Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಂಬೈ ಕನ್ನಡಿಗ, ಯಕ್ಷಗಾನ ಸಂಘಟಕ...

ಮುಂಬೈ ಕನ್ನಡಿಗ, ಯಕ್ಷಗಾನ ಸಂಘಟಕ ಎಚ್.ಬಿ.ಎಲ್ ರಾವ್ ನಿಧನ

ವಾರ್ತಾಭಾರತಿವಾರ್ತಾಭಾರತಿ22 April 2020 10:04 PM IST
share
ಮುಂಬೈ ಕನ್ನಡಿಗ, ಯಕ್ಷಗಾನ ಸಂಘಟಕ ಎಚ್.ಬಿ.ಎಲ್ ರಾವ್ ನಿಧನ

ಮುಂಬೈ, ಎ.22: ಕನ್ನಡ ಭಾಷೆ, ಸಾಹಿತ್ಯ, ಕರಾವಳಿಯ ಯಕ್ಷಗಾನವನ್ನು ಮುಂಬೈ ಮಹಾನಗರದಲ್ಲಿ ಬೆಳಗಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟ ಹಿರಿಯ ಮುಂಬೈ ಕನ್ನಡಿಗ, ಸಂಘಟಕ, ಸಾಹಿತ್ಯ ಪ್ರಸಾರಕ ಎಚ್.ಬಿ.ಎಲ್. ರಾವ್ (87) ಅವರು ಬುಧವಾರ ಮುಂಜಾನೆ ಮುಂಬೈ ಉಪನಗರದ ನವಿಮುಂಬೈ ವಾಶಿ ನೆರೂಳ್‌ನ ಎಂಜಿಎಂ ಆಸ್ಪತ್ರೆಯಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾದರು. ಅವರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಎಚ್‌ಬಿಎಲ್ ರಾವ್ ಎಂದೇ ಕನ್ನಡಿಗರಿಗೆ ಹಾಗೂ ಮುಂಬೈಯ ಅನ್ಯಭಾಷಿಗರಿಗೆ ಚಿರಪರಿಚಿತರಾದ ಹೆಜಮಾಡಿ ಬಾಗಿಲ್ತಾಯ ಲಕ್ಷ್ಮೀ ನಾರಾಯಣ ರಾವ್ ಕನ್ನಡ ಸಾಹಿತ್ಯ ಪರಿಷತ್‌ನ ಮಹಾರಾಷ್ಟ್ರ ಘಟಕದ ಅಧ್ಯಕ್ಷರಾಗಿ, ಮುಂಬೈ ಪದವೀಧರ ಯಕ್ಷಗಾನ ಮಂಡಳಿ ಸ್ಥಾಪಿಸಿ ಆ ಮೂಲಕ ಕರಾವಳಿ ಕಲೆಯ ಸಂವರ್ಧನೆ, ಪ್ರಸಾರ ಹಾಗೂ ಪ್ರದರ್ಶನಕ್ಕೆ ಅವಿರತವಾಗಿ ಶ್ರಮಿಸಿದ್ದರು.

ಹೆಜಮಾಡಿಯಲ್ಲಿ ಎಸೆಸೆಲ್ಸಿ ಮುಗಿಸಿ, ಭವಿಷ್ಯವನ್ನು ಅರಸಿ ಮೊದಲು ಚೆನ್ನೈ, ನಂತರ ಕಲ್ಲಿಕೋಟೆ ಕೊನೆಗೆ 1957 ಮುಂಬೈಗೆ ತೆರಳಿದ ರಾವ್, ಅಲ್ಲಿ ದುಡಿಯುತ್ತಾ ಬಿ.ಎ. ಹಾಗೂ ಮುಂಬೈ ವಿವಿಯಿಂದ ಕಾನೂನು ಪದವಿ ಪಡೆದರು. ಮುಂಬೈಯ ಬಿಲ್ಲವರ ಅಸೋಸಿಯೇಷನ್, ಮೊಗವೀರ ಸಂಘ ಹಾಗೂ ಬಂಟರ ಸಂಘದ ರಾತ್ರಿ ಶಾಲೆಗಳಲ್ಲಿ ಅವರು ಶಿಕ್ಷಕರಾಗಿ 15 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

ಕರಾವಳಿಯ ಯಕ್ಷಗಾನ ಕಲೆಯನ್ನು ಅಪಾರವಾಗಿ ಪ್ರೀತಿಸುತಿದ್ದ ಇವರು 1973ರಲ್ಲಿ ಪದವೀಧರ ಯಕ್ಷಗಾನ ಮಂಡಳಿಯನ್ನು ಸ್ಥಾಪಿಸಿ ಅದರ ಅಧ್ಯಕ್ಷರಾಗಿದ್ದು ನಿರಂತರ ಯಕ್ಷಗಾನ ಸಂಬಂಧಿ ಚಟುವಟಿಕೆಗಳಲ್ಲಿ ನಿರತರಾಗಿ ದ್ದರಲ್ಲದೇ, ಯಕ್ಷಗಾನ ಪ್ರದರ್ಶನ, ಕಲಿಕೆ, ಸಮ್ಮೇಳನನ್ನು ನಡೆಸಿಕೊಂಡು ಬಂದಿದ್ದರು. ಯಕ್ಷಗಾನವನ್ನು ದೇಶವಿದೇಶಗಳಲ್ಲಿ ಜನಪ್ರಿಯಗೊಳಿಸಲು ಶ್ರಮಿಸಿದ್ದರು. 140ಕ್ಕೂ ಅಧಿಕ ಅಪ್ರಕಟಿತ ಯಕ್ಷಗಾನ ಪ್ರಸಂಗಗಳನ್ನು ಅವರು ಪ್ರಕಟಿಸಿದ್ದಾರೆ. ಹತ್ತಾರು ಯಕ್ಷಗಾನ ಸಮ್ಮೇಳನಗಳನ್ನು ನಡೆಸಿ ಅದರ ನೆನಪಿನ ಸಂಪುಟ ತಂದಿದ್ದಾರೆ.

ಕನ್ನಡ, ತುಳು ಸಾಹಿತ್ಯ, ಯಕ್ಷಗಾನ, ಗಮಕ ಸಾಹಿತ್ಯ, ಸಾಮಾಜಿಕ, ಧಾರ್ಮಿಕ ಆಧ್ಯಾತ್ಮ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿದ್ದಾರೆ. ಪ್ರಕಾಶಕರಾಗಿ ಹಲವು 20ಕ್ಕೂ ಅಧಿಕ ಗ್ರಂಥ, ಕೃತಿಗಳನ್ನು ಪ್ರಕಟಿಸಿದ್ದಾರೆ. ಮಹಾರಾಷ್ಟ್ರದಾದ್ಯಂತ ಯಕ್ಷಗಾನ, ತುಳು, ಕನ್ನಡ ಸಾಹಿತ್ಯ ಸಮ್ಮೇಳನ, ತುಳು ಪರ್ಬ, ಹರಿದಾಸ ಸಾಹಿತ್ಯ ಸಮ್ಮೇಳನ, ಗಮಕ ಕಲಾ ಸಮ್ಮೇಳನ, ಅನುಭವ ಸಾಹಿತ್ಯ ಸಮಾವೇಶ, ಸಾಂಸ್ಕೃತಿಕ ಸಮಾವೇಶಗಳನ್ನು ಯಶಸ್ವಿಯಾಗಿ ಸಂಘಟಿಸಿದ್ದರು.

ಎಚ್‌ಬಿಎಲ್ ರಾವ್ ಇವರಿಗೆ 2014ರಲ್ಲಿ ಅವರ ಶಿಷ್ಯರು ಮತ್ತು ಅಭಿಮಾನಿಗಳು ‘ಹರಸಾಹಸ’ ಅಭಿಂದನಾ ಗ್ರಂಥವನ್ನು ಅರ್ಪಿಸಿದ್ದರು. ‘ಕಲಾತಪಸ್ವಿ’ ಇವರ ಸಾಧನೆಗಳು ಹಾಗೂ ವ್ಯಕ್ತಿತ್ವವನ್ನು ತೆರೆದಿಡುವ ಇನ್ನೊಂದು ಕೃತಿ. ಇವರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಸೇರಿ ಹಲವಾರು ಪ್ರಶಸ್ತಿಗಳು ಸಂದಿವೆ. ಕರ್ನಾಟಕ ಶ್ರೀ, ಯಕ್ಷಗಾನ ಕಲಾ ಪ್ರಶಸ್ತಿ, ತುಳುಶ್ರೀ ಪ್ರಶಸ್ತಿ, ಮುಂಬೈ ವಿವಿ ಗೌರವ ಪುರಸ್ಕಾರ, ಸಮಾಜ ರತ್ನ ಪ್ರಶಸ್ತಿಗಳು ಇವರಿಗೆ ಸಂದಿವೆ. 2019ರಲ್ಲಿ ಉಡುಪಿ ಯಕ್ಷಗಾನ ಕಲಾರಂಗದ ಪ್ರತಿಷ್ಠಿತ ‘ಶ್ರೀವಿಶ್ವೇಶತೀರ್ಥ ಪ್ರಶಸ್ತಿ’ಗೂ ಇವರು ಬಾಜನರಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X