ಮೈಸೂರು: ಮೀನು ಹಿಡಿಯಲು ತೆರಳಿದ್ದ ಅರಣ್ಯ ಸಿಬ್ಬಂದಿಗಳಿಬ್ಬರು ನೀರುಪಾಲು

ಮೈಸೂರು,ಎ.25: ಅರಣ್ಯಾಧಿಕಾರಿಗಳ ಸೂಚನೆಯಂತೆ ಕಬಿನಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಅರಣ್ಯ ಸಿಬ್ಬಂದಿಗಳು ನೀರುಪಾಲಾದ ಘಟನೆ ಎಚ್.ಡಿ.ಕೋಟೆ ತಾಲೂಕಿನ ಎನ್.ಬೇಗೂರಿನ ಗುಂಡ್ರೆ ಅರಣ್ಯ ವಲಯದಲ್ಲಿ ನಡೆದಿದೆ.
ಕಬಿನಿ ಹಿನ್ನೀರಿನ ಗುಂಡ್ರೆ ಅರಣ್ಯ ವ್ಯಾಪ್ತಿಯಲ್ಲಿ ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದೆ. ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ನಾಲ್ವರು ಮೀನು ಹಿಡಿಯಲು ತೆರಳಿದ್ದರು ಎನ್ನಲಾಗಿದ್ದು, ಈ ವೇಳೆ ಇಬ್ಬರು ನೀರಿನಲ್ಲಿ ಮುಳುಗಿದ್ದು, ಮತ್ತಿಬ್ಬರು ಈಜಿ ದಡ ಸೇರಿದ್ದಾರೆ. ಮೃತರನ್ನು ಶಿವಕುಮಾರ್, ಮಹೇಶ ಎಂದು ಗುರುತಿಸಲಾಗಿದ್ದು, ಶಿವಕುಮಾರ್ ಮೃತದೇಹ ಪತ್ತೆಯಾಗಿದೆ. ಮಹೇಶ್ ಅವರಿಗಾಗಿ ಹುಡುಕಾಟ ಮುಂದುವರಿದಿದೆ.
ಘಟನಾ ಸ್ಥಳಕ್ಕೆ ಅರಣ್ಯ, ಪೊಲೀಸ್ ಇಲಾಖೆ ಸಿಬ್ಬಂದಿಗಳು ದೌಡಾಯಿಸಿದ್ದು, ತನಿಖೆ ನಡೆಸುತಿದ್ದಾರೆ. ಈ ಸಂಬಂಧ ಬೀಚನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





