ದ.ಕ. ಜಿಲ್ಲೆಯಲ್ಲಿ ಮತ್ತೊಂದು ಕೊರೋನ ಸೋಂಕು ದೃಢ

ಸಾಂದರ್ಭಿಕ ಚಿತ್ರ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಟ್ವಾಳದ ಮಹಿಳೆಯೋರ್ವರಲ್ಲಿ ಕೊರೋನ ವೈರಸ್ ಸೋಂಕು ಇಂದು ದೃಢವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಸುಮಾರು 75 ವರ್ಷ ವಯಸ್ಸಿನ ಅವರು ಎ. 22ರಂದು ಖಾಸಗಿ ಆಸ್ಪತ್ರೆಯಿಂದ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಗಂಟಲು ದ್ರವ ಪರೀಕ್ಷೆಯಿಂದ ಕೊರೋನ ಸೋಂಕು ಇರುವುದು ದೃಢಪಟ್ಟಿರುತ್ತದೆ. ಎ. 19ರಂದು ಕೊರೋನ ವೈರಸ್ ಗೆ ಬಲಿಯಾದ ಮಹಿಳೆಯ ಸಂಬಂಧಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟನೆ ತಿಳಿಸಿದೆ.
Next Story





