Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 60 ದಿನ ವಿದೇಶೀಯರಿಗೆ ಅಮೆರಿಕ...

60 ದಿನ ವಿದೇಶೀಯರಿಗೆ ಅಮೆರಿಕ ಪ್ರವೇಶವಿಲ್ಲ: ಟ್ರಂಪ್

ವಾರ್ತಾಭಾರತಿವಾರ್ತಾಭಾರತಿ22 April 2020 10:37 PM IST
share
60 ದಿನ ವಿದೇಶೀಯರಿಗೆ ಅಮೆರಿಕ ಪ್ರವೇಶವಿಲ್ಲ: ಟ್ರಂಪ್

ವಾಶಿಂಗ್ಟನ್, ಎ. 22: ಕೊರೋನ ವೈರಸ್ ಸಾಂಕ್ರಾಮಿಕದಿಂದಾಗಿ ಕೆಲಸವಿಲ್ಲದಿರುವ ಅಮೆರಿಕನ್ನರಿಗೆ ನೆರವಾಗುವುದಕ್ಕಾಗಿ ಕನಿಷ್ಠ ಎರಡು ತಿಂಗಳವರೆಗೆ ವಿದೇಶಗಳಿಂದ ಜನರು ಅವೆುರಿಕಕ್ಕೆ ವಲಸೆ ಬರುವುದನ್ನು ನಿಲ್ಲಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

‘‘ಕೊರೋನ ವೈರಸ್‌ನಿಂದಾಗಿ ಕೆಲಸ ಕಳೆದುಕೊಂಡಿರುವ ಅಮೆರಿಕನ್ನರ ಜಾಗದಲ್ಲಿ ವಿದೇಶದಿಂದ ಬರುವ ಹೊಸಬರನ್ನು ನೇಮಿಸುವುದು ತಪ್ಪು ಮತ್ತು ಅನ್ಯಾಯ’’ ಎಂದು ಮಂಗಳವಾರ ಸಂಜೆ ಶ್ವೇತಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಟ್ರಂಪ್ ಹೇಳಿದರು. ‘‘ನಾವು ಮೊದಲು ಅಮೆರಿಕದ ಕೆಲಸಗಾರರ ಹಿತವನ್ನು ಗಣನೆಗೆ ತೆಗೆದುಕೊಳ್ಳಬೇಕಾಗಿದೆ’’ ಎಂದರು.

ವಲಸೆ ನಿರ್ಬಂಧವು 60 ದಿನಗಳ ಕಾಲ ಜಾರಿಯಲ್ಲಿರುತ್ತದೆ ಹಾಗೂ ಅಮೆರಿಕದಲ್ಲಿ ಖಾಯಂ ವಾಸ್ತವ್ಯವನ್ನು ಬಯಸುವವರಿಗೆ ಮಾತ್ರ ಇದು ಅನ್ವಯವಾಗುತ್ತದೆ ಎಂದು ಟ್ರಂಪ್ ಹೇಳಿದರು.

ಕೃಷಿ ಕಾರ್ಮಿಕರು, ಆರೋಗ್ಯ ಕೆಲಸಗಾರರಿಗೆ ವಿನಾಯಿತಿ

ವಲಸೆಯನ್ನು ನಿರ್ಬಂಧಿಸುವ ಆದೇಶದಲ್ಲಿ ಕೆಲವೊಂದು ವಿನಾಯಿತಿಗಳಿರುತ್ತವೆ ಹಾಗೂ ಕೆಲವರಿಗೆ ದೇಶಕ್ಕೆ ಬರಲು ಅವಕಾಶ ನೀಡಲಾಗುತ್ತದೆ ಎಂದರು. ಕೃಷಿ ಕಾರ್ಮಿಕರಿಗೆ ವಿನಾಯಿತಿ ನೀಡಲಾಗುತ್ತದೆ ಎನ್ನಲಾಗಿದೆ. ‘‘ಈ ಆದೇಶದಿಂದ ಕಾರ್ಮಿಕರಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ’’ ಎಂದು ಟ್ರಂಪ್ ಹೇಳಿದ್ದಾರೆ.

ಆರೋಗ್ಯ ರಕ್ಷಣೆ ಮತ್ತು ವೈದ್ಯಕೀಯ ಸಂಶೋಧನೆ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ನಿರ್ಬಂಧವು ಅನ್ವಯವಾಗುವುದಿಲ್ಲ ಎಂದು ಆದೇಶದ ಕರಡು ಪ್ರತಿಯಲ್ಲಿ ಹೇಳಲಾಗಿದೆ ಎಂದು ‘ಬ್ಲೂಮ್‌ಬರ್ಗ್’ ಮಾಧ್ಯಮ ಹೇಳಿದೆ.

ಎಚ್-1ಬಿ ವೀಸಾದಾರರಿಂದ ಪ್ರಮಾಣಪತ್ರ ಸಲ್ಲಿಕೆ

ಅದೇ ವೇಳೆ, ಎಚ್-1ಬಿ ವೀಸಾದಲ್ಲಿ ಅಮೆರಿಕದಲ್ಲಿ ವಾಸಿಸುತ್ತಿರುವ ತಂತ್ರಜ್ಞಾನ ಉದ್ಯಮದ ಉದ್ಯೋಗಿಗಳು, ನಾವು ಅಮೆರಿಕದ ಉದ್ಯೋಗಿಗಳ ಸ್ಥಾನದಲ್ಲಿ ಕೆಲಸ ಮಾಡುವುದಿಲ್ಲ ಎಂಬುದಾಗಿ ಘೋಷಿಸುವ ಹೊಸ ಪ್ರಮಾಣಪತ್ರಗಳನ್ನು ಸರಕಾರಕ್ಕೆ ಸಲ್ಲಿಸಬೇಕು.

ನಿರಾಶ್ರಿತರು ಮತ್ತು ಆಶ್ರಯ ಕೋರಿ ಬಂದಿರುವವರ ಮೇಲೆ ಹಾಗೂ ಅಮೆರಿಕದ ನಾಗರಿಕರು ಮತ್ತು ಖಾಯಂ ನಿವಾಸಿಗಳ ಸಂಗಾತಿಗಳು ಮತ್ತು ಮಕ್ಕಳ ಮೇಲೆಯೂ ನೂತನ ಆದೇಶವು ಯಾವುದೇ ಪರಿಣಾಮ ಬೀರುವುದಿಲ್ಲ.

ವಿದೇಶೀಯರೊಂದಿಗೆ ಅಮೆರಿಕನ್ನರು ಸ್ಪರ್ಧಿಸಿದರೆ ಆರ್ಥಿಕತೆ ಪುನಶ್ಚೇತನ ಸಾಧ್ಯವಿಲ್ಲ: ಟ್ರಂಪ್

‘‘ವಿದೇಶಿ ಕೆಲಸಗಾರರಿಂದಾಗಿ ಕೃತಕವಾಗಿ ವಿಸ್ತರಿಸಲ್ಪಟ್ಟಿರುವ ಕೆಲಸಗಾರರ ಸಮೂಹದೊಂದಿಗೆ ಸ್ಪರ್ಧಿಸುವ ಅನಿವಾರ್ಯತೆಗೆ ಅಮೆರಿಕನ್ನರು ಒಳಗಾದರೆ, ದೇಶಿ ಆರ್ಥಿಕತೆಗೆ ಪುನಶ್ಚೇತನ ನೀಡಲು ನಮಗೆ ಸಾಧ್ಯವಿಲ್ಲ ಎಂಬ ತೀರ್ಮಾನಕ್ಕೆ ನಾನು ಬಂದಿದ್ದೇನೆ’’ ಎಂದು ಕರಡು ಆದೇಶದಲ್ಲಿ ಟ್ರಂಪ್ ಹೇಳಿದ್ದಾರೆ.

‘‘ತಕ್ಷಣದಲ್ಲಿ ಖಾಸಗಿ ಅಥವಾ ತಾತ್ಕಾಲಿಕ ಕೆಲಸಗಾರರಾಗಿ ಅವೆುರಿಕವನ್ನು ಪ್ರವೇಶಿಸಲು ವಿದೇಶೀಯರಿಗೆ ಅನುಮತಿ ನೀಡಿದರೆ ನಮ್ಮ ರಾಷ್ಟ್ರೀಯ ಹಿತಾಸಕ್ತಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ನಾನು ನಿರ್ಧರಿಸಿದ್ದೇನೆ’’ ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X