ಸಿಆರ್‍ಪಿಎಫ್ ಯೋಧನ ಮೇಲೆ ಹಲ್ಲೆ: ಸೂಕ್ತ ಕ್ರಮಕ್ಕೆ ರಮೇಶ್ ಜಾರಕಿಹೊಳಿ ಒತ್ತಾಯ

ಬೆಳಗಾವಿ, ಎ.27: ಬೆಳಗಾವಿ ಜಿಲ್ಲೆಯ ಯಕ್ಸಂಬಾ ಪಟ್ಟಣದಲ್ಲಿ ತನ್ನ ಮನೆಯ ಮುಂದುಗಡೆ ವಾಹನ ತೊಳೆಯುತ್ತಿದ್ದ ಸಿಆರ್‍ಪಿಎಫ್ ಯೋಧನನ್ನು ಮಾಸ್ಕ್ ಧರಿಸಿಲ್ಲ ಎಂಬ ಕಾರಣಕ್ಕೆ ಬಂಧಿಸಿರುವುದು ಖಂಡನೀಯ ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
ಸೋಮವಾರ ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬ ಯೋಧ ಎನ್ನುವುದನ್ನೂ ಅರಿಯದೇ ಸಾರ್ವಜನಿಕವಾಗಿ ನಿಂದಿಸಿ, ಕೈಗೆ ಕೋಳ ತೊಡಿಸಿ ಬಂಧಿಸಿರುವುದನ್ನು ಯಾವುದೇ ಕಾರಣಕ್ಕೂ ಸಮರ್ಥನೆ ಮಾಡಲು ಸಾಧ್ಯವಿಲ್ಲ ಎಂದು ಕಿಡಿಕಾರಿದ್ದಾರೆ.
ಯೋಧನ ಅಭಿಪ್ರಾಯವನ್ನು ಕೇಳದೇ ಏಕಾಏಕಿ ನಿಂದಿಸಿ, ಬಂಧಿಸಿರುವುದು ಸಮವಸ್ತ್ರ ಧರಿಸಿದ ಸೈನಿಕರಿಗೆ ಮಾಡಿದ ಅವಮಾನ. ಕೂಡಲೇ ಬಂಧಿತ ಅರೆ ಸೈನಿಕ ಪಡೆಯ ಯೋಧನನ್ನು ಗೌರವಯುತವಾಗಿ ಬಿಡುಗಡೆ ಮಾಡಬೇಕು. ಕಾರಣ ಕೇಳದೇ ಬಂಧಿಸಿದ ಪೊಲೀಸರ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಗೃಹ ಸಚಿವರನ್ನು ಒತ್ತಾಯಿಸಿದ್ದಾರೆ.
Next Story





