ಗ್ರೀನ್ ಝೋನ್ ನಲ್ಲಿದ್ದ ದಾವಣಗೆರೆಯಲ್ಲಿ ಮೊದಲ ಕೊರೋನ ಸೋಂಕು ದೃಢ

ಸಾಂದರ್ಭಿಕ ಚಿತ್ರ
ದಾವಣಗೆರೆ, ಎ.28: ಗ್ರೀನ್ ಝೋನ್ ನಲ್ಲಿದ್ದ ದಾವಣಗೆರೆಯಲ್ಲಿ ಮೊದಲ ಕೊರೋನ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಉಂಟು ಮಾಡಿದೆ.
ದಾವಣಗೆರೆಯ ಬಾಷಾ ನಗರದ 35 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ. ಬಾಷಾ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಎರಡು ದಿನಗಳ ಹಿಂದೆ ಗಂಟಲು, ಮೈ ಕೈ ನೋವಿನಿಂದ ದಾವಣಗೆರೆ ಆಸ್ಪತ್ರೆಗೆ ದಾಖಲಾಗಿದ್ದರು. ಇವರ ಗಂಟಲ ದ್ರವವನ್ನು ಶಿವಮೊಗ್ಗ ಪ್ರಯೋಗಾಲಯಕ್ಕೆ ಕಳುಹಿಸಿದಾಗ ಸೋಂಕು ಇರುವುದು ದೃಡಪಟ್ಟಿದೆ.
"ಬಾಷಾ ನಗರವನ್ನು ಸೀಲ್ ಡೌನ್ ಮಾಡಲಾಗುವುದು. ಮಹಿಳೆಯ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 20 ಜನರನ್ನು ಗುರುತಿಸಿದ್ದು, ಅವರನ್ನು ಕ್ವಾರೆಂಟೈನ್ ಗೆ ಒಳಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.
Next Story





