ಬಂಟ್ವಾಳ: ಮಹೇಂದ್ರ ಕುಮಾರ್ ನಿಧನಕ್ಕೆ ಸಂತಾಪ
ಬಂಟ್ವಾಳ, ಎ.25: ಪ್ರಗತಿಪರ ಚಿಂತಕ, ಖ್ಯಾತ ವಾಗ್ಮಿ ಮಹೇಂದ್ರ ಕುಮಾರ್ ಅವರ ಅಕಾಲಿಕ ನಿಧನಕ್ಕೆ ಬಂಟ್ವಾಳ ತಾಲೂಕಿನ ವಿವಿಧ ಸಂಘಟನೆಗಳು, ರಾಜಕೀಯ, ಸಾಮಾಜಿಕ ನಾಯಕರು ಸಂತಾಪ ಸೂಚಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಬಂಟ್ವಾಳ ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ, ಬಂಟ್ವಾಳ ಪುರಸಭಾ ಸದಸ್ಯರಾದ ಲುಕ್ಮಾನ್ ಬಿ.ಸಿ.ರೋಡ್, ಮುನೀಶ್ ಅಲಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಉಮರ್ ಫಾರೂಕು ಫರಂಗಿಪೇಟೆ, ಎಸ್ಕೆಎಸ್ಸೆಸ್ಸೆಫ್ ದ.ಕ. ಜಿಲ್ಲಾ ಉಪಾಧ್ಯಕ್ಷ ಸಿದ್ದೀಕ್ ಅಬ್ದುಲ್ ಖಾದರ್ ಬಂಟ್ವಾಳ, ದ.ಕ. ಯಮಾನಿ ಅಸೋಸಿಯೇಶನ್‍ನ ಪ್ರಧಾನ ಕಾರ್ಯದರ್ಶಿ ಅಬ್ದುಸಲಾಂ ತುಂಬೆ, ಸಾಮಾಜಿಕ ಹೋರಾಟಗಾರ ಪಿ.ಎ.ರಹೀಂ, ಸಜಿಪನಡು ಗ್ರಾಮ ಪಂಚಾಯತ್ ಅಧ್ಯಕ್ಷ ಮುಹಮ್ಮದ್ ನಾಸೀರ್, ಪುದು ಗ್ರಾಮ ಪಂಚಾಯತ್ ಸದಸ್ಯ ಹಾಶಿರ್ ಪೇರಿಮಾರ್ ಸಹಿತಿ ಸಂವಿಧಾನ ಸಂರಕ್ಷಣಾ ಸಮಿತಿ ಬಂಟ್ವಾಳ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ, ಎಸ್ಕೆಎಸ್ಸೆಸ್ಸೆಫ್ ಬಂಟ್ವಾಳ, ಸೋಸಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಸಂತಾಪ ಸೂಚಿಸಿದೆ.





