರದ ನಿಯಮಾವಳಿಯನ್ನು ಪಾಲಿಸಬೇಕಾಗಿದೆ ಎಂದು ಉಡುಪಿ ಸಂಯುಕ್ತ ಖಾಝಿ ಅಲ್‌ಹಾಜ್ ಬೇಕಲ ಇಬ್ರಾಹೀಂ ಮುಸ್ಲಿಯಾರ್ ತಿಳಿಸಿದ್ದಾರೆ.

ಎ. 24 ಅಥವಾ 25ರಂದು ರಮಝಾನ್ ಉಪವಾಸ ಆರಂಭಗೊಳ್ಳಲಿದೆ. ಸಾಮಾನ್ಯವಾಗಿ ರಮಝಾನ್‌ನಲ್ಲಿ ತರಾವೀಹ್ ನಮಾಝ್‌ಗೆ ವಿಶೇಷ ಮಹತ್ವ ನೀಡಲಾಗುತ್ತಿದೆ. ಮಸೀದಿಗಳಲ್ಲಿ ಸಾಮೂಹಿಕವಾಗಿಯೇ ಇದನ್ನು ನಿರ್ವಹಿಸಲಾಗುತ್ತದೆ. ಆದರೆ ಈ ಬಾರಿ ಕೊರೋನ ವೈರಸ್ ಹಿನ್ನೆಲೆಯಲ್ಲಿ ಮಸೀದಿಗಳಲ್ಲಿ ನಮಾಝ್ ಸಹಿತ ಎಲ್ಲಾ ಸಾಮೂಹಿಕ ಕಾರ್ಯಕ್ರಮಗಳಿಗೂ ನಿರ್ಬಂಧ ಹೇರಲಾಗಿದೆ. ಈ ಮಧ್ಯೆ ಕರ್ನಾಟಕ ಕರಾವಳಿ ತೀರದ ಅದರಲ್ಲೂ ಮಂಗಳೂರು ನಗರ ಸಹಿತ ಪ್ರಮುಖ ಜಂಕ್ಷನ್‌ಗಳ ಫ್ಲಾಟ್‌ಗಳಲ್ಲಿ ರಮಝಾನ್‌ನಲ್ಲಿ ಸಾಮೂಹಿಕ ತರಾವೀಹ್ ನಮಾಝ್ ನಿರ್ವಹಿಸುವ ಕೆಲವರು ಸಮಾಲೋಚಿಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸುರಕ್ಷಿತ ಅಂತರ ಕಾಪಾಡದೆ ಪರಸ್ಪರ ಬೆರೆಯುವುದರಿಂದ ಕೊರೋನ ವೈರಸ್ ರೋಗ ಹರಡುವ ಸಾಧ್ಯತೆ ನಿಚ್ಛಳವಾಗಿರುವುದರಿಂದ ನಾಲ್ಕೈದು ಮನೆಯವರು ಒಟ್ಟಾಗಿ ಒಂದು ಮನೆಯಲ್ಲಿ ಅಥವಾ ಫ್ಲಾಟ್‌ಗಳಲ್ಲಿ ಸಾಮೂಹಿಕ ತರಾವೀಹ್ ನಮಾಝ್ ಮಾಡಬಾರದು. ಬದಲಾಗಿ ಎಲ್ಲರೂ ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತ ಅಂತರ ಕಾಪಾಡಿಕೊಂಡೇ ನಮಾಝ್ ನಿರ್ವಹಿಸಬೇಕು ಎಂದು ಖಾಝಿ ಸೂಚಿಸಿದ್ದಾರೆ.

ಇದು ಯಾವುದೇ ಸಮುದಾಯದ ಅಥವಾ ಯಾರದೇ ಪ್ರಶ್ನೆಯಲ್ಲ. ಸಮಾಜದ ಸ್ವಾಸ್ಥದ ಪ್ರಶ್ನೆಯಾಗಿದೆ. ಇಲ್ಲಿ ಮಾನವನ ಪ್ರಾಣದ ರಕ್ಷಣೆ ಮುಖ್ಯವಾಗಿದೆಯೇ ವಿನಃ ಸಾಮೂಹಿಕವಾಗಿ ಧಾರ್ಮಿಕ ವಿಧಿವಿಧಾನ ನಡೆಸುವುದು ಮುಖ್ಯವಾಗಬಾರದು. ಸಮಾಜದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತರು ಜೊತೆಯಾಗಿ ಬಾಳುವಾಗ ಸುರಕ್ಷಿತೆಯೂ ಮುಖ್ಯವಾಗಿದೆ. ಗುಂಪು ಸೇರುವುದರಿಂದ ಸೋಂಕು ಬೇಗ ಹರಡುವ ಸಾಧ್ಯತೆ ನಿಚ್ಛಳವಾಗಿದೆ. ಹಾಗಾಗಿ ಗುಂಪು ಸೇರಿ ಪ್ರಾರ್ಥಿಸದೆ ವೈಯಕ್ತಿಕವಾಗಿ ನಮಾಝ್ ಮತ್ತಿತರ ಧಾರ್ಮಿಕ ಕ್ರಿಯೆಗಳನ್ನು ನಡೆಸುವ ಮೂಲಕ ಮುಸ್ಲಿಮರು ಸಮಾಜಕ್ಕೆ ಮಾದರಿಯಾಗಬೇಕಿದೆ ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X