ನಕಲಿ ಬಿತ್ತನೆ ಬೀಜ ಮಾರಾಟದಲ್ಲಿ ಮಠಾಧೀಶರು, ರಾಜಕಾರಣಿಗಳ ಕೈವಾಡ: ಸಚಿವ ಬಿ.ಸಿ.ಪಾಟೀಲ್ ಆರೋಪ

ಹಾವೇರಿ, ಎ.28: ನಕಲಿ ಬೀಜ ಮಾರಾಟದ ಬಗ್ಗೆ ಎಚ್ಚರಿಕೆಯಿಂದ ಇರಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈಗಾಗಲೇ ಹೇಳಿದ್ದಾರೆ. ಇದರ ಮಧ್ಯೆಯೇ ಸಚಿವ ಬಿ.ಸಿ.ಪಾಟೀಲ್ ಅವರು ನಕಲಿ ಬೀಜ ಮಾರಾಟದಲ್ಲಿ ನಾಡಿನ ಮಠಾಧೀಶರು ಹಾಗೂ ರಾಜಕಾರಣಿಗಳ ಕೈವಾಡವಿದೆ ಎಂದು ಆರೋಪಿಸಿದ್ದಾರೆ.
ಮಂಗಳವಾರ ಹಾವೇರಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಕಲಿ ಬೀಜ ಮಾರಾಟದ ಹಿಂದೆ ಮಠಾಧೀಶರ ಹಾಗೂ ರಾಜಕಾರಣಿಗಳ ಕೈವಾಡವಿದೆಯೆಂಬ ಮಾಹಿತಿ ನನಗೆ ಈಗಾಗಲೇ ಒದಗಿ ಬಂದಿದೆ. ಆದರೆ, ನಾನು ಈ ಯಾವ ಶಕ್ತಿಗಳಿಗೂ ಬಗ್ಗುವುದಿಲ್ಲ ಎಂದು ಹೇಳಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿ ನಕಲಿ ಬೀಜಗಳನ್ನು ಮಾರಾಟ ಮಾಡುವುದು ಕಂಡಬಂದ ಹಿನ್ನೆಲೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ವರ್ತಕರಿಂದ 8 ಸಾವಿರ ಕ್ವಿಂಟಾಲ್ ನಕಲಿ ಬೀಜವನ್ನು ವಶಪಡಿಸಿಕೊಂಡಿದ್ದಾರೆ. ಇಂತಹ ಅಕ್ರಮ ವ್ಯಾಪಾರಸ್ಥರ ವಿರುದ್ಧ ಕ್ರಮ ಕೈಗೊಳ್ಳದಂತೆ ಮಠಾಧೀಶರು ಹಾಗೂ ರಾಜಕಾರಣಿಗಳು ಒತ್ತಡ ಹೇರಿರುವುದು ಕಂಡು ಬಂದಿದೆ. ಆದರೆ, ನಾವು ಇದ್ಯಾವುದಕ್ಕೂ ಬಗ್ಗುವುದಿಲ್ಲ. ವ್ಯಾಪಾರಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.





