Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿಎಲ್‌ಓಗಳ ಮೂಲಕ ಮನೆ ಮನೆ ತಪಾಸಣೆ:...

ಬಿಎಲ್‌ಓಗಳ ಮೂಲಕ ಮನೆ ಮನೆ ತಪಾಸಣೆ: ಮಹೇಶ್ವರ ರಾವ್

ವಾರ್ತಾಭಾರತಿವಾರ್ತಾಭಾರತಿ25 April 2020 7:58 PM IST
share
ಬಿಎಲ್‌ಓಗಳ ಮೂಲಕ ಮನೆ ಮನೆ ತಪಾಸಣೆ: ಮಹೇಶ್ವರ ರಾವ್

ಉಡುಪಿ, ಎ.25: ಜಿಲ್ಲೆಯಲ್ಲಿರುವ ಪ್ರತಿ ಮನೆಗೆ ಭೇಟಿ ನೀಡಿ, ಶೀತ ಜ್ವರ ಇರುವವರ ವಿವರಗಳನ್ನು ಬಿಎಲ್‌ಓಗಳ ಮೂಲಕ ಸಂಗ್ರಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್ ಸಲಹೆ ನೀಡಿದ್ದಾರೆ.

ಶನಿವಾರ ಮಣಿಪಾಲದಲ್ಲಿರುವ ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯಲ್ಲಿ ಕೊರೋನ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯಲ್ಲಿ ಪ್ರಸ್ತುತ ಕೊರೋನಾ ಪ್ರಕರಣ ಇಲ್ಲವಾದರೂ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಶೀತಜ್ವರ ಇರುವವರ ಕುರಿತು ಮನೆ ಮನೆಗಳ ವ್ಯಾಪಕ ತಪಾಸಣೆ ನಡೆಸುವಂತೆ ಸೂಚಿಸಿದ ಮಹೇಶ್ವರ ರಾವ್, ಈ ಕುರಿತಂತೆ ಜಿಲ್ಲೆಯ ಎಲ್ಲಾ ಬಿಎಲ್‌ಓಗಳನ್ನು ಬಳಸಿಕೊಳ್ಳು ವಂತೆ ಹಾಗೂ ತಪಾಸಣೆ ನಡೆಸಲು ಅವರಿಗೆ ಅಗತ್ಯವಿರುವ ತರಬೇತಿ ನೀಡುವಂತೆ ತಿಳಿಸಿದರು. ಅಲ್ಲದೇ ಮಾಹಿತಿ ದಾಖಲಿಸಲು ಅಗತ್ಯ ನಮೂನೆಯನ್ನು ಸಿದ್ದಪಡಿಸಿ ನೀಡಿ, ಮುಂದಿನ 3 ದಿನದಲ್ಲಿ ಎಲ್ಲಾ ಬಿಎಲ್‌ಓಗಳಿಗೆ ತರಬೇತಿ ನೀಡುವ ಕಾರ್ಯಕ್ರವು ಮುಗಿಸುವಂತೆಯೂ ಸೂಚಿಸಿದರು.

ಜಿಲ್ಲೆಯ ಜನತೆ ತಮಗೆ ತೀವ್ರತರ ಜ್ವರ ಮತ್ತು ಶೀತ, ಉಸಿರಾಟದ ತೊಂದರೆ ಯಿದ್ದಲ್ಲಿ ಸ್ವಯಂ ಪ್ರೇರಿತವಾಗಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿ ಅಗತ್ಯ ಚಿಕಿತ್ಸೆ ಪಡೆಯಬೇಕು. ಇದರಿಂದ ತಮ್ಮ ಆರೋಗ್ಯ ಕಾಪಾಡಿಕೊಳ್ಳುವುದರ ಜೊತೆಗೆ ಸಮಾಜದ ಇತರೆ ವ್ಯಕ್ತಿಗಳ ಆರೋಗ್ಯವನ್ನು ರಕ್ಷಿಸಲು ಸಾಧ್ಯವಾಗಲಿದೆ ಎಂದರು

ಜಿಲ್ಲೆಯಲ್ಲಿ ಕಳ್ಳಬಟ್ಟಿ ತಯಾರಿಕೆ, ಸರಬರಾಜು ಕುರಿತಂತೆ ಹೆಚ್ಚಿನ ನಿಗಾ ಇರಿಸುವಂತೆಯೂ ಮಹೇಶ್ವರ ರಾವ್ ಸೂಚಿಸಿದರು. ಜಿಲ್ಲೆಯಲ್ಲಿ ಕೊರೋನ ಪಾಸಿಟಿವ್ ಪ್ರಕರಣ ಕಂಡು ಬಂದ ಕೂಡಲೆ, ಸೋಂಕಿತರ ಪ್ರಥಮ ಮತ್ತು ದ್ವಿತೀಯ ಸಂಪರ್ಕದಲ್ಲಿದ್ವವರನ್ನು ಅತ್ಯಂತ ಕ್ಷಿಪ್ರವಾಗಿ ಗುರುತಿಸಿ, ಅವರನ್ನು ಕ್ವಾರಂಟೈನ್ ಮಾಡುವುದರ ಮೂಲಕ ರೋಗ ಹರಡುವುದನ್ನು ನಿಯಂತ್ರಿಸಲು ಜಿಲ್ಲಾಡಳಿತ ಕೈಗೊಂಡಕ್ರಮಗಳಿಗೆ ಮಹೇಶ್ವರ ರಾವ್ ಮೆಚ್ಚುಗೆ ವ್ಯಕ್ತಪಡಿಸಿದರು.

ಉಡುಪಿಗೆ ಹೊರ ಜಿಲ್ಲೆಯಿಂದ ಪಾಸ್ ಪಡೆದು ಬರುವವರನ್ನು ಹೋಮ್ ಕ್ವಾರಂಟೈನ್‌ನಲ್ಲಿ ಮತ್ತು ಅನಧಿಕೃತವಾಗಿ ಬರುವವರನ್ನು ಪೊಲೀಸ್ ಕ್ವಾರಂಟೈನ್ ನಲ್ಲಿಡಲಾಗುತ್ತಿದೆ. ಉತ್ತರಕನ್ನಡ ಜಿಲ್ಲೆಯಿಂದ ಮಣಿಪಾಲದಲ್ಲಿ ಚಿಕಿತ್ಸೆಗಾಗಿ ಬರುವ ರೋಗಿಗಳಿಗೆ ಯಾವುದೇ ನಿರ್ಬಂದ ಇಲ್ಲ. ಕಳೆದ 28 ದಿನಗಳಿಂದ ಜಿಲ್ಲೆಯಲ್ಲಿ ಯಾವುದೇ ಕೊರೋನ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಜಿಲ್ಲೆ ಯಲ್ಲಿ ವಿವಿಧ ಶೆಲ್ಟರ್ ರೂಮ್‌ಗಳಲ್ಲಿದ್ದ 560 ವಲಸೆ ಕಾರ್ಮಿಕರನ್ನು ಶನಿವಾರ ಅವರ ಸ್ವಂತ ಸ್ಥಳಗಳಿಗೆ ಕಳುಸಲಾಗಿದೆ. ಉಳಿದವರನ್ನು ಸಹ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಜಿಲ್ಲೆಯಲ್ಲಿ ಇದುವರೆಗಿನ ಕೊರೋನ ಪ್ರಕರಣಳು, ಶಂಕಿತರ ತಪಾಸಣೆ ಮುಂತಾದ ವಿಷಯಗಳ ಕುರಿತು ಸಮಗ್ರ ಮಾಹಿತಿಯನ್ನು ಜಿಲ್ಲಾ ಕೊರೋನ ನಿಯಂತ್ರಣದ ನೋಡೆಲ್ ಅಧಿಕಾರಿ ಡಾ. ಪ್ರಶಾಂತ್ ಭಟ್ ನೀಡಿದರು.

ಸಭೆಯಲ್ಲಿ ಜಿಪಂ ಸಿಇಓ ಪ್ರೀತಿ ಗೆಹ್ಲೋಟ್, ಎಸ್ಪಿ ವಿಷ್ಣುವರ್ಧನ್, ಕರಾವಳಿ ಕಾವಲು ಪಡೆಯ ಎಸ್ಪಿ ಚೇತನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಡಿಹೆಚ್‌ಓ ಡಾ.ಸುಧೀರ್‌ಚಂದ್ರ ಸೂಡ, ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್, ಜಿಲ್ಲೆಯ ಎಲ್ಲಾ ತಹಶೀಲ್ದಾರ್‌ಗಳು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X