Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕುಬೇರ ಉದ್ಯೋಗಪತಿಗಳಿಂದ ಕೊರೋನ ತೆರಿಗೆ...

ಕುಬೇರ ಉದ್ಯೋಗಪತಿಗಳಿಂದ ಕೊರೋನ ತೆರಿಗೆ ಸಂಗ್ರಹಿಸಲು ಕುಮಾರಸ್ವಾಮಿ ಸಲಹೆ

ವಾರ್ತಾಭಾರತಿವಾರ್ತಾಭಾರತಿ27 April 2020 5:01 PM IST
share
ಕುಬೇರ ಉದ್ಯೋಗಪತಿಗಳಿಂದ ಕೊರೋನ ತೆರಿಗೆ ಸಂಗ್ರಹಿಸಲು ಕುಮಾರಸ್ವಾಮಿ ಸಲಹೆ

ಬೆಂಗಳೂರು, ಎ. 27: 'ಅನೇಕ ಖಾಸಗಿ ಕಂಪೆನಿಗಳು ಈಗಾಗಲೇ ಸಿಬ್ಬಂದಿ ಕಡಿತ ಮತ್ತು ಸಂಬಳ ಕಡಿತ ಮಾಡುವ ತೀರ್ಮಾನ ತೆಗೆದುಕೊಂಡಿವೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನೂ ಬಿಗಡಾಯಿಸಲಿದೆ. ಹೀಗಾಗಿ ಸರಕಾರ ಜನ ಕಲ್ಯಾಣ ಯೋಜನೆಗಳ ಮೇಲೆ ಹೆಚ್ಚು ಖರ್ಚು ಮಾಡಬೇಕಾಗಿರುವುದರಿಂದ ಕುಬೇರ ಉದ್ಯೋಗಪತಿಗಳಿಂದ ಕೊರೋನ ತೆರಿಗೆಯನ್ನು ಸಂಗ್ರಹಿಸಲಿ' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಸಲಹೆ ಮಾಡಿದ್ದಾರೆ.

ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು, 'ರೈತರು ಮತ್ತು ಅಸಂಘಟಿತ ವಲಯದ ಕಾರ್ಮಿಕರ ಜೀವನೋಪಾಯಗಳ ರಕ್ಷಣೆ ಮಾಡುವುದು ತುರ್ತಿನ ಆದ್ಯತೆಯಾಗಿದೆ. ಟ್ಯಾಕ್ಸಿ ಮತ್ತು ಆಟೋ ಚಾಲಕರು, ಗಾರ್ಮೆಂಟ್ ಕೆಲಸಗಾರರು, ಕಟ್ಟಡ ಕಾರ್ಮಿಕರು ಇತ್ಯಾದಿ ನಗರ ಪ್ರದೇಶದ ಬಡ ಸಮುದಾಯಕ್ಕೋಸ್ಕರ ಸರಕಾರ ಹೆಚ್ಚಿನ ಪರಿಹಾರ ಒದಗಿಸುವ ಕೆಲಸ ಮಾಡಬೇಕಾಗಿದೆ' ಎಂದು ಸೂಚಿಸಿದ್ದಾರೆ.

ಈ ಹಠಾತ್ ಶಾಕ್‍ನಿಂದ ಜನಸಾಮಾನ್ಯರು ಸುಧಾರಿಸಿಕೊಳ್ಳಲು ಅನುವಾಗುವಂತೆ ಬಾಡಿಗೆ ವಿನಾಯಿತಿ, ಖಾಸಗಿ ಸ್ಕೂಲ್/ಕಾಲೇಜುಗಳ ಫೀಸ್ ಕಡಿತ, ವಿದ್ಯುತ್ ಬಿಲ್ ಕಡಿತ, ಪೆಟ್ರೋಲ್/ಡೀಸೆಲ್ ದರ ಕಡಿತ ಘೋಷಣೆ ಮಾಡುವುದು ಸೂಕ್ತ. ಲಾಕ್‍ಡೌನ್ ತೆಗೆದ ತಕ್ಷಣವೇ ಆರ್ಥಿಕ ಸ್ಥಿತಿ ಯಥಾಸ್ಥಿತಿಗೆ ಮರಳಲಾರದು. ಜಿಡಿಪಿ ಬೆಳವಣಿಗೆ ಈ ಹಿಂದೆ ಇದ್ದ ಸ್ಥಿತಿಗೆ ಮರಳಲು ವರ್ಷಗಳೇ ಬೇಕಾಗಬಹುದು' ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ರಿಸರ್ವ್ ಬ್ಯಾಂಕ್ ಒಳಗೊಂಡಂತೆ ಅನೇಕ ಸಂಸ್ಥೆಗಳು ಭಾರತದ ಜಿಡಿಪಿ ಬೆಳವಣಿಗೆ ತೀವ್ರ ಕುಸಿತಕ್ಕೆ ಇಳಿಯುವ ಮುನ್ಸೂಚನೆ ಕೊಟ್ಟಿರುವಾಗ ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನಸಾಮಾನ್ಯನ ಕೈಯಲ್ಲಿ ಹಣ ಉಳಿಸುವ ಮಾರ್ಗೋಪಾಯಗಳನ್ನು ಹುಡುಕಬೇಕಾಗುತ್ತದೆ. ಮುಂಬರುವ ದಿನಗಳಲ್ಲಿ 'ಕಾಸ್ಟ್ ಆಫ್ ಲಿವಿಂಗ್' ಕಡಿಮೆ ಮಾಡುವುದು ಸರಕಾರಗಳ ಆದ್ಯತೆ ಆಗಲಿದೆ' ಎಂದು ಕುಮಾರಸ್ವಾಮಿ ಅಭಿಪ್ರಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X