Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುಂದಿನ ಅನಾಹುತಗಳಿಗೆ ರಾಜ್ಯ ಸರಕಾರವೇ...

ಮುಂದಿನ ಅನಾಹುತಗಳಿಗೆ ರಾಜ್ಯ ಸರಕಾರವೇ ಹೊಣೆ: ಕುಮಾರಸ್ವಾಮಿ ಎಚ್ಚರಿಕೆ

ಪಾದರಾಯನಪುರ ಆರೋಪಿಗಳನ್ನು ರಾಮನಗರ ಜೈಲಿಗೆ ಶಿಫ್ಟ್

ವಾರ್ತಾಭಾರತಿವಾರ್ತಾಭಾರತಿ21 April 2020 11:12 PM IST
share
ಮುಂದಿನ ಅನಾಹುತಗಳಿಗೆ ರಾಜ್ಯ ಸರಕಾರವೇ ಹೊಣೆ: ಕುಮಾರಸ್ವಾಮಿ ಎಚ್ಚರಿಕೆ

ಬೆಂಗಳೂರು, ಎ. 21: ನಗರದ ಪಾದರಾಯನಪುರ ಗಲಾಟೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಆರೋಪಿಗಳನ್ನು ರಾಮನಗರ ಜಿಲ್ಲಾ ಕಾರಾಗೃಹದಲ್ಲಿ ಇರಿಸುವುದರಿಂದಾಗುವ ಮುಂದಿನ ಅನಾಹುತಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಮತ್ತು ರಾಜ್ಯ ಸರಕಾರವೇ ನೇರ ಹೊಣೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಕೊರೋನ ಸೋಂಕಿನ ವಿಷಯದಲ್ಲಿ ಹಸಿರು ವಲಯವಾಗಿರುವ ರಾಮನಗರದಲ್ಲಿ ಕ್ವಾರಂಟೈನ್‍ಗೆ ಒಳಗಾಗಬೇಕಿದ್ದ ಗಲಭೆಕೋರರನ್ನು ರಾಮನಗರ ಜೈಲಿನಲ್ಲಿರಿಸುವುದು ವಿವೇಕಯುತ ನಿರ್ಧಾರವಲ್ಲ. ಚೋದ್ಯವೆಂದರೆ ರಾಮನಗರ ಜಿಲ್ಲಾ ಕಾರಾಗೃಹದಲ್ಲಿದ್ದ ಕೈದಿಗಳನ್ನು ಸ್ಥಳಾಂತರಿಸಿ, ಪಾದರಾಯನಪುರ ಪುಂಡರನ್ನು ರಾಮನಗರ ಜೈಲಿನಲ್ಲಿ ಒಂದೇ ಕೊಠಡಿಯಲ್ಲಿ 15ಕ್ಕೂ ಹೆಚ್ಚು ಮಂದಿಯನ್ನು ಇರಿಸುವ ಮೂಲಕ ಕೊರೋನ ಭೀತಿ ಎದುರಾಗಿದೆ.

ಇದರಿಂದ ಜಿಲ್ಲೆಯ ಜನತೆ ಭಯಗೊಂಡಿದ್ದಾರೆ. ರಾಜ್ಯ ಸರಕಾರ ತಕ್ಷಣವೇ ತನ್ನ ನಿರ್ಧಾರವನ್ನು ಬದಲಿಸಬೇಕು. ಸೋಮವಾರ ಸೆರೆ ಸಿಕ್ಕ 54 ಮಂದಿ ಆರೋಪಿಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರದ ಬದಲಿಗೆ ರಾಮನಗರ ಕಾರಾಗೃಹದಲ್ಲಿರಿಸುವ ನಿರ್ಧಾರ ಕೈಗೊಂಡವರು ಯಾರು? ನನಗಿರುವ ಮಾಹಿತಿ ಪ್ರಕಾರ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್. ಇದು ದುಡುಕು ನಿರ್ಧಾರ. ಮುಖ್ಯಮಂತ್ರಿ, ಗೃಹ ಸಚಿವರು ಹಾಗೂ ಗೃಹ ಇಲಾಖೆ ಕಾರ್ಯದರ್ಶಿ ಅವರೊಂದಿಗೆ ಎರಡೆರಡು ಬಾರಿ ದೂರವಾಣಿಯಲ್ಲಿ ಚರ್ಚಿಸಿದ್ದೇನೆ. ರಾಮನಗರ ಜಿಲ್ಲೆಯ ಜನರು ಹಾಗೂ ಜನಪ್ರತಿನಿಧಿಗಳು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಪ್ರತಿಭಟನೆಗೆ ಇಳಿಯದಂತೆ ಮನವೊಲಿಸಿದ್ದೇನೆ. ಇದನ್ನು ಸರಕಾರದ ಗಮನಕ್ಕೆ ತರಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಪಾದರಾಯನಪುರ ಗಲಾಟೆಗೆ ಸಂಬಂಧಪಟ್ಟಂತೆ ಒಟ್ಟು ಈವರೆಗೆ ನೂರಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ನ್ಯಾಯಾಂಗ ಬಂಧನಕ್ಕೆ ಒಳಗಾಗುವ ಎಲ್ಲರನ್ನು ಬೆಂಗಳೂರಿನ ಯಾವುದಾದರೂ ಸರಕಾರಿ ಆಸ್ಪತ್ರೆಯಲ್ಲಿ ಅಥವಾ ಹಾಸ್ಟೆಲ್ ಕಟ್ಟಡದಲ್ಲಿ ಸೂಕ್ತ ಬಂದೋಬಸ್ತ್ ನೊಂದಿಗೆ ಇಡುವುದು ಸೂಕ್ತ. ರಾಜ್ಯ ಸರಕಾರ ಇಂತಹ ಸೂಕ್ಷ್ಮ ವಿಚಾರದಲ್ಲಿ ಜನತೆಯೊಂದಿಗೆ ಚೆಲ್ಲಾಟವಾಡದೆ ತಕ್ಷಣವೇ ತುರ್ತು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ರಾಮನಗರ ಜಿಲ್ಲಾ ಕಾರಾಗೃಹದಲ್ಲಿ ಅಡುಗೆಯವರು ಮತ್ತು ಶುಚಿತ್ವದ ಸಿಬ್ಬಂದಿ ವಾಸಿಸುತ್ತಿದ್ದು, ಜನರೊಂದಿಗೆ ಸಂಪರ್ಕದಲ್ಲಿರುತ್ತಾರೆ. ಗಲಭೆಕೋರರಿಂದ ಅಕಸ್ಮಾತ್ ಕೊರೋನ ಸೋಂಕು ತಗುಲಿದರೆ ಜಿಲ್ಲೆ ಸ್ವಾಸ್ಥ್ಯ ಹೆದಗೆಡುತ್ತದೆ ಎಂಬ ಕನಿಷ್ಟ ಪ್ರಜ್ಞೆ ಸರಕಾರಕ್ಕೆ ಬೇಡವೇ ಎಂದು ಕುಮಾರಸ್ವಾಮಿ ಪ್ರಕಟಣೆಯಲ್ಲಿ ಕಿಡಿಕಾರಿದ್ದಾರೆ.       

share
ವಾರ್ತಾಭಾರತಿ
ವಾರ್ತಾಭಾರತಿ
Next Story
X