ರೌಡಿ ಪ್ರಕಾಶ್ ಕೊಲೆ ಪ್ರಕರಣ: ಇಬ್ಬರ ಬಂಧನ

ಬೆಂಗಳೂರು, ಎ.27: ರೌಡಿ ಪ್ರಕಾಶ್ ಅಪಹರಿಸಿ ಕೊಲೆ ಮಾಡಿದ್ದ ಆರೋಪ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಸೋಲದೇನವಹಳ್ಳಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಾಜಾನುಕುಂಟೆಯ ಲೋಕೇಶ್ ರೆಡ್ಡಿ(39), ಯಲಹಂಕದ ಸಿಂಗನಾಯಕನಹಳ್ಳಿಯ ನಿಖಿಲ್(25) ಬಂಧಿತ ಆರೋಪಿಗಳಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎ.21ರಂದು ರೌಡಿ ಪ್ರಕಾಶ್ ಅನ್ನು ಸುರದೇನಪುರದಿಂದ ಕಾರಿನಲ್ಲಿ ಅಪಹರಿಸಿದ ದುಷ್ಕರ್ಮಿಗಳು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿ ಶವವನ್ನು ಮತ್ಕೂರು ಗ್ರಾಮದ ಬಳಿ ಬಿಸಾಡಿ ಪರಾರಿಯಾಗಿದ್ದರು.ಈ ಸಂಬಂಧ ಮೃತನ ಪತ್ನಿ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಿದ ಸೋಲದೇನವಹಳ್ಳಿ ಪೊಲೀಸರು ಖಚಿತವಾದ ಮಾಹಿತಿ ಆಧರಿಸಿ ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿಗಳು ವಿಚಾರಣೆಯಲ್ಲಿ ಮೃತ ಪ್ರಕಾಶ ರಾಜಾನುಕುಂಟೆ ಪೊಲೀಸ್ ಠಾಣೆಯ ರೌಡಿ ಪಟ್ಟಿಯಲ್ಲಿದ್ದಾನೆ. ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Next Story





