Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಾದರಾಯನಪುರ ಘಟನೆ: ಅಮಾಯಕರ‌ ಬಿಡುಗಡೆಗೆ...

ಪಾದರಾಯನಪುರ ಘಟನೆ: ಅಮಾಯಕರ‌ ಬಿಡುಗಡೆಗೆ ಪಾಪ್ಯುಲರ್ ಫ್ರಂಟ್ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ27 April 2020 10:18 PM IST
share

ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಅಹಿತರ ಘಟನೆಗಳ ಹಿನ್ನೆಲೆಯಲ್ಲಿ ಪೊಲೀಸರು ಅಮಾಯಕರಿಗೆ ನೀಡುತ್ತಿರುವ ಕಿರುಕುಳವನ್ನು ಕೊನೆಗೊಳಿಸಬೇಕು ಮತ್ತು ಕೊರೋನ ನಿಗ್ರಹಿಸುವ ನಿಟ್ಟಿನಲ್ಲಿ ಬಂಧಿತರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಪಾಷ ಒತ್ತಾಯಿಸಿದ್ದಾರೆ.

ಕೊರೋನ ವಿರುದ್ಧದ ಕಾರ್ಯಾಚರಣೆ ವೇಳೆ ಪಾದರಾಯನಪುರದಲ್ಲಿ ನಡೆದ ಅಹಿತಕರ ಘಟನೆ ಖಂಡನಾರ್ಹವಾಗಿದೆ. ಕೊರೋನ ಪಾಸಿಟಿವ್ ವರದಿಯಾದ ಹಿನ್ನೆಲೆಯಲ್ಲಿ ಸೀಲ್‌ಡೌನ್ ಮಾಡಲಾದ ಪಾದರಾಯನಪುರ ಪ್ರದೇಶದಿಂದ ಜನರನ್ನು ಕ್ವಾರಂಟೈನ್‌ಗೊಳಪಡಿಸಲು ಕರೆದೊ ಯ್ಯುವ ವೇಳೆ ಅಲ್ಲಿನ ಜನರಿಗೆ ಯಾವುದೇ ಮುನ್ಸೂಚನೆಯಾಗಲೀ, ಮಾಹಿತಿಯನ್ನಾಗಲೀ ನೀಡಲಾಗಿರಲಿಲ್ಲ ಎಂದು ಹೇಳಲಾಗಿದೆ. ಸ್ಥಳೀಯ ಶಾಸಕರನ್ನು ಕರೆಯಿಸಿ ಆತಂಕವನ್ನು ದೂರ ಮಾಡಬೇಕೆಂಬ ಅಲ್ಲಿನ ಜನರ ಅಹವಾಲನ್ನೂ ಈ ಸಂದರ್ಭದಲ್ಲಿ ತಿರಸ್ಕರಿಸಲಾಗಿತ್ತು.

ನಂತರ ನಡೆದ ಅಹಿತಕರ ಘಟನೆಯನ್ನು  ವರ್ಣರಂಜಿತವಾಗಿ ತೋರಿಸಲಾಯಿತು.ಆದರೆ ಇದೀಗ 121 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಬಂಧಿತರಲ್ಲಿ ಬಹುತೇಕ ಮಂದಿ ಅಮಾಯಕರು ಎಂದು ಹೇಳಲಾಗಿದೆ.

ಬಂಧಿತರಲ್ಲೋರ್ವ ಭಾರತೀಯ ರೆಡ್ ಕ್ರಾಸ್ ಸದಸ್ಯನಾಗಿದ್ದು, ಕೋರೋನ ಸೈನಿಕನಾಗಿ ಇದೇ ಪ್ರದೇಶದಲ್ಲಿ ಪ್ರತಿನಿತ್ಯ 200 ಮಂದಿಗೆ ಆಹಾರ ವಿತರಿಸುತ್ತಿದ್ದು, ಪತ್ನಿಯೊಂದಿಗೆ ತಪಾಸಣೆಗಾಗಿ ವೈದ್ಯರ ಭೇಟಿ ಮಾಡಿದ ಸಂದರ್ಭದಲ್ಲಿ ಬಂಧಿಸಲಾಗಿದೆ. ಆದರೆ ರಾಜ್ಯಾದ್ಯಂತ ತೀವ್ರ ಚರ್ಚೆಗೀಡಾದ ಈ ಘಟನೆಯಲ್ಲಿ, ಸಿಬ್ಬಂದಿಯ ಮೇಲೆ ಹಲ್ಲೆ ನಡೆದಿಲ್ಲ ಎಂಬ ವಿಚಾರವನ್ನು ಈಗಾಗಲೇ ಪೊಲೀಸ್‌ ಆಯುಕ್ತ ಭಾಸ್ಕರ್ ರಾವ್ ಮತ್ತು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಘಟನೆಯ ಬಳಿಕ ಪೊಲೀಸರು ಘಟನಾಸ್ಥಳದ‌ ಆಸುಪಾಸಿನ ಪ್ರದೇಶಗಳಿಗೂ ದಾಳಿ ನಡೆಸಿ ಸೀಲ್‌ಡೌನ್ ನಿಂದಾಗಿ ಮನೆಯಲ್ಲೇ ಉಳಿದಿರುವ ಅಮಾಯಕರನ್ನೂ ಉಟ್ಟ ಉಡುಗೆಯಲ್ಲಿ ಬಂಧಿಸಿ ಕೊಂಡೊಯ್ದಿದ್ದಾರೆ. ಪೊಲೀಸರು ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಿ ಆದರೆ ಅಮಾಯಕರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಬೇಕು. ಜೊತೆಗೆ ನ್ಯಾಯಾಂಗ ಬಂಧನದಲ್ಲಿರುವವರ ಪೈಕಿ ಕೆಲವರ ಕೋರೋನ ವರದಿ ಪೊಸಿಟಿವ್ ಬಂದಿದ್ದು, ಈ ನಿಟ್ಟಿನಲ್ಲಿ ಅವರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ನಾಸಿರ್ ಪಾಷ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X