Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರಚೋದನಕಾರಿ ಹೇಳಿಕೆ ನೀಡುವ ಬಿಜೆಪಿ...

ಪ್ರಚೋದನಕಾರಿ ಹೇಳಿಕೆ ನೀಡುವ ಬಿಜೆಪಿ ನಾಯಕರ ವಿರುದ್ಧ ಸಿಎಂ ಕ್ರಮ ಕೈಗೊಳ್ಳಲಿ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ21 April 2020 11:35 PM IST
share
ಪ್ರಚೋದನಕಾರಿ ಹೇಳಿಕೆ ನೀಡುವ ಬಿಜೆಪಿ ನಾಯಕರ ವಿರುದ್ಧ  ಸಿಎಂ ಕ್ರಮ ಕೈಗೊಳ್ಳಲಿ: ಡಿ.ಕೆ.ಶಿವಕುಮಾರ್

ಬೆಂಗಳೂರು, ಎ.21: ಪಾದರಾಯನಪುರ ಘಟನೆಗೆ ಒಂದು ಸಮುದಾಯವನ್ನು ಹೊಣೆಯಾಗಿಸುವ ಮೂಲಕ ಸಮಾಜದ ಸಾಮರಸ್ಯವನ್ನು ಕದಡಲಾಗುತ್ತಿದೆ. ಕೆಲವು ವ್ಯಕ್ತಿಗಳ ಕೃತ್ಯವನ್ನು ಒಟ್ಟು ಸಮುದಾಯದ ಕೃತ್ಯ ಎನ್ನುವಂತೆ ಬಿಂಬಿಸುತ್ತಿದ್ದಾರೆ. ಇಂತಹ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಬಿಜೆಪಿ ರಾಜ್ಯ ನಾಯಕರ ವಿರುದ್ಧ ಮುಖ್ಯಮಂತ್ರಿ ಕ್ರಮ ಕೈಗೊಳ್ಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಮಂಗಳವಾರ ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು ಆಯೋಜಿಸಿದ್ದ 10 ಸಾವಿರ ಬಡ ಕುಟುಂಬಗಳಿಗೆ ದಿನಸಿ ವಿತರಣೆ ಮಾಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಸರಕಾರ ಲಾಕ್‍ಡೌನ್ ಮುಂದುವರೆಸಿರುವುದರಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು, ಕೂಲಿ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳ ನೆರವಿಗೆ ಮುಂದಾಗಬೇಕು. ಎಲ್ಲ ಇಲಾಖೆಗಳ ಸಿಬ್ಬಂದಿಯನ್ನು ಬಳಸಿಕೊಮಡು ಅವರಿಗೆ ದಿನಬಳಕೆ ವಸ್ತುಗಳನ್ನು ಪೂರೈಕೆ ಮಾಡಬೇಕು ಎಂದು ಅವರು ಹೇಳಿದರು.

ಕೊರೋನ ಬಿಕ್ಕಟ್ಟಿನ ಸಮಯದಲ್ಲಿ ಸಾರ್ವಜನಿಕರ ಆರೋಗ್ಯ ರಕ್ಷಣೆ, ಕಾನೂನು ಸುವ್ಯವಸ್ಥೆ ಕಾಪಾಡುವುದು, ಆಡಳಿತದಲ್ಲಿ ಪಾರದರ್ಶಕತೆ ಉಳಿಸಿಕೊಳ್ಳುವುದು ಸರಕಾರದ ಜವಾಬ್ದಾರಿ. ಅದರಂತೆ, ಸರಕಾರ ಕೆಲಸ ಮಾಡುತ್ತಿದ್ದು, ಆರೋಗ್ಯ ರಕ್ಷಣೆ, ಆರ್ಥಿಕ ಸುಧಾರಣೆಗಾಗಿ ಸರಕಾರ ಕೈಗೊಳ್ಳುವ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಶಿವಕುಮಾರ್ ತಿಳಿಸಿದರು.

ಸಾರ್ವಜನಿಕರಿಂದ ಹಲವು ಬೇಡಿಕೆಗಳು ಬಂದಿವೆ, ಸರಕಾರ ಎಲ್ಲವನ್ನೂ ಒಂದೇ ದೃಷ್ಟಿಕೋನದಲ್ಲಿ ನೋಡಬೇಕು. ಪ್ರತಿಪಕ್ಷವಾಗಿ ಸರಕಾರಕ್ಕೆ ಸಹಕಾರ ನೀಡುವ ಜೊತೆಗೆ ಅಗತ್ಯ ಸಲಹೆಗಳನ್ನೂ ನೀಡಿದ್ದೇವೆ. ಅವುಗಳನ್ನು ಪಾಲಿಸುವುದು ಬಿಡುವುದು ಸರಕಾರಕ್ಕೆ ಬಿಟ್ಟ ವಿಚಾರ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಮಾಜಿ ಸಚಿವ ರಾಮಲಿಂಗಾರೆಡ್ಡಿ, ಮುಖಂಡರಾದ ಅನ್ಸರ್ ಪಾಷ, ಗುರಪ್ಪ ನಾಯ್ಡು ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X