Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ: ಆಶಾ ಕಾರ್ಯಕರ್ತೆಯರು, ನವೋದಯ...

ಬಂಟ್ವಾಳ: ಆಶಾ ಕಾರ್ಯಕರ್ತೆಯರು, ನವೋದಯ ಸಂಘ, ಪತ್ರಕರ್ತರಿಗೆ ಕಿಟ್ ವಿತರಣೆ

ವಾರ್ತಾಭಾರತಿವಾರ್ತಾಭಾರತಿ27 April 2020 9:45 PM IST
share
ಬಂಟ್ವಾಳ: ಆಶಾ ಕಾರ್ಯಕರ್ತೆಯರು, ನವೋದಯ ಸಂಘ, ಪತ್ರಕರ್ತರಿಗೆ ಕಿಟ್ ವಿತರಣೆ

ಬಂಟ್ವಾಳ, ಎ.27: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರಕುಮಾರ್ ಅವರ ನಿರ್ದೇಶನದಂತೆ ಕೋವಿಡ್ ಸಂದರ್ಭ ಹಗಲಿರುಳು ಶ್ರಮಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಆಶಾ ಕಾರ್ಯಕರ್ತೆಯರು, ನವೋದಯ ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ಕಾರ್ಯನಿರತ ಪತ್ರಕರ್ತರಿಗೆ ಆಹಾರ ಸಾಮಗ್ರಿಗಳ ಕಿಟ್ ಅನ್ನು ವಿತರಿಸುವ ಕಾರ್ಯಕ್ರಮದ ಅಂಗವಾಗಿ ಬಿ.ಸಿ.ರೋಡಿನ ಎಸ್.ಜಿ.ಎಸ್.ವೈ. ಸಭಾಂಗಣದಲ್ಲಿ ಸೋಮವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಮೂಲಕ ಸಾಂಕೇತಿಕವಾಗಿ ವಿತರಿಸಲಾಯಿತು.

ಈಗಾಗಲೇ ಮಂಗಳೂರು ಸಹಿತ ಜಿಲ್ಲೆಯ ಇತರ ತಾಲೂಕುಗಳಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಸೋಮವಾರ ಬಂಟ್ವಾಳದಲ್ಲಿ ಕಾರ್ಯಕ್ರಮ ನಡೆದಿದ್ದು, ಒಟ್ಟು 439 ಮಂದಿಗೆ ಕಿಟ್ ವಿತರಿಸಲಾಯಿತು. 

ಈ ಸಂದರ್ಭ ಮಾತನಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಕೊರೊನಾ ಮಾರಿಯನ್ನು ಹೊಡೆದೊಡಿಸಲು ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡುತ್ತಿರುವ ಆಶಾ ಕಾರ್ಯಕರ್ತೆಯರ ಸೇವೆಗೆ ಈ ಕೊಡುಗೆ ನೀಡುತ್ತಿರುವುದು ಶ್ಲಾಘನೀಯ. ಇಂತಹ ಸೇವಾ ಮಹೋಭಾವ ಹೊಂದಿರುವ ಡಾ. ರಾಜೇಂದ್ರಕುಮಾರ್ ಅವರಿಗೆ ಕೃತಜ್ಞತೆಗಳು. ಈಗ ನಮ್ಮ ವೈರಿ ಕೊರೊನಾ ಮಾತ್ರ. ನಾವೆಲ್ಲರೂ ಜತೆಯಾಗಿ ಕೊರೊನಾ ವಿರುದ್ಧ ಹೋರಾಡೋಣ ಎಂದರು.

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಟಿ.ಜಿ.ರಾಜಾರಾಮ ಭಟ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಸ್ತುತ ಎಲ್ಲರ ಆರೋಗ್ಯದ ಹೊಣೆ ಆಶಾ ಕಾರ್ಯಕರ್ತೆಯರ ಮೇಲಿದ್ದು, ಅವರು ತಮ್ಮ ಕಾರ್ಯವನ್ನು ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆ. ಡಾ. ಎಂ.ಎನ್. ಅವರು ಸಹಕಾರಿ ಕ್ಷೇತ್ರದ ಜತೆಗೆ ಸಾಮಾಜಿಕ ಕಳಕಳಿಯ ಕೆಲಸ ಮಾಡುತ್ತಿರುವುದು ಹೆಮ್ಮೆಯ ವಿಚಾರ ಎಂದರು. ಇದೇ ವೇಳೆ ಆಶಾ ಕಾರ್ಯಕರ್ತೆಯರ ಬ್ಯಾಂಕ್ ಖಾತೆಗೆ ತಲಾ 1 ಸಾವಿರ ರೂಗಳನ್ನು ಎಸ್.ಸಿ.ಡಿ.ಸಿ.ಸಿ .ಬ್ಯಾಂಕ್ ವತಿಯಿಂದ ಡಾ.ರಾಜೇಂದ್ರ ಕುಮಾರ್ ನಿರ್ದೇಶನದಂತೆ ನೀಡುವ ಕುರಿತು ಟಿ.ಜಿ.ರಾಜಾರಾಮ ಭಟ್ ಪ್ರಕಟಿಸಿ, ಬ್ಯಾಂಕ್ ಹಲವು ಹಂತಗಳಲ್ಲಿ ಸಾಮಾಜಿಕವಾಗಿ ಸ್ಪಂದಿಸುತ್ತಿದ್ದು, ಆಶಾ ಕಾರ್ಯಕರ್ತೆಯರ ಕಾರ್ಯಕ್ಕೆ ತನ್ನ ಕೊಡುಗೆಯನ್ನು ನೀಡುತ್ತಿದೆ ಎಂದು ತಿಳಿಸಿದರು.

ವೇದಿಕೆಯಲ್ಲಿ ಸ್ಕ್ವ್ಯಾಡ್ಸ್ ಅಧ್ಯಕ್ಷರೂ ಆಗಿರುವ ಜಿಪಂ ಸದಸ್ಯ ರವೀಂದ್ರ ಕಂಬಳಿ, ಜಿಪಂ ಸದಸ್ಯ ಬಿ.ಪದ್ಮಶೇಖರ ಜೈನ್, ಬುಡಾ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಬಂಟ್ವಾಳ ತಾಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಇದ್ದರು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಮೂಲಕ ಆಶಾ ಕಾರ್ಯಕರ್ತೆಯರು, ನವೋದಯ ಕಾರ್ಯಕರ್ತೆಯರು ಕಿಟ್ ಅನ್ನು ಸ್ವೀಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X