Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಜ್ ಯಾತ್ರೆಗೆ ಕೂಡಿಟ್ಟ ಹಣದಿಂದ ಆಹಾರ...

ಹಜ್ ಯಾತ್ರೆಗೆ ಕೂಡಿಟ್ಟ ಹಣದಿಂದ ಆಹಾರ ಸಾಮಗ್ರಿ ವಿತರಿಸಿದ ಅಬ್ದುಲ್ ರಹ್ಮಾನ್

''ಹಸಿದವರ ಹೊಟ್ಟೆ ತುಂಬಿಸದಿದ್ದರೆ ಆ ಹಣ ನನಗೆ ಶಾಪ ಹಾಕಿತು''

ಇಮ್ತಿಯಾಝ್ ಶಾ ತುಂಬೆಇಮ್ತಿಯಾಝ್ ಶಾ ತುಂಬೆ22 April 2020 11:04 PM IST
share
ಹಜ್ ಯಾತ್ರೆಗೆ ಕೂಡಿಟ್ಟ ಹಣದಿಂದ ಆಹಾರ ಸಾಮಗ್ರಿ ವಿತರಿಸಿದ ಅಬ್ದುಲ್ ರಹ್ಮಾನ್

ಬಂಟ್ವಾಳ, ಎ.22: ಪವಿತ್ರ ಹಜ್ ಯಾತ್ರೆಗಾಗಿ ಹಲವಾರು ವರ್ಷಗಳಿಂದ ಕೂಡಿಟ್ಟ ಹಣದಿಂದ ಹಸಿದ ಹೊಟ್ಟೆಗಳನ್ನು ತುಂಬಿಸುವ ಮೂಲಕ ಹಜ್ ನಿರ್ವಹಿಸಿದ ಪುಣ್ಯವನ್ನು ಪಡೆಯಲು ಅಬ್ದುಲ್ ರಹ್ಮಾನ್ ಎಂಬವರು ಬಯಸಿದ್ದಾರೆ. 

ತಾಲೂಕಿನ ಗೂಡಿನಬಳಿಯ ನಿವಾಸಿ ಅಬ್ದುಲ್ ರಹ್ಮಾನ್ ಕೂಲಿ ಕಾರ್ಮಿಕನಾಗಿ ದುಡಿಯುತ್ತಿದ್ದಾರೆ. ಕೂಲಿ ಮಾಡಿ ಸಂಪಾದಿಸಿದ ಹಣದಿಂದ ತನ್ನ ಕುಟುಂಬವನ್ನು ಸಾಕುವುದರ ಜೊತೆಗೆ ಪವಿತ್ರ ಮಕ್ಕಾ, ಮದೀನ ಯಾತ್ರೆ ಕೈಗೊಳ್ಳುವ ಉದ್ದೇಶದಿಂದ ಒಂದಿಷ್ಟು ಹಣವನ್ನು ಹಲವಾರು ವರ್ಷಗಳಿಂದ ಕೂಡಿಡುತ್ತಾ ಬಂದಿದ್ದಾರೆ.

ಕೊರೋನ ವೈರಸ್ ಲಕ್ಷಾಂತರ ಜೀವಗಳನ್ನು ಬಲಿಪಡೆದು ಜಗತ್ತನ್ನೇ ನಡುಗಿಸಿದೆ. ಈ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇಶದಲ್ಲಿ ಲಾಕ್‍ಡೌನ್ ಜಾರಿ ಮಾಡಲಾಗಿದೆ. ಇದರಿಂದ ಕೆಲಸ, ಕಾರ್ಯವಿಲ್ಲದೆ ಬಡ ಮತ್ತು ಮಧ್ಯಮ ವರ್ಗದ ಜನರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದನ್ನು ಮನಗಂಡ ಅಬ್ದುಲ್ ರಹ್ಮಾನ್ ತಾನು ಹಜ್ ಯಾತ್ರೆಗೆ ಕೂಡಿಟ್ಟ ಹಣದಿಂದ ಅಕ್ಕಿ ಸಹಿತ ಆಹಾರ ಸಾಮಗ್ರಿಗಳನ್ನು ಖರೀದಿಸಿ ಇಟ್ಟಿದ್ದು ಸಂಕಷ್ಟದಲ್ಲಿರುವವರಿಗೆ ವಿತರಿಸಲು ಮುಂದಾಗಿದ್ದಾರೆ. 

ಲಾಕ್‍ಡೌನ್‍ನಿಂದ ಜನಸಾಮಾನ್ಯರು ಕಷ್ಟದಲ್ಲಿರುವ ಈ ಸಂದರ್ಭದಲ್ಲಿ ನಾನು ಹಜ್ ಯಾತ್ರೆಗೆಂದು ಕೂಡಿಟ್ಟ ಹಣವು ನಮಗೆ ಶಾಪ ಹಾಕದೇ ಇರಲಾರದು. ಈ ಹಣದಿಂದ ಹಜ್ ಯಾತ್ರೆ ಮಾಡುವುದಕ್ಕಿಂತ ಹಸಿವಿನಿಂದಿರುವವರ ಹೊಟ್ಟೆ ತುಂಬಿಸುವುದೇ ಪುಣ್ಯದ ಕೆಲಸ ಎಂಬುದು ಅಬ್ದುಲ್ ರಹ್ಮಾನ್ ಅವರ ಮನಸಿನಲ್ಲಿ ಬಂದದ್ದೇ ತಡ, ಆ ಹಣದಿಂದ ಬಡವರಿಗೆ ವಿತರಿಸಲು ಆಹಾರ ಸಾಮಗ್ರಿಗಳನ್ನು ಖರೀದಿಸಿ ಇಟ್ಟಿದ್ದಾರೆ. 

ನನ್ನ ತಂದೆ ಇವತ್ತಿಗೂ ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ತಂದೆಗೆ ಒಂದಿಷ್ಟು ಸಹಾಯವಾಗಲಿ ಎಂದು ನನ್ನ ತಾಯಿ ಬೀಡಿ ಕಟ್ಟುತ್ತಿದ್ದಾರೆ. ಒಟ್ಟಿನಲ್ಲಿ ನನ್ನ ಹೆತ್ತವರು ಶ್ರಮ ಜೀವಿಗಳು. ಜೀವನದಲ್ಲಿ ಒಮ್ಮೆಯಾದರೂ ಹಜ್ ಯಾತ್ರೆ ನಿರ್ವಹಿಸಬೇಕೆಂಬುದು ನನ್ನ ಪಾಲಕರ ಮಹದಾಸೆ. ಮಕ್ಕಾ, ಮದೀನದ ಕನಸು ಕಾಣುತ್ತಾ, ಹಜ್ ಯಾತ್ರೆಗೆಂದು ಹಲವು ವರ್ಷಗಳಿಂದ ಸ್ವಲ್ಪ ಸ್ವಲ್ಪ ಹಣವನ್ನು ಕೂಡಿಡುತ್ತಾ ಬಂದಿದ್ದಾರೆ. ಕೊರೋನ ವೈರಸ್ ಹಿನ್ನೆಲೆಯಲ್ಲಿ ಲಾಕ್‍ಡೌನ್ ಆಗಿ ಜನಸಾಮಾನ್ಯರು ನರಳುತ್ತಿರುವ ಈ ಸಂದರ್ಭದಲ್ಲಿ ಹಜ್ ಯಾತ್ರೆಗೆ ಕೂಡಿಟ್ಟ ಆ ಹಣವು ನಮಗೆ ಹಿಡಿಶಾಪ ಹಾಕಬಹುದೆಂದು ಮನಗಂಡು ಆ ಹಣದಿಂದ ಹಸಿದವರ ಹೊಟ್ಟೆ ತನಿಸಲು ನನ್ನ ತಂದೆ ತೀರ್ಮಾಣ ಕೈಗೊಂಡಿದ್ದಾರೆ ಎಂದು ಅಬ್ದುಲ್ ರಹ್ಮಾನ್ ಅವರ ಪುತ್ರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

share
ಇಮ್ತಿಯಾಝ್ ಶಾ ತುಂಬೆ
ಇಮ್ತಿಯಾಝ್ ಶಾ ತುಂಬೆ
Next Story
X