ಬೆಂಗಳೂರು: ಅರ್ನಬ್ ಗೋಸ್ವಾಮಿ ವಿರುದ್ಧ ಕಾಂಗ್ರೆಸ್ ಶಾಸಕಿ ದೂರು

ಬೆಂಗಳೂರು, ಎ.25: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕುರಿತು ಅವಹೇಳನಕಾರಿ ಮಾತುಗಳನ್ನಾಡಿದ್ದಾರೆಂದು ಆರೋಪಿಸಿ ಪತ್ರಕರ್ತ ಅರ್ನಬ್ ಗೋಸ್ವಾಮಿ ವಿರುದ್ಧ ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿ, ಇಲ್ಲಿನ ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಜೆಪಿ ನಗರ ಪೊಲೀಸ್ ಠಾಣೆಗೆ ಶುಕ್ರವಾರ ತಡರಾತ್ರಿ ಭೇಟಿ ನೀಡಿದ ಅವರು, ಅರ್ನಬ್ ಗೋಸ್ವಾಮಿ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಲಿಖಿತ ದೂರು ನೀಡಿದರು.

ವಿವಿಧ ಧರ್ಮಗಳ ಜನತೆಯನ್ನು ಆಧಾರ ರಹಿತವಾಗಿ ಪ್ರಚೋದಿಸುವ ಮೂಲಕ ದ್ವೇಷದ ವಿಷ ಬೀಜವನ್ನು ಬಿತ್ತುತ್ತಿದ್ದಾರೆ. ಈ ಅಮಾನವೀಯ ನಡವಳಿಕೆ ಸ್ವೀಕಾರಾರ್ಹವಲ್ಲ ಮತ್ತು ಅದನ್ನು ನಾವು ಎಂದಿಗೂ ಸಹಿಸಬಾರದು ಎಂದು ಶಾಸಕಿ ಸೌಮ್ಯಾ ರೆಡ್ಡಿ ಹೇಳಿದರು.
Next Story





