ರಾಜ್ಯದಲ್ಲಿ 500ರ ಗಡಿದಾಟಿದ ಕೊರೋನ ಸೋಂಕಿತರ ಸಂಖ್ಯೆ
ಇದುವರೆಗೆ 18 ಸಾವು, 158 ಮಂದಿ ಗುಣಮುಖ

ಸಾಂದರ್ಭಿಕ ಚಿತ್ರ
ಬೆಂಗಳೂರು, ಎ.25: ರಾಜ್ಯದಲ್ಲಿ ಶನಿವಾರ ಮತ್ತೆ 26 ಮಂದಿಯಲ್ಲಿ ಕೊರೋನ ವೈರಸ್ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 500ಕ್ಕೇರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಸಂಜೆ ಬಿಡುಗಡೆಗೊಳಿಸಿರುವ ಆರೋಗ್ಯ ಬುಲೆಟಿನಲ್ಲಿ ಶುಕ್ರವಾರ ಸಂಜೆ 5ರಿಂದ ಶನಿವಾರ ಸಂಜೆ 5 ಗಂಟೆಯೊಳಗೆ ರಾಜ್ಯದಲ್ಲಿ 26 ಹೊಸ ಪ್ರಕರಣಗಳು ವರದಿಯಾಗಿರುವುದಾಗಿ ತಿಳಿಸಲಾಗಿದೆ.
ಈ ಪೈಕಿ ಬೆಂಗಳೂರು ನಗರದ 6 ಮತ್ತು 17 ವರ್ಷದ ಇಬ್ಬರು ಬಾಲಕರು, ಬೆಳಗಾವಿಯ 8 ವರ್ಷದ ಬಾಲಕ, ಚಿಕ್ಕಬಳ್ಳಾಪುರದ 18 ವರ್ಷದ ಬಾಲಕನಿಗೆ ಸೋಂಕು ದೃಢಪಟ್ಟಿದೆ. ಅಲ್ಲದೇ, ದ.ಕ ಜಿಲ್ಲೆಯ ಬಂಟ್ವಾಳದ 33 ವರ್ಷದ ಮಹಿಳೆಯಲ್ಲೂ ಸೋಂಕು ಪತ್ತೆಯಾಗಿದೆ.
ಈ ನಡುವೆ ರಾಜ್ಯದಲ್ಲಿ ಕೊರೋನ ಸೋಂಕಿಗೊಳದ ಒಟ್ಟು 500 ಮಂದಿಯ ಪೈಕಿ 158 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 18 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ವರದಿ ತಿಳಿಸಿದೆ.
Next Story





