Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪವಿತ್ರ ರಮಝಾನ್; ಲಾಕ್‍ಡೌನ್...

ಪವಿತ್ರ ರಮಝಾನ್; ಲಾಕ್‍ಡೌನ್ ಮುಗಿಯುವವರೆಗೂ ಮನೆಯಲ್ಲೇ ನಮಾಝ್ ಮಾಡಿ : ಖಾಝಿ ಮೌಲಾನ್ ಕ್ವಾಜಾ ಅಕ್ರಮಿ

ವಾರ್ತಾಭಾರತಿವಾರ್ತಾಭಾರತಿ21 April 2020 11:12 PM IST
share
ಪವಿತ್ರ ರಮಝಾನ್; ಲಾಕ್‍ಡೌನ್ ಮುಗಿಯುವವರೆಗೂ ಮನೆಯಲ್ಲೇ ನಮಾಝ್ ಮಾಡಿ : ಖಾಝಿ ಮೌಲಾನ್ ಕ್ವಾಜಾ ಅಕ್ರಮಿ

ಭಟ್ಕಳ : ರಮಝಾನ್ ಮಾಸವು ಇಡಿ ಜಗತ್ತಿನ ಮುಸ್ಲಿಮರ ಪಾಲಿಗೆ ಅತ್ಯಂತ ಪುಣ್ಯದಾಯಕ ಹಾಗೂ ಪವಿತ್ರವಾಗಿದ್ದು, ಸದ್ಯದ ಕೊರೋನ ಸಂಕಷ್ಟದ ಪರಿಸ್ಥಿತಿಯಲ್ಲಿ ಲಾಕ್ ಡೌನ್ ಮುಗಿಯುವವರೆಗೆ ವಿಶೇಷ ತರಾವಿಹ್ ಪ್ರಾರ್ಥನೆ ಸೇರಿದಂತೆ ಎಲ್ಲ ನಮಾಝ್ ಗಳನ್ನು ತಮ್ಮ ತಮ್ಮ ಮನೆಯಲ್ಲಿ ನಿರ್ವಹಿಸುವಂತೆ ಜಮಾಅತುಲ್ ಮುಸ್ಲಿಮೀನ್ ಮರ್ಕಝಿ ಖಲಿಫಾ ಜಮಾಆತ್ ನ ಪ್ರಧಾನ ಖಾಜಿ ಮೌಲಾನ ಕ್ವಾಜಾ ಮುಹಿದ್ದೀನ್ ಅಕ್ರಮಿ ಮದನಿ ಮನವಿ ಮಾಡಿಕೊಂಡಿದ್ದಾರೆ.

ಅವರು ಸರ್ವ ಜಮಾಅತ್ ನ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದರು. ಇಂದು ಅಧಿಕಾರಿಗಳಿಂದ ಹಿಡಿದು ಸಾಮಾನ್ಯ ಜನರು, ವಿಜ್ಞಾನಿಗಳು ಕೂಡ ಈ ರೋಗದಿಂದ ಅತ್ಯಂತ ತೊಂದರೆಯಲ್ಲಿದ್ದಾರೆ. ಇದರ ಸಂಪೂರ್ಣ ಚಿಕಿತ್ಸೆಯನ್ನು ಇದುವರೆಗೂ ಜಗತ್ತಿನಲ್ಲಿ ಯಾರೂ ಕೂಡ ಕಂಡು ಹಿಡಿಯಲು ಆಗುತ್ತಿಲ್ಲ ಈ ರೋಗದ ಮುಂದೆ ಎಲ್ಲರೂ ಕೈಚೆಲ್ಲಿ ಕುಳಿತುಕೊಂಡಿದ್ದಾರೆ. ಅದಕ್ಕಾಗಿ ಸರ್ಕಾರ ಲಾಕ್‍ಡೌನ್ ಹೇರಿದೆ ಎಲ್ಲರೂ ತಮ್ಮ ತಮ್ಮ ಮನೆಯಲ್ಲೇ ಇದ್ದುಕೊಂಡು ಧಾರ್ಮಿಕ ಆಚರಣೆಗಳನ್ನು ಮಾಡಬೇಕಾಗಿದೆ ರಮಝಾನ್ ಮಾಸವು ಇಡೀ ಜಗತ್ತಿನ ಮುಸ್ಲಿಮರ ಪಾಲಿಗೆ ಅತ್ಯಂತ ಪವಿತ್ರವಾಗಿದ್ದು ಈ ತಿಂಗಳಲ್ಲಿ ಮಾಡುವ ಆರಾಧನೆಗಳಿಗೆ ಅಲ್ಲಾಹನ ಬಳಿ ವಿಶೇಷವಾದ ಅನುಗ್ರಹಗಳು ಪ್ರಾಪ್ತಿಯಾಗಲಿವೆ. ನಿತ್ಯವೂ ನಡೆಯುವ ಸಾಮೂಹಿಕ ಆರಾಧನಾ ಕರ್ಮಗಳು ಲಾಕ್‍ಡೌನ್ ಅವಧಿ ಮುಗಿಯವವರೆಗೂ ತಮ್ಮ ತಮ್ಮ ಮನೆಗಳಲ್ಲಿ ಆಚರಿಸಿ ಯಾವುದೇ ಕಾರಣಕ್ಕೂ  ನಿಯಮಗಳನ್ನು ಮೀರಿ ವರ್ತಿಸದಿರಿ ಎಂದು ಮೌಲಾನ ಮುಸ್ಲಿಮ ಸಮುದಾಯಕ್ಕೆ ಸಂದೇಶವನ್ನು ನೀಡಿದ್ದಾರೆ. 

ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ನೇತೃತ್ವದಲ್ಲಿ ಖಾಝಿಗಳೊಂದಿಗೆ ಸಭೆ ನಡೆಸಿದ್ದು ಈ ಕುರಿತು ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ ಅವರು, ಲಾಕ್‍ಡೌನ್ ಅವಧಿಯಲ್ಲಿ ಯಾವ ರೀತಿ ನಾವು ಇದುವರೆಗೂ ನಡೆದುಕೊಂಡಿದ್ದೇವೆಯೂ ಅದೇ ರೀತಿ ತಾವು ರಮಝಾನ ಸಮಯದಲ್ಲೂ ಶುಕ್ರವಾರದ ನಮಾಝ್ ಸೇರಿದಂತೆ ರಾತ್ರಿ ನಡೆಯುವ ತರಾವಿಹ್ ನಮಾಝ್‍ಗಳನ್ನು ಮನೆಯಲ್ಲಿ ನಿರ್ವಹಿಸಿ, ಸ್ತ್ರೀಯರು ಅಕ್ಕಪಕ್ಕದ ಮನೆಗಳಲ್ಲಿ ಸೇರದೆ ತಮ್ಮ ತಮ್ಮ ಮನೆಯಲ್ಲಿ ಪ್ರಾರ್ಥನೆಗಳನ್ನು ಈಡೇರಿಸಿಕೊಳ್ಳಬೇಕು, ಯುವಕರು ರಾತ್ರಿ ಸಮಯದಲ್ಲಿ ಅಲ್ಲಲ್ಲಿ ಗುಂಪೂಗೂಡಿ ನಿಂತುಕೊಳ್ಳುವುದು, ಹರಟೆ ಹೊಡೆಯುವುದು ಕೂಡ ನಿಯಮಕ್ಕೆ ವಿರುದ್ಧವಾಗಿದ್ದು ಅದನ್ನು ಕೂಡ ಈ ರಮಝಾನ್ ಮಾಸದಲ್ಲಿ ವರ್ಜಿಸಬೇಕು. ರಮಝಾನ ಮಾಸದಲ್ಲಿ ಅತಿ ಹೆಚ್ಚು ಪ್ರಾರ್ಥನೆಗಳು ಸ್ವೀಕರಿಸಲ್ಪಡುತ್ತವೆ. ಎಲ್ಲರೂ ಕೂಡ ಮಾನವಕುಲಕ್ಕೆ ಬಂದಿರುವ ಈ ಸಂಕಷ್ಟ ನಿವಾರಣೆಗಾಗಿ ಉಪವಾಸ ಇಡುವ ಮತ್ತು ತೊರೆಯುವ ಸಮಯದಲ್ಲಿ ದೇವನಲ್ಲಿ ಪ್ರಾರ್ಥಿಸಬೇಕೆಂದು ಅವರು ಮನವಿ ಮಾಡಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X