Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ವದೇಶಿ ಕೋವಿಡ್-19 ಪರೀಕ್ಷಾ ಕಿಟ್‌ಗಳು...

ಸ್ವದೇಶಿ ಕೋವಿಡ್-19 ಪರೀಕ್ಷಾ ಕಿಟ್‌ಗಳು ಮುಂದಿನ ತಿಂಗಳು ಲಭ್ಯ: ಹರ್ಷವರ್ಧನ್

ವಾರ್ತಾಭಾರತಿವಾರ್ತಾಭಾರತಿ28 April 2020 10:56 PM IST
share
ಸ್ವದೇಶಿ ಕೋವಿಡ್-19 ಪರೀಕ್ಷಾ ಕಿಟ್‌ಗಳು ಮುಂದಿನ ತಿಂಗಳು ಲಭ್ಯ: ಹರ್ಷವರ್ಧನ್

ಹೊಸದಿಲ್ಲಿ, ಎ.28: ದೇಶದಲ್ಲಿ ಮೇ ತಿಂಗಳ ವೇಳೆಗೆ ಸ್ವದೇಶಿ ಕೊರೋನ ವೈರಸ್ ಪರೀಕ್ಷಾ ಕಿಟ್‌ಗಳು ಉತ್ಪಾದನೆಯಾಗಲಿವೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರು ಮಂಗಳವಾರ ಇಲ್ಲಿ ತಿಳಿಸಿದರು.

“ಮೇ ತಿಂಗಳ ವೇಳೆಗೆ ದೇಶದಲ್ಲಿಯೇ ಆರ್‌ಟಿ-ಪಿಸಿಆರ್ ಮತ್ತು ಆ್ಯಂಟಿಬಾಡಿ ಪರೀಕ್ಷಾ ಕಿಟ್‌ಗಳನ್ನು ತಯಾರಿಸಲು ನಮಗೆ ಸಾಧ್ಯವಾಗಲಿದೆ. ಎಲ್ಲ ಪ್ರಕ್ರಿಯೆಗಳು ಅಂತಿಮ ಹಂತದಲ್ಲಿದ್ದು, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಅನುಮತಿ ದೊರಕಿದ ಬಳಿಕ ಉತ್ಪಾದನೆ ಆರಂಭವಾಗಲಿದೆ. ಮೇ 31ರ ವೇಳೆಗೆ ದಿನವೊಂದಕ್ಕೆ ಒಂದು ಲಕ್ಷ ಪರೀಕ್ಷೆಗಳನ್ನು ನಡೆಸುವ ನಮ್ಮ ಗುರಿಯನ್ನು ಸಾಧಿಸಲು ಇದು ನೆರವಾಗಲಿದೆ” ಎಂದರು.

ಇದಕ್ಕೂ ಮುನ್ನ ಹರ್ಷವರ್ಧನ ಅವರು ದಿಲ್ಲಿಯ ಉಪ ರಾಜ್ಯಪಾಲ, ದಿಲ್ಲಿ ಆರೋಗ್ಯ ಸಚಿವ, ದಿಲ್ಲಿ ಮಹಾನಗರ ಪಾಲಿಕೆಗಳ ಆಯುಕ್ತರು,ದಿಲ್ಲಿಯ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು,ಡಿಸಿಪಿಗಳು ಮತ್ತಿತರರೊಂದಿಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಪುನರ್‌ಪರಿಶೀಲನಾ ಸಭೆಯೊಂದನ್ನು ನಡೆಸಿದರು.

ಕೊರೋನ ವೈರಸ್ ಪರೋಕ್ಷ ವರದಾನ

ಕೊರೋನ ವೈರಸ್ ಮೇಕ್ ಇನ್ ಇಂಡಿಯಾ ಯೋಜನೆಯಡಿ ವಿವಿಧ ಚಟುವಟಿಕೆಗಳಿಗೆ ಪ್ರೇರಣೆ ನೀಡಿರುವದರಿಂದ ಈ ಪಿಡುಗು ದೇಶದ ಪಾಲಿಗೆ ಪರೋಕ್ಷ ವರದಾನವಾಗಿದೆ ಎಂದು ಹರ್ಷವರ್ಧನ್ ಹೇಳಿದರು.

 ಜೈವಿಕ ತಂತ್ರಜ್ಞಾನ ಇಲಾಖೆ ಅಧೀನದ ಸ್ವಾಯತ್ತ ಸಂಸ್ಥೆಗಳು ಮತ್ತು ಸಾರ್ವಜನಿಕ ಕ್ಷೇತ್ರದ ಉದ್ಯಮಗಳೊಂದಿಗೆ ವೀಡಿಯೊ ಕಾನ್ಫರೆನ್ಸ್‌ನಲ್ಲಿ ಮಾತನಾಡಿದ ಅವರು, “ಕೊರೋನ ವೈರಸ್ ಪಿಡುಗು ಭಾರತಕ್ಕೆ ಕಾಲಿರಿಸಿದ ಬಳಿಕ ಮೇಕ್ ಇನ್ ಇಂಡಿಯಾ ಕಾರ್ಯಕ್ರಮದಡಿ ಹಲವಾರು ಚಟುವಟಿಕೆಗಳು ಸಹ ಆರಂಭಗೊಂಡಿವೆ. ಹೀಗಾಗಿ ಈ ಪಿಡುಗು ನಮ್ಮ ಪಾಲಿಗೆ ಪರೋಕ್ಷ ವರದಾನವಾಗಿದೆ. ನಾವೀಗ ವೈಯಕ್ತಿಕ ರಕ್ಷಣಾ ಉಪಕರಣ (ಪಿಪಿಇ)ಗಳನ್ನು ತಯಾರಿಸುತ್ತಿದ್ದೇವೆ ಮತ್ತು ದೇಶದಲ್ಲಿಂದು ನೂರಕ್ಕೂ ಅಧಿಕ ತಯಾರಕರಿದ್ದಾರೆ. ಪ್ರತಿದಿನ 1-1.5 ಲಕ್ಷ ಪಿಪಿಇಗಳು ತಯಾರಿಕೆಯಾಗುತ್ತಿವೆ” ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X