ವೈದ್ಯಕೀಯ ಸೇವೆಗಳ ಇಲಾಖೆಯ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ
ಬೆಂಗಳೂರು, ಎ.27: ಕರ್ನಾಟಕ ಲೋಕಸೇವಾ ಆಯೋಗ ಕಾರ್ಮಿಕ ರಾಜ್ಯ ವಿಮಾ ಯೋಜನೆಯ ವೈದ್ಯಕೀಯ ಸೇವೆಗಳ ಇಲಾಖೆಯಲ್ಲಿ ವಿಮಾ ವೈದ್ಯಾಧಿಕಾರಿ 143+16 ಹುದ್ದೆಗಳು ಮತ್ತು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯಲ್ಲಿ ಸಹಾಯಕ ಪ್ರಧಾನ ವ್ಯವಸ್ಥಾಪಕರು 09+01(ಹೈ.ಕ) ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿಗಳನ್ನು ಎ.24/27 ರಂದು ಪ್ರಕಟಿಸಿದೆ.
2018ರ ಮಾ.23ರ ಅಧಿಸೂಚನೆಯಲ್ಲಿ ಅಧಿಸೂಚಿಸಿದ ಅಲ್ಪಸಂಖ್ಯಾತರ ನಿರ್ದೇಶನಾಲಯದ ಮೊರಾರ್ಜಿ ದೇಸಾಯಿ ವಸತಿ ಪದವಿಪೂರ್ವ ಕಾಲೇಜುಗಳಲ್ಲಿ ಇತಿಹಾಸ ಉಪನ್ಯಾಸಕರು 07+03 ಹುದ್ದೆಗಳು/ಜೀವಶಾಸ್ತ್ರ ಉಪನ್ಯಾಸಕರು 07+03(ಹೈ.ಕ) ಹುದ್ದೆಗಳ ತಾತ್ಕಾಲಿಕ ಪಟ್ಟಿಗಳನ್ನು ಎ.27ರಂದು ಆಯೋಗದ ಅಂತರ್ಜಾಲದಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.
ಆಕ್ಷೇಪಣೆಗಳನ್ನು ಸಲ್ಲಿಸಬಯಸುವ ಅಭ್ಯರ್ಥಿಗಳು 7 ದಿನಗಳೊಳಗಾಗಿ ಆಯೋಗಕ್ಕೆ ಸಲ್ಲಿಸಲು ಆಯೋಗದ ಪ್ರಕಟಣೆ ತಿಳಿಸಿದೆ.
Next Story





