Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿದೇಶದಲ್ಲಿ ಸಿಲುಕಿರುವ ಕನ್ನಡಿಗರು ಆತಂಕ...

ವಿದೇಶದಲ್ಲಿ ಸಿಲುಕಿರುವ ಕನ್ನಡಿಗರು ಆತಂಕ ಪಡಬೇಕಿಲ್ಲ: ಸಿಎಂ ಯಡಿಯೂರಪ್ಪ ಅಭಯ

ವಾರ್ತಾಭಾರತಿವಾರ್ತಾಭಾರತಿ26 April 2020 9:59 PM IST
share
ವಿದೇಶದಲ್ಲಿ ಸಿಲುಕಿರುವ ಕನ್ನಡಿಗರು ಆತಂಕ ಪಡಬೇಕಿಲ್ಲ: ಸಿಎಂ ಯಡಿಯೂರಪ್ಪ ಅಭಯ

ಬೆಂಗಳೂರು, ಎ. 26: ವಿದೇಶಗಳಲ್ಲಿ ಸಿಲುಕಿಕೊಂಡ ಕನ್ನಡಿಗರನ್ನು ವಾಪಸ್ ಕರೆಸಿಕೊಳ್ಳುವ ಬಗ್ಗೆ ಅಂತರಾಷ್ಟ್ರೀಯ ವಿಮಾನ ಸಂಚಾರ ಪ್ರಾರಂಭವಾದ ನಂತರ ಕೇಂದ್ರ ಸರಕಾರದೊಂದಿಗೆ ಸಮನ್ವಯ ವಹಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಭರವಸೆ ವ್ಯಕ್ತಪಡಿಸಿದ್ದಾರೆ.

ರವಿವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂಗ್ಲೆಂಡಿನಲ್ಲಿ ನೆಲೆಸಿರುವ ಕನ್ನಡಿಗರೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರು, ತಮ್ಮ ಹೆತ್ತವರು, ಪೋಷಕರ ಕುರಿತು ಯಾವುದೇ ಕಾರಣಕ್ಕೂ ಆತಂಕ ಪಡಬೇಕಿಲ್ಲ ಎಂದು ಅಭಯ ನೀಡಿದರು.

ಸರಕಾರದ ಸಹಾಯವಾಣಿಗೆ ಸಂಪರ್ಕಿಸಿದರೆ, ಕೂಡಲೇ ಅವರಿಗೆ ವೈದ್ಯಕೀಯ ಅಥವಾ ಇತರೆ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದ ಅವರು, ಶೈಕ್ಷಣಿಕ ಸಾಲ ಪಡೆದು ವಿದೇಶಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಸಾಲ ಮರುಪಾವತಿ ಸಮಸ್ಯೆ ಕುರಿತು ಕೊರೋನ ವೈರಸ್ ಸೋಂಕು ನಿಯಂತ್ರಣಕ್ಕೆ ಬಂದ ನಂತರ ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದರು.

ಇಂಗ್ಲೆಂಡಿನ ಸಚಿವರ ಮೆಚ್ಚುಗೆ: ಭಾರತದಲ್ಲಿ ವಿಶೇಷವಾಗಿ ಕರ್ನಾಟಕ ರಾಜ್ಯದಲ್ಲಿ ಕೊರೋನ ವೈರಸ್ ಸೋಂಕು ನಿಯಂತ್ರಣ ಮತ್ತು ಲಾಕ್‍ಡೌನ್ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಇಂಗ್ಲೆಂಡಿನ ಲಾರ್ಡ್ ಚಾನ್ಸಲರ್ ಮತ್ತು ಕಾನೂನು ಸಚಿವ ರಾಬರ್ಟ್ ಬಕ್ಲೆಂಡ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಾಬರ್ಟ್ ಬಕ್ಲೆಂಡ್ ಅವರು ಭಾರತದಲ್ಲಿ ವಿಶೇಷವಾಗಿ ಕರ್ನಾಟಕ ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣವನ್ನು ಯಶಸ್ವಿಯಾಗಿ ನಿರ್ವಹಣೆ ಮಾಡುವ ಕುರಿತು ಮಾಹಿತಿ ಪಡೆದುಕೊಂಡರು. ಅವರ ಪ್ರಶ್ನೆಗಳಿಗೆ ಉತ್ತರಿಸಿದ ಯಡಿಯೂರಪ್ಪ, ಲಾಕ್‍ಡೌನ್ ಅನುಷ್ಠಾನ ಪರಿಣಾಮಕಾರಿಯಾಗಿ ಮಾಡಲಾಗುತ್ತಿದೆ. ಆಹಾರ ಮತ್ತಿತರ ಅಗತ್ಯ ವಸ್ತುಗಳ ಪೂರೈಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಯಾರೊಬ್ಬರು ಹಸಿವಿನಿಂದ ಇರಬಾರದು ಎಂದು ಸರಕಾರ ಕ್ರಮ ವಹಿಸಿದೆ ಎಂದರು.

ಮುಂದಿನ ದಿನಗಳಲ್ಲಿ ಕೇಂದ್ರ ಸರಕಾರದ ಮಾರ್ಗಸೂಚಿಗಳಂತೆ ಆರ್ಥಿಕ ಚಟುವಟಿಕೆಗಳನ್ನು ಹಂತ ಹಂತವಾಗಿ ಮರು ಪ್ರಾರಂಭ ಮಾಡಲಾಗುವುದು ಎಂದ ಅವರು, ಗ್ರಾಮೀಣ ಪ್ರದೇಶದಲ್ಲಿ ಕೊರೋನ ವೈರಸ್ ಸೋಂಕು ಹರಡದೆ ಇರುವ ಬಗ್ಗೆ ರಾಬರ್ಟ್ ಬಕ್ಲೆಂಡ್ ಸಮಾಧಾನ ಹಾಗೂ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X