ಕೊರೋನ ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿ: ಸಾವಿನ ಸಂಖ್ಯೆ 20ಕ್ಕೆ ಏರಿಕೆ

ಸಾಂದರ್ಭಿಕ ಚಿತ್ರ
ಬೆಂಗಳೂರು, ಎ.27: ರಾಜ್ಯದಲ್ಲಿ ಕೊರೋನ ಸೋಂಕಿಗೆ ಮತ್ತೊಂದು ಸಾವು ಸಂಭವಿಸಿದ್ದು, ಈ ಮೂಲಕ ಸಾವಿನ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.
ಕಲಬುರಗಿಯ 57 ವರ್ಷದ ವ್ಯಕ್ತಿ ಮೃತಪಟ್ಟಿದ್ದು, ಇವರು ಉಸಿರಾಟ ಹಾಗೂ ತೀವ್ರ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರು. ಇವರಿಗೆ ಎ.21ರಂದು ಕೊರೋನ ಸೋಂಕು ದೃಡಪಟ್ಟಿತ್ತು. ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
"ರಾಜ್ಯದಲ್ಲಿ ಕೋವಿಡ್ 19 ಸೋಂಕಿತ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. 57ವರ್ಷದ ಅಳಂದದ ನಿವಾಸಿಯಾಗಿದ್ದ ಇವರಲ್ಲಿ ಎಪ್ರಿಲ್ 21ರಂದು ಕೊರೋನ ಪಾಸಿಟಿವ್ ಬಂದಿತ್ತು. ಉಸಿರಾಟದ ತೊಂದರೆಯಿಂದ ಜಿಮ್ಸ್ ಗೆ ದಾಖಲಾಗಿದ್ದು, ತೀವ್ರ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರು. ಇದರೊಂದಿಗೆ ಕಲ್ಬುರ್ಗಿ ಜಿಲ್ಲೆಯಲ್ಲಿ ಒಟ್ಟು 5 ಕೋವಿಡ್ ಮರಣ ಸಂಭವಿಸಿದಂತಾಗಿದೆ" ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಟ್ವೀಟ್ ಮೂಲಕ ತಿಳಿಸಿದ್ದಾರೆ. ಮಾಡಿದ್ದಾರೆ.
Next Story





