Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫಸ್ಟ್ ನ್ಯೂರೋ ಆಸ್ಪತ್ರೆ, ಸುತ್ತಲ...

ಫಸ್ಟ್ ನ್ಯೂರೋ ಆಸ್ಪತ್ರೆ, ಸುತ್ತಲ ಪ್ರದೇಶ ಕಂಟೈನ್ಮೆಂಟ್ ಝೋನ್: ದ.ಕ. ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ23 April 2020 4:32 PM IST
share
ಫಸ್ಟ್ ನ್ಯೂರೋ ಆಸ್ಪತ್ರೆ, ಸುತ್ತಲ ಪ್ರದೇಶ ಕಂಟೈನ್ಮೆಂಟ್ ಝೋನ್: ದ.ಕ. ಜಿಲ್ಲಾಧಿಕಾರಿ

ಮಂಗಳೂರು, ಎ.23: ನಗರದ ಕಣ್ಣೂರು ಬಳಿಯ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆಗೂ ಕೊರೋನ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಸುತ್ತಲಿನ ಪ್ರದೇಶಗಳನ್ನು ಕಂಟೈನ್ಮೆಂಟ್ ಝೋನ್ ಆಗಿ ದ.ಕ. ಜಿಲ್ಲಾಧಿಕಾರಿ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಆಸ್ಪತ್ರೆಯ ಪೂರ್ವ ಭಾಗದಿಂದ ಕನ್ನಗುಡ್ಡೆ, ಪಶ್ಚಿಮದಿಂದ ರಮಾನಾಥ್ ಕೃಪಾ ರೈಸ್ ಮಿಲ್, ಉತ್ತರಕ್ಕೆ ರಾಷ್ಟ್ರೀಯ ಹೆದ್ದಾರಿ 73 ಮತ್ತು ದಕ್ಷಿಣಕ್ಕೆ ಸರಕಾರಿ ಜಾಗದ ಸುತ್ತ ಕಂಟೈನ್ಮೆಂಟ್ ಪ್ರದೇಶವಾಗಿ ಘೋಷಿಸಲಾಗಿದೆ. ಆಸ್ಪತ್ರೆಯ ಜೊತೆಗೆ ಎರಡು ಮನೆ, ಐದು ಅಂಗಡಿಗಳನ್ನು ಸಂಪೂರ್ಣ ಕಂಟೈನ್ಮೆಂಟ್ ವ್ಯಾಪ್ತಿಗೊಳಪಡಿಸಲಾಗಿದೆ.  ಅಲ್ಲಿಂದ 5 ಕಿ.ಮೀ. ಸುತ್ತಮುತ್ತಲಿನ ಕಲ್ಲಾಪು, ಕುಡುಪು, ಫರಂಗಿಪೇಟೆ, ಫಳ್ನೀರ್‌ವರೆಗೂ ಬಫರ್ ಝೋನ್ ಆಗಿ ಘೋಷಿಸಲಾಗಿದೆ. ಈ ಬಫರ್ ಝೋನ್ ವ್ಯಾಪ್ತಿಗೆ 42,000 ಮನೆಗಳು, 1,800 ಅಂಗಡಿ ಮತ್ತು ಕಚೇರಿಗಳು, 1, 82,500 ಲಕ್ಷ ಜನರು ಬಫರ್ ಝೋನ್ ವ್ಯಾಪ್ತಿಗೊಳಪಡುತ್ತಾರೆ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಕೊರೋನ ಸೋಂಕು ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಮಂಗಳೂರು ತಹಶೀಲ್ದಾರ್ ಮತ್ತು ತಾಲೂಕು ದಂಡಾಧಿಕಾರಿಯನ್ನು ಘಟನಾ ಕಮಾಂಡರ್ ಆಗಿ ನೇಮಕ ಮಾಡಲಾಗಿದ್ದು, ಅವರು ಈ ಕಂಟೈನ್ಮೆಂಟ್ ವಲಯದ ಒಟ್ಟು ಉಸ್ತುವಾರಿಯನ್ನು ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಪ್ರಕಟನೆ ತಿಳಿಸಿದೆ.

ಫಸ್ಟ್ ನ್ಯೂರೋ ಆಸ್ಪತ್ರೆ ‘ಸುಪರ್‌ವೈಸ್ಡ್ ಐಸೋಲೇಶನ್ ಸೆಂಟರ್’

ಕೊರೋನ ವೈರಸ್ ಸೋಂಕು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹರಡುತ್ತಿರುವುದನ್ನು ತಡೆಗಟ್ಟಲು ತುರ್ತು ಯೋಜನೆಗನ್ನು ಜಿಲ್ಲಾಡಳಿತ ಕೈಗೊಳ್ಳುತ್ತಿದೆ. ಇದರ ಭಾಗವಾಗಿ, ಪಡೀಲು ಕಣ್ಣೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯನ್ನು ಕೂಡಾ ‘ಸೂಪರ್ ‌ವೈಸ್ಡ್ ಐಸೋಲೇಶನ್ ಸೆಂಟರ್’ ಆಗಿ ಘೋಷಣೆ ಮಾಡುತ್ತಿರುವುದಾಗಿ ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಫಸ್ಟ್ ನ್ಯೂರೋ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಕ್ವಾರಂಟೈನ್ ಗೆ

ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ರದ್ಧೆಯೊಬ್ಬರಿಗೆ ಕೊರೋನ ಸೋಂಕು ದೃಢಪಟ್ಟಿರುವುದರಿಂದ ಆಸ್ಪತ್ರೆ ವೈದ್ಯರು, ದಾದಿಯರು, ಸಿಬ್ಬಂದಿ ಗಳನ್ನು ಕ್ವಾರಂಟೈನ್ ಗೆ ಒಳಪಡಿಸಲಾಗುತ್ತಿದೆ.

ಈ ಬಗ್ಗೆ ಜಿಲ್ಲಾಡಳಿತ ತಂಡ ಸಿದ್ಧತೆ ನಡೆಸುತ್ತಿದ್ದು, ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಗಂಟಲ ದ್ರವ ಮಾದರಿ ಪರೀಕ್ಷೆಗೆ ಸಂಗ್ರಹಿಸಲಾಗು ತ್ತಿದೆ. ಅಲ್ಲಿನ ಸ್ವಚ್ಛತಾ ಸಿಬ್ಬಂದಿ ಗಂಟಲ ದ್ರವ ಮಾದರಿಯನ್ನು ಸಂಗ್ರಹಿಸಲಾಗುತ್ತಿದೆ ಎಂದು ಡಿಎಚ್ಒ ಡಾ. ರಾಮಚಂದ್ರ ಬಾಯರಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X