ಆಶಾ ಕಾರ್ಯಕರ್ತೆಯ ಕರ್ತವ್ಯಕ್ಕೆ ಅಡ್ಡಿ: ಆರೋಪಿಗಳಿಗೆ ಜಾಮೀನು
ಮಂಗಳೂರು, ಎ.21: ನಗರ ಹೊರವಲಯದ ಮಲ್ಲೂರು ಬಳಿ ಕೆಲವು ದಿನಗಳ ಹಿಂದೆ ಆಶಾ ಕಾರ್ಯಕರ್ತೆಯೊಬ್ಬರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ಇಬ್ಬರಿಗೆ ಜಾಮೀನು ಲಭಿಸಿದೆ.
ಮಲ್ಲೂರಿನ ಆಶಾ ಕಾರ್ಯಕರ್ತೆ ವಸಂತಿ ಎಂಬವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಅರೋಪದ ಮೇಲೆ ಮಲ್ಲೂರು ನಿವಾಸಿಗಳಾದ ಇಸ್ಮಾಯೀಲ್ (45) ಮತ್ತು ಅಶ್ರಫ್ (32) ಎಂಬವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದ ಮಂಗಳೂರು ಗ್ರಾಮಾಂತರ ಪೊಲೀಸರು ಎ.11ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈವರೆಗೂ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗಳ ಪರ ನ್ಯಾಯವಾದಿ ಇಲ್ಯಾಸ್ ವಾಮಂಜೂರು ವಾದಿಸಿದ್ದಾರೆ.
Next Story





