ಮೈಸೂರಿನಲ್ಲಿ ಇದುವರೆಗೆ ಒಟ್ಟು 43 ಮಂದಿ ಕೊರೋನದಿಂದ ಗುಣಮುಖ: ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್

ಮೈಸೂರು,ಎ.27: ಕೋರೋನ ಆತಂಕದಲ್ಲಿದ್ದ ಮೈಸೂರಿಗರು ಸ್ವಲ್ಪ ನಿರುಮ್ಮಳಗೊಂಡಿದ್ದು, ಕಳೆದೆರಡು ದಿನಗಳಿಂದ ಕೊರೋನ ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. ಸೋಮವಾರ ಐದು ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಳ್ಳುವ ಮೂಲಕ ಕೊರೋನ ಸೋಂಕಿತರ ಸಂಖ್ಯೆ 46ಕ್ಕೆ ಇಳಿದಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 89 ಮಂದಿಗೆ ಕೊರೋನ ಸೋಂಕು ಕಂಡು ಬಂದಿದ್ದು, ಅದರಲ್ಲಿ 43 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ನೂತನ ಕೋವಿಡ್-19 ಜಿಲ್ಲಾಸ್ಪತ್ರೆಯಲ್ಲಿ 51 ಮಂದಿ ಐಸೋಲೇಷನ್‍ನಲ್ಲಿ ಚಿಕಿತ್ಸೆ ಪಡೆಯುತಿದ್ದು, ಇಂದು ಐದು ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಸದ್ಯ 46 ಮಂದಿಯಷ್ಟೇ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Next Story





