‘ಮುಸ್ಲಿಮರಿಂದ ತರಕಾರಿ ಖರೀದಿಸಬಾರದು’ ಎಂಬ ಹೇಳಿಕೆ: ಶಾಸಕನಿಗೆ ನೋಟಿಸ್ ಜಾರಿಗೊಳಿಸಿದ ಬಿಜೆಪಿ

ಹೊಸದಿಲ್ಲಿ: ಮುಸ್ಲಿಮರಿಂದ ತರಕಾರಿ ಖರೀದಿಸಬಾರದು ಎಂದು ಹೇಳಿಕೆ ನೀಡಿದ್ದಕ್ಕಾಗಿ ಉತ್ತರ ಪ್ರದೇಶದ ಶಾಸಕ ಸುರೇಶ್ ತಿವಾರಿಗೆ ಬಿಜೆಪಿ ನೋಟಿಸ್ ಜಾರಿಗೊಳಿಸಿದ್ದು, ಈ ಬಗ್ಗೆ ಪ್ರತಿಕ್ರಿಯಿಸುವಂತೆ ಸೂಚನೆ ನೀಡಿದೆ.
ಕೊರೋನ ವೈರಸ್ ನಡುವೆ ಹರಡಲಾಗುತ್ತಿರುವ ದ್ವೇಷದ ನಡುವೆ ಬಿಜೆಪಿ ಶಾಸಕರು ಈ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಯ ಬಗ್ಗೆ ಪಕ್ಷದ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.
“ಒಂದು ವಿಷಯ ನೆನಪಿಟ್ಟುಕೊಳ್ಳಿ, ಮುಸ್ಲಿಮರಿಂದ ತರಕಾರಿಗಳನ್ನು ಖರೀದಿಸಬೇಡಿ” ಎಂದು ಸುರೇಶ್ ತಿವಾರಿ ಹೇಳಿಕೆ ನೀಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನಡ್ಡಾ ಪ್ರಕರಣದ ಬಗ್ಗೆ ಗಮನಹರಿಸುವಂತೆ ರಾಜ್ಯ ಬಿಜೆಪಿಗೆ ಆದೇಶಿಸಿದ್ದಾರೆ. ಇಂತಹ ಹೇಳಿಕೆ ನೀಡದಂತೆ ಅವರು ಪಕ್ಷದ ನಾಯಕರಿಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.
Next Story





