ರಾಜ್ಯದಲ್ಲಿ ಲಾಕ್‍ಡೌನ್ ಮುಂದುವರಿಕೆ ಬಗ್ಗೆ ಗೃಹ ಸಚಿವ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು, ಎ.27: ಕೊರೋನ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಜಾರಿಗೊಳಿಸಿರುವ ಲಾಕ್‍ಡೌನ್ ಪ್ರಕ್ರಿಯೆ ಮುಂದುವರಿಯುವ ಕುರಿತು ಸದ್ಯಕ್ಕೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿನ ಪರಿಸ್ಥಿತಿಯನ್ನು ಸಂಪೂರ್ಣ ನಿಯಂತ್ರಣಕ್ಕೆ ತರಲು ಸರಕಾರ ಎಲ್ಲ ರೀತಿಯ ಕ್ರಮ ಕೈಗೊಂಡಿದೆ. ಪ್ರಧಾನಿಗಳ ಸಲಹೆ ಸೂಚನೆ ಆಧರಿಸಿ ಲಾಕ್‍ಡೌನ್ ಕುರಿತು ನಿರ್ಧಾರ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.
ಕೊರೋನ ಪರಿಸ್ಥಿತಿಯಿಂದ ಸಂತ್ರಸ್ತರಾದ ಜನರಿಗೆ ರಾಜ್ಯ ಸರಕಾರ ಎಲ್ಲ ರೀತಿಯ ನೆರವು ನೀಡಲಿದೆ. ಕರ್ನಾಟಕ ಕೋವಿಡ್ ಮುಕ್ತ ಮಾಡಲು ಸರಕಾರ ಪಣ ತೊಟ್ಟಿದೆ. ರಾಜ್ಯಾದ್ಯಂತ ವೈರಸ್ ನಿಯಂತ್ರಣಕ್ಕೆ ಎಲ್ಲ ರೀತಿಯ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.
Next Story





