ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ ಒಂದು ಕೊರೋನ ಪಾಸಿಟಿವ್

ಕಾಸರಗೋಡು : ಜಿಲ್ಲೆಯಲ್ಲಿ ಮಂಗಳವಾರ ಒಬ್ಬ ವ್ಯಕ್ತಿಗೆ ಕೋವಿಡ್ 19 ಸೋಂಕು ಖಚಿತಗೊಂಡಿದೆ. 24 ವರ್ಷ ಪ್ರಾಯದ ಅಜಾನೂರು ನಿವಾಸಿಗೆ ಸೋಂಕು ಖಚಿತವಾಗಿದೆ.
ಜಿಲ್ಲೆಯಲ್ಲಿ ಮಂಗಳವಾರ 1958 ಮಂದಿ ನಿಗಾದಲ್ಲಿದ್ದಾರೆ. ಮನೆಗಳಲ್ಲಿ 1923 ಮಂದಿ ನಿಗಾದಲ್ಲಿದ್ದಾರೆ. ಮಂಗಳವಾರ ನೂತನವಾಗಿ ಇಬ್ಬರನ್ನು ನಿಗಾ ವಾರ್ಡಿಗೆ ದಾಖಲಿಸಲಾಗಿದೆ.
ಜಿಲ್ಲೆಯಲ್ಲಿ ಮಂಗಳವಾರ ಇಬ್ಬರು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಕಾಸರಗೋಡು ಜನರಲ್ಆ ಸ್ಪತ್ರೆಯಿಂದ ಓರ್ವ, ಕಾಞಂಗಾಡ್ ಜಿಲ್ಲಾ ಆಸ್ಪತ್ರೆಯಿಂದ ಇನ್ನೋರ್ವ ಬಿಡುಗಡೆಗೊಂಡವರು. ಈ ವರೆಗೆ ಸೋಂಕು ಖಚಿತಗೊಂಡಿದ್ದ 162 ಮಂದಿ ಗುಣಮುಖರಾಗಿದ್ದಾರೆ. ಈ ಮೂಲಕ ರಿಕವರಿ ರೇಟ್ ಶೇ 92.3 ಆಗಿದೆ. ಈಗ 14 ಮಂದಿ ಪಾಸಿಟಿವ್ ರೋಗಿಗಳಿದ್ದಾರೆ.
4189 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. ಇವರಲ್ಲಿ 3179 ಮಂದಿಯ ಫಲಿತಾಂಶ ನೆಗೆಟಿವ್ ಆಗಿದೆ. 669 ಮಂದಿಯ ಫಲಿತಾಂಶ ಲಭಿಸಿಲ್ಲ.
ಕಾಸರಗೋಡು : ಎಲ್ಲಾ ಕೊರೋನ ರೋಗಿಗಳೂ ಗುಣಮುಖ
ಕಾಸರಗೋಡು ಜನರಲ್ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ 19 ಸೋಂಕು ಖಚಿತಗೊಂಡು ದಾಖಲಾಗಿದ್ದ ಎಲ್ಲ ರೋಗಿಗಳೂ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೊನೆಯ ವ್ಯಕ್ತಿ ಮಂಗಳವಾರ ಗುಣಮುಖರಾಗಿ ಬಿಡುಗಡೆಗೊಂಡರು. ಈ ವ್ಯಕ್ತಿಗೆ ಆಸ್ಪತ್ರೆ ಸಿಬ್ಬಂದಿ ವಿದಾಯ ಕೋರಿದರು. ಈ ವರೆಗೆ 89 ಮಂದಿ ರೋಗಿಗಳು ಇಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇವರಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟವರೂ, ಮಕ್ಕಳೂ ಇದ್ದರು. ಈಗ ಆಸ್ಪತ್ರೆಯಲ್ಲಿ ಯಾವುದೇ ರೋಗಿ ದಾಖಲಾಗಿಲ್ಲ.







