ಕೊಣಾಜೆ: 1500 ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

ಕೊಣಾಜೆ: ಲಾಕ್ ಡೌನ್ ನಿಂದಾಗಿ ಆರ್ಥಿಕವಾಗಿ ಹಿಂದುಳಿದವರು ಮಾತ್ರವಲ್ಲದೆ ಮಧ್ಯಮ ಹಾಗೂ ದುಡಿಯುವ ವರ್ಗ ಸಂಕಷ್ಟಕ್ಕೀಡಾಗಿದೆ. ಸದಾ ಸೇವೆಯಲ್ಲಿ ತೊಡಗಿಸಿಕೊಂಡಿರುಸವ ಸಂಘ ಸಂಕಷ್ಟದ ಸಂದರ್ಭದಲ್ಲಿ ತುರ್ತು ಸಭೆ ನಡೆಸಿ ಧರ್ಮಾತೀತವಾಗಿ ಆಹಾರ ಸಾಮಗ್ರಿಗಳನ್ನು ವಿತರಿಸುವ ಮೂಲಕ ಸಾಮಾಜಿಕ ಬದ್ಧತೆ ಪ್ರದರ್ಶಿಸಿದೆ ಎಂದು ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಮಹಮ್ಮದ್ ಮುಸ್ತಫಾ ಮಲಾರ್ ಅಭಿಪ್ರಾಯಪಟ್ಟರು.
ಲಾಕ್ ಡೌನ್ ಹಿನ್ನೆಲೆಯಲ್ಲಿ 1500 ಅರ್ಹ ಕುಟುಂಬಗಳಿಗೆ ಮಂಗಳೂರು ಬಂದರು ಉತ್ತರ ಧಕ್ಕೆ ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಸಹಕಾರಿ ಸಂಘದ ವತಿಯಿಂದ 21 ಲಕ್ಷ ರೂ. ಮೌಲ್ಯದ ಆಹಾರ ಸಾಮಗ್ರಿಗಳ ಕಿಟ್ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.
ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಸಹಕಾರಿ ಸಂಘದ ಕಚೇರಿಯಲ್ಲಿ ಅಧ್ಯಕ್ಷ ಜೆ.ಮಹಮ್ಮದ್ ಇಸಾಕ್ ಚಾಲನೆ ನೀಡಿದರು. ಈ ಸಂದರ್ಭ ಉಪಾಧ್ಯಕ್ಷ ಅಹ್ಮದ್ ಬಾವ ಬಜಾಲ್, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಬ್ದುಲ್ ಲತೀಫ್, ನಿರ್ದೇಶಕರುಗಳಾದ ಯು.ಟಿ.ಅಹ್ಮದ್ ಶರೀಫ್, ಬಿ.ಇಬ್ರಾಹಿಂ, ಮುಹಮ್ಮದ್ ಅಶ್ರಫ್, ಎಂ.ಎ.ಗಫೂರ್, ಎಸ್.ಕೆ.ಇಸ್ಮಾಯಿಲ್, ಎಸ್.ಎಂ.ಇಬ್ರಾಹಿಂ, ಟಿ.ಎಚ್.ಹಮೀದ್, ಸುದತ್, ಬಿ. ಮುಹಮ್ಮದ್ ಶಾಲಿ, ಎ.ಎಂ.ಕೆ.ಮುಹಮ್ಮದ್ ಇಬ್ರಾಹಿಂ, ಬಿ.ಕೆ.ರಝಿಯಾ ಮೊದಲಾದವರು ಉಪಸ್ಥಿತರಿದ್ದರು.







