ಕೊರೋನ ಸೋಂಕಿಗೆ ಮಹಿಳೆ ಸಾವು ಪ್ರಕರಣ: ಫೋಟೊ ಶೇರ್ ಮಾಡಿದ ಇಬ್ಬರ ವಿರುದ್ಧ ಪ್ರಕರಣ ದಾಖಲು
ಬಂಟ್ವಾಳ, ಎ.21: ಕೋವಿಡ್ - 19 (ಕೊರೋನ) ವೈರಸ್ ಸೋಂಕಿನಿಂದ ಮೃತಪಟ್ಟ ಬಂಟ್ವಾಳ ಪೇಟೆಯ ಮಹಿಳೆಯ ಫೋಟೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ ಇಬ್ಬರ ಮೇಲೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಲಿಯಂ ಪಿಂಟೊ ಮತ್ತು ಮತ್ತೋರ್ವ ವ್ಯಕ್ತಿಯ ಮೇಲೆ ಪ್ರಕರಣ ದಾಖಲಾಗಿದೆ. ಈ ಇಬ್ಬರು ಮೃತ ಮಹಿಳೆಯ ಹಾಗೂ ಅವರ ಗಂಡನ ಭಾವಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಠಾಣೆಯಲ್ಲಿ ಐಪಿಸಿ ಕಾಲಂ 505(1)(ಬಿ) ಹಾಗೂ 51(ಡಿ) ವಿಪತ್ತು ನಿರ್ವಹಣಾ ಕಾಯ್ದೆ 2005ರಂತೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





