Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಲಾಕ್‌ಡೌನ್ ಉಲ್ಲಂಘಿಸಿ ಅಕ್ರಮ ವಾಸಿಗಳ...

ಲಾಕ್‌ಡೌನ್ ಉಲ್ಲಂಘಿಸಿ ಅಕ್ರಮ ವಾಸಿಗಳ ತೆರವು: ನಿರಾಶ್ರಿತರ ಕೇಂದ್ರ-ಲೇಡಿಗೋಶನ್ ಆಸ್ಪತ್ರೆಗೆ ಸೇರ್ಪಡೆ

ವಾರ್ತಾಭಾರತಿವಾರ್ತಾಭಾರತಿ23 April 2020 8:22 PM IST
share

ಗುರುಪುರ, ಎ. 23:ಲಾಕ್‌ಡೌನ್ ಉಲ್ಲಂಘಿಸಿ ವ್ಯಕ್ತಿಯೊಬ್ಬರು ಸ್ಥಳೀಯ ಗ್ರಾಪಂ ಅಥವಾ ಸಂಬಂಧಪಟ್ಟ ಇಲಾಖೆಯ ಅನುಮತಿ ಇಲ್ಲದೆ ನಿರಾಶ್ರಿತ ಮೂವರ ಕುಟುಂಬವೊಂದಕ್ಕೆ ಗುರುಪುರ ಗ್ರಾಪಂ ವ್ಯಾಪ್ತಿಯ ಮೂಳೂರು ಮಠದಗುಡ್ಡೆ ಸೈಟ್‌ನ ಮುರುಕಲು ಮನೆಯಲ್ಲಿ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿದ ಬಳಿಕ ಸ್ಥಳೀಯರಲ್ಲಿ ಉಂಟಾಗಿರುವ ಆತಂಕದ ಹಿನ್ನೆಲೆಯಲ್ಲಿ ಗುರುವಾರ ಸ್ಥಳಕ್ಕಾಗಮಿಸಿದ ಅಧಿಕಾರಿಗಳ ತಂಡವು ಮೂವರಲ್ಲಿ ಇಬ್ಬರನ್ನು ಮಂಗಳೂರಿನ ನಿರಾಶ್ರಿತರ ಕೇಂದ್ರ ಹಾಗೂ ಮಹಿಳೆಯನ್ನು ಲೇಡಿಗೋಶನ್ ಆಸ್ಪತ್ರೆಗೆ ದಾಖಲಿಸಿತು.

ಎರಡು ತಿಂಗಳ ಹಿಂದೆ ಪೊಳಲಿ ದ್ವಾರದ ಬಳಿ ಟೆಂಟ್ ಹಾಕಿಕೊಂಡು ವಾಸಿಸುತ್ತಿದ್ದ ಮತಾಂತರಗೊಂಡಿದ್ದಾನೆ ಎನ್ನಲಾದ ಡ್ಯಾನಿಶ್ ಯಾನೆ ದಿನೇಶ್ ಹಾಗೂ ಆತನ ಪತ್ನಿ ಆಶಾ ಮತ್ತವರ ಗಂಡು ಮಗುವಿಗೆ ಈ ವ್ಯಕ್ತಿಯು ಕೊರೋನ ಲಾಕ್‌ಡೌನ್ ಅವಧಿಯಲ್ಲೇ ಮಠದಗುಡ್ಡೆ ಸೈಟಿನ ಪುಷ್ಪಾಕಣ್ಣನ್ ಎಂಬವರ ಮನೆಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಟ್ಟಿದ್ದರು ಎನ್ನಲಾಗಿದೆ. ಈ ಕುಟುಂಬದ ಮೇಲೆ ಸಂಶಯ ವ್ಯಕ್ತಪಡಿ ಸಿದ ಸ್ಥಳೀಯರು ಗ್ರಾಪಂ, ಆರೋಗ್ಯಾಧಿಕಾರಿಗಳಿಗೆ ನೀಡಿದ ದೂರಿನ ಮೇರಗೆ ಕೆಲವು ದಿನಗಳ ಹಿಂದೆ ನೋಡೆಲ್ ಅಧಿಕಾರಿ ರಾಜಲಕ್ಷ್ಮಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕುಟುಂಬಕ್ಕೆ ಎಚ್ಚರಿಕೆ ನೀಡಿ ತೆರಳಿದ್ದರು.

ಬಳಿಕ ಗುರುಪುರ ಗ್ರಾಪಂನ ಗ್ರಾಮೀಣ ಕಾರ್ಯಪಡೆ ತುರ್ತು ಸಭೆ ಕರೆದು, ಅನಧಿಕೃತವಾಗಿ ವಾಸಿಸುತ್ತಿದ್ದ ಸದ್ರಿ ಅಜ್ಞಾತ ಕುಟುಂಬವನ್ನು ನಿರಾಶ್ರಿತ ಕೇಂದ್ರಕ್ಕೆ ಸ್ಥಳಾಂತರಿಸಬೇಕು ಮತ್ತು ಆರೋಗ್ಯ ತಪಾಸಣೆ ಮಾಡಬೇಕೆಂದು ನಿರ್ಣಯ ಕೈಗೊಂಡಿತ್ತು. ಕಾರ್ಯಪಡೆಯ ಸದಸ್ಯ ಡಾ. ಅಮಿತ್‌ರಾಜ್ ಗ್ರಾಪಂ ವರದಿ ಪಡೆದು ಉಪತಹಶೀಲ್ದಾರರ ಮೂಲಕ ತಹಶೀಲ್ದಾರರಿಗೆ ಕಳುಹಿಸಿದ್ದರು. ಗುರುವಾರ ಬೆಳಗ್ಗೆ ಸ್ಥಳಕ್ಕಾಗಮಿಸಿದದ ಉಪತಹಶೀಲ್ದಾರ್, ಪಿಡಿಒ, ಕೋವಿಡ್ ವಿಶೇಷ ಅಧಿಕಾರಿ, ಆಶಾ ಕಾರ್ಯಕರ್ತೆಯರ ತಂಡ ಮೂವರನ್ನು ವಶಕ್ಕೆ ಪಡೆದು ಡ್ಯಾನಿಶ್ ಹಾಗೂ ಮಗುವನ್ನು ಮಂಗಳೂರು ಪುರಭವನದ ನಿರಾಶ್ರಿತ ಕೇಂದ್ರ ಹಾಗೂ ಮಹಿಳೆಯನ್ನು ಲೇಡಿಗೋಶನ್ ಆಸ್ಪತ್ರೆಗೆ ದಾಖಲಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X