Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಕೊರೋನ ಸಂಕಷ್ಟ: ದುಬೈ ಕಾನ್ಸುಲೇಟ್ ಜನರಲ್...

ಕೊರೋನ ಸಂಕಷ್ಟ: ದುಬೈ ಕಾನ್ಸುಲೇಟ್ ಜನರಲ್ ಜೊತೆ ಚರ್ಚಿಸಿದ ದುಬೈ ಅನಿವಾಸಿ ಕನ್ನಡಿಗರು

ವಾರ್ತಾಭಾರತಿವಾರ್ತಾಭಾರತಿ22 April 2020 11:53 PM IST
share
ಕೊರೋನ ಸಂಕಷ್ಟ: ದುಬೈ ಕಾನ್ಸುಲೇಟ್ ಜನರಲ್ ಜೊತೆ ಚರ್ಚಿಸಿದ ದುಬೈ ಅನಿವಾಸಿ ಕನ್ನಡಿಗರು

ದುಬೈ: ಪ್ರಪಂಚದಾದ್ಯಂತ ತಲ್ಲಣ ಮೂಡಿಸಿರುವ ಕರೋನವೈರಸ್  ನಿಂದ ಅನಿವಾಸಿ ಕನ್ನಡಿಗರು ಎದುರಿಸುತ್ತಿರುವ ಸಂಕಷ್ಟ ಹಾಗೂ ಮುಂದಿನ ಯೋಜನೆಗಳ ಕುರಿತು ಚರ್ಚಿಸಲು ದುಬೈ ಅನಿವಾಸಿ ಕನ್ನಡಿಗರು  ಕಾನ್ಸುಲೇಟ್ ಜನರಲ್ ದುಬೈ  ವಿಪುಲ್ ಷಾ ಹಾಗೂ ಅನಿವಾಸಿ ಭಾರತೀಯ ಸಮಿತಿ ಮಾಜಿ ಉಪಾಧ್ಯಕ್ಷರಾದ ಆರತಿ ಕೃಷ್ಣ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸದರು.

ಕರೋನ ವೈರಸ್ ಭೀಕರತೆ ಕಡಿಮೆಯಾದಾಗ ಭಾರತ ದೇಶಕ್ಕೆ ಮರಳಲು ವಿಮಾನಯಾನ ಪುನರ್ ಆರಂಭವಾದಾಗ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳು, ಆದ್ಯತೆಗಳ ಕುರಿತು ಚರ್ಚಿಸಲಾಯಿತು. ವಿಮಾನಯಾನ ಪುನರ್ ಆರಂಭವಾದಾಗ ಯುಎಈಯಲ್ಲಿರವ ಅನಿವಾಸಿಗಳನ್ನು ವಾಪಾಸು ಕರೆತರಲು ಕೇಂದ್ರ ಸರ್ಕಾರ ಏನು ಪೂರ್ವ ತಯಾರಿ ನಡೆಸಿದೆ ಎಂದು ಕರ್ನಾಟಕ ಎನ್ನಾರೈ ಫೋರಂ ಅಧ್ಯಕ್ಷರಾದ ಪ್ರವೀಣ್ ಶೆಟ್ಟಿ ಪ್ರಶ್ನಿಸಿದರು. ಈ ಸಂದರ್ಭದಲ್ಲಿ ಉತ್ತರಿಸಿದ ವಿಪುಲ್ ಈವರೆಗೆ ಯಾವುದೇ ಅಂತಿಮ ನಿರ್ಧಾರ ಕೇಂದ್ರ ಸರ್ಕಾರ ಕೈಗೊಂಡಿಲ್ಲ, ಶೀಘ್ರವೇ ವಿದೇಶಾಂಗ ಸಚಿವಾಲಯ ಅಂತಿಮ ತೀರ್ಮಾನಕ್ಕೆ ಬರಲಿದೆ ಆ ಕೂಡಲೇ ನಿಮ್ಮ ಗಮನಕ್ಕೆ ತರುವೆನೆಂದು ತಿಳಿಸಿದರು.

ವಿಮಾನಯಾನ ಶುರುವಾದಾಗ ಗರ್ಭಿಣಿ ಮಹಿಳೆಯರಿಗೆ ಮತ್ತು ಹಿರಿಯರಿಗೆ, ತುರ್ತು ಚಿಕಿತ್ಸೆ ಅವಶ್ಯಕತೆ ಇರುವವರಿಗೆ, ಕೆಲಸ ಕಳೆದುಕೊಂಡ ಅನಿವಾಸಿ ಭಾರತೀಯರಿಗೆ ಪ್ರಥಮ ಆದ್ಯತೆ ನೀಡಬೇಕು ಎಂದು ದುಬೈ ಅನಿವಾಸಿ ಕನ್ನಡಿಗರು ಅಧ್ಯಕ್ಷರಾದ ಉದ್ಯಮಿ ನವೀದ್ ಮಾಗುಂಡಿ ಒತ್ತಾಯಿಸಿದರು, ಈ ಬೇಡಿಕೆಯನ್ನು ನಾವು ಸ್ವತಃ ಮುಂದೆ ನಿಂತು ಪಾಲಿಸುವ ವ್ಯವಸ್ಥೆ ಮಾಡುವುದಾಗಿ ವಿಪುಲ್ ಭರವಸೆ ನೀಡಿದರು.

ಐಸೋಲೇಶನ್ ವಾರ್ಡ್ ವ್ಯವಸ್ಥೆ ಕುರಿತು ಬಿಸಿಸಿಐ ಯುಎಈ ಘಟಕದ  ಉಪಾಧ್ಯಕ್ಷರಾದ ಹಿದಾಯತ್ ಅಡ್ಡೂರು ರವರ ಪ್ರಶ್ನೆಗೆ ಉತ್ತರಿಸಿದ ಕಾನ್ಸುಲೇಟ್ ಜನರಲ್ ವಿಪುಲ್, ಉದ್ಯಮಿ ಅಜಾದ್ ಮುಪೇನ್ ಒಡೆತನದ ಆಸ್ಪತ್ರೆಯಾದ ಆಸ್ಟರ್ ಗ್ರೂಪಿನಿಂದ ಹಲವಾರು ಡಾಕ್ಟರ್ ಮತ್ತು ನರ್ಸುಗಳು ಭಾರತೀಯ ಅನಿವಾಸಿಗಳ ಒಕ್ಕೂಟದಿಂದ ಕ್ವಾರಂಟೈನ್ ಮಾಡಿರುವ ಸ್ಥಳಗಳಲ್ಲಿ ಸೇವೆಸಲ್ಲಿಸುತ್ತಿದ್ದು, ಯಾವುದೇ ಅನಿವಾಸಿ ಭಾರತೀಯರಿಗೆ ಕೋವಿಡ್ ವೈರಸ್ ಸೋಂಕು ಧೃಡಪಟ್ಟು ಐಸೋಲೇಶನ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯಲು ವಿಳಂಬವಾದರೆ ನೀವು ಕೂಡಲೇ ದುಬೈ ಕಾನ್ಸುಲೇಟ್ ಜನರಲ್ ಕಚೇರಿಯನ್ನು ಸಂಪರ್ಕಿಸಿ ಎಂದು ತಿಳಿಸಿದರು.

ವಿಮಾನಯಾನ ಪುನರಾರಂಭವಾದಾಗ ಭಾರತ ಮರಳಲು ಇಚ್ಚಿಸುವ ಬಡ ಕಾರ್ಮಿಕರಿಗೆ ಉಚಿತವಾಗಿ ಟಿಕೆಟ್ ವ್ಯವಸ್ಥೆ ಮಾಡಬೇಕು, ಮೇ ಜೂನ್ ಸಮಯದಲ್ಲಿ ವಿಮಾನ ಪ್ರಯಾಣದ ದರ ಹೆಚ್ಚಿರುತ್ತದೆ, ಅದರಿಂದಾಗಿ ಸಂಕಷ್ಟದಲ್ಲಿರುವ ಅನಿವಾಸಿ ಭಾರತೀಯ ಇನ್ನಷ್ಟು ಸಂಕಷ್ಟಕ್ಕೆ ಒಳಗಾಗದಂತೆ ನೋಡಿಕೊಳ್ಳಬೇಕು ಎಂದು ಶಾರ್ಜಾ ಕರ್ನಾಟಕ ಸಂಘದ ಪೋಷಕರಾದ ಹರೀಶ್ ಶೇರಿಗಾರ್ ಒತ್ತಾಯಿಸಿದರು. ಇದಕ್ಕೆ ಉತ್ತರಿಸಿದ ವಿಪುಲ್ ಇದಕ್ಕಾಗಿ ನಾವು 'ಇಂಡಿಯನ್ ಕಮ್ಯುನಿಟಿ ವೆಲ್ಫೇರ್ ಪಂಢ್' ಅನ್ನು ಬಳಸಿ ಹೆಚ್ಟಿನ ಸಂಖ್ಯೆಯಲ್ಲಿ ಅನುಕೂಲ ಒದಗಿಸುವ ಕೆಲಸ ಮಾಡಲಿದ್ದೇವೆ, ಅದೇ ರೀತಿ ಭಾರತೀಯ ಉದ್ಯಮಿಗಳು, ಅನಿವಾಸಿ ಸಂಘಟನೆಗಳ ಸಹಾಯವನ್ನು ಪಡೆದು ಹೆಚ್ಚಿನ ಭಾರತೀಯರಿಗೆ ವ್ಯವಸ್ಥೆ ಮಾಡಲು ಪ್ರಯತ್ನಿಸೋಣ ಎಂದರು.

ಅನಿವಾಸಿ ಭಾರತೀಯ ಸಮಿತಿ ಮಾಜಿ ಅಧ್ಯಕ್ಷರಾದ ಆರತಿ ಕೃಷ್ಣ ಅನಿವಾಸಿ ಕನ್ನಡಿಗರ ಯಾವುದೇ ಸಮಸ್ಯೆಗಳ ಕುರಿತು ಕರ್ನಾಟಕ ಸರಕಾರದ ಗಮನಕ್ಕೆ ತರಲು ಸದಾ ತಯಾರಿದ್ದು, ವಿಮಾನ ಪ್ರಯಾಣ ಪ್ರಾರಂಭವಾದಾಗ ರಾಜ್ಯದಲ್ಲಿ ಹೇಗೆ ಕ್ವಾರಂಟೈನ್ ಮಾಡಬೇಕು, ಏನೆಲ್ಲಾ ಮುನ್ನೆಚ್ಟರಿಕೆ ಕ್ರಮ ಕೈಗೊಳ್ಳಬೇಕು, ಹೇಗೆ ಜಿಲ್ಲಾವಾರು ಸ್ಥಳ ಗುರುತಿಸಬೇಕು ಎಂಬ ಬಗ್ಗೆ ದುಬೈ ಕನ್ನಡಿಗರು ಏನೇ ಸಲಹೆ ನೀಡಿದರೂ ಅದನ್ನು ಮುಖ್ಯಮಂತ್ರಿ ಕಚೇರಿಯಲ್ಲಿ ಚರ್ಚಿಸಿ ಅವರ ಗಮನಕ್ಕೆ ತರುವೆ ಎಂದು ಅವರು ಭರವಸೆ ನೀಡಿದರು.

ದುಬೈ ಅನಿವಾಸಿ ಕನ್ನಡಿಗರು ತಂಡದ ನವೀದ್ ಮಾಗುಂಡಿ, ಹಿದಾಯತ್ ಅಡ್ಡೂರು, ಸುನಿಲ್ ಅಂಬಳತರೆ ನೇತೃತ್ವದಲ್ಲಿ ಸಂಕಷ್ಟದಲ್ಲಿರುವ ಅನಿವಾಸಿ ಕನ್ನಡಿಗರಿಗೆ ಮಾಡಲಾಗುತ್ತಿರುವ ಊಟದ ವ್ಯವಸ್ಥೆ, ಔಷಧಿ ವ್ಯವಸ್ಥೆ, ರೇಷನ್ ಪೂರೈಕೆ ಕುರಿತು ಕರ್ನಾಟಕ ಮೀಡಿಯಾ ಫೋರಂ ಯುಎಈ ಅಧ್ಯಕ್ಷ ಇಮ್ರಾನ್ ಖಾನ್ ದುಬೈ ಕಾನ್ಸುಲೇಟ್ ಜನರಲ್ ಗಮನಕ್ಕೆ ತಂದರು. ಇಂತಹಾ ಸೇವೆಗೆ ನಮ್ಮ ಭಾರತೀಯ ಸಂಸ್ಥೆಗಳು, ಸಮುದಾಯಗಳು ಹೆಸರುವಾಸಿಯಾಗಿದ್ದು ಎಂದು ಪ್ರಶಂಸಿಸಿದರು.

ವೀಡಿಯೋ ಕಾನ್ಫರೆನ್ಸ್ ನಲ್ಲಿ ದುಬೈ ಅನಿವಾಸಿ ಕನ್ನಡಿಗರ ಉಪಾಧ್ಯಕ್ಷರಾದ ಅಡ್ವಕೇಟ್ ಸುನಿಲ್ ಅಂಬಳತರೆ, ಬಸವ ಸಮಿತಿ ದುಬೈ ಸಂಸ್ಥೆಯ ಪರವಾಗಿ ಚಂದ್ರಶೇಖರ್ ಲಿಂಗದಹಳ್ಳಿ, ಕರ್ನಾಟಕ ಸಂಘ ದುಬೈ ಇದರ ಪ್ರಧಾನ ಕಾರ್ಯದರ್ಶಿ ದಯಾ ಕಿರೋಡಿಯನ್, ಉದ್ಯಮಿ ರೊನಾಲ್ಡ್ ಮಾರ್ಟಿಸ್ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X