ಅರ್ನಾಬ್ ಗೋಸ್ವಾಮಿ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ದೂರು

ಉಡುಪಿ : ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಹೀನಾಯವಾಗಿ ನಿಂದಿಸಿದ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಯಿತು.
ಈ ಸಂದರ್ಭ ಮಾಜಿ ಸಚಿವ ವಿನಯಕುಮಾಕ ಸೊರಕೆ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ ಕುಮಾರ್ ಕೊಡವೂರು, ಉಪಾಧ್ಯಕ್ಷ ಪ್ರಖ್ಯಾತ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಕಾನೂನು ಸೆಲ್‌ನ ಜಿಲಾಧ್ಯಕ್ಷ ಹರೀಶ್ ಶೆಟ್ಟಿ ಪಾಂಗಾಳ ಹಾಗೂ ಯತೀಶ್ ಕರ್ಕೆರ ಉಪಸ್ಥಿತರಿದ್ದರು.
Next Story





