ಎ.27ರೊಳಗೆ ಪಡಿತರ ಪಡೆಯಿರಿ: ಉಡುಪಿ ಜಿಲ್ಲಾಧಿಕಾರಿ
ಉಡುಪಿ, ಎ.21: ನ್ಯಾಯಬೆಲೆ ಅಂಗಡಿಗಳಲ್ಲಿ ಮೇ ತಿಂಗಳಲ್ಲಿ ಪ್ರಧಾನ ಮಂತ್ರಿ ಗರೀಬ್ ಅನ್ನ ಯೋಜನೆಯಡಿ ಎಪ್ರಿಲ್ ಮತ್ತು ಮೇ ತಿಂಗಳ ಪಡಿತರ ವನ್ನು, ಇದೇ ತಿಂಗಳ ಕೊನೆಯೊಳಗೆ ನ್ಯಾಯಬೆಲೆ ಅಂಗಡಿಗಳಿಗೆ ಸರಬರಾಜು ಮಾಡಬೇಕಿರುವುದರಿಂದ, ಎಲ್ಲಾ ಪಡಿತರ ಚೀಟಿದಾ ರರು ಎ.27ರೊಳಗೆ ಎಪ್ರಿಲ್ ತಿಂಗಳ ಪಡಿತರವನ್ನು ಕಡ್ಡಾಯವಾಗಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
Next Story





