ದಕ್ಷಿಣಕನ್ನಡ ಸಹಕಾರಿ ಹಾಲು ಒಕ್ಕೂಟದಿಂದ ಕೋವಿಡ್-19 ಪರಿಹಾರ ನಿಧಿಗೆ 50 ಲಕ್ಷ ರೂ.

ಉಡುಪಿ, ಎ.29: ಕರ್ನಾಟಕ ರಾಜ್ಯಾದ್ಯಂತ ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಾರಿಗೊಳಿಸಲಾದ ಲಾಕ್‌ಡೌನ್‌ನಿಂದಾಗಿ ತೊಂದರೆಗೊಳಗಾಗಿರುವ ರಾಜ್ಯದ ಜನತೆ ಹಾಗೂ ಸಂತ್ರಸ್ಥರ ನೆರವಿಗೆ ಸಹಕಾರಿ ಯಾಗಲು ದಕ್ಷಿಣಕನ್ನಡ ಸಹಕಾರಿ ಹಾಲು ಒಕ್ಕೂಟದ ಉಭಯ ಜಿಲ್ಲೆಗಳ ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘ ಗಳಿಂದ ಸಂಗ್ರಹಿಸಲಾದ 50 ಲಕ್ಷ ರೂ. ಸಹಾಯಧನದ ಚೆಕ್‌ನ್ನು ಇತ್ತೀಚೆಗೆ ಬೆಂಗಳೂರಿನಲ್ಲಿ ಸಹಕಾರಿ ಸಚಿವರ ಮೂಲಕ ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಪ್ಪಿಸಲಾಯಿತು.
ಸಹಕಾರ ಸಂಘಗಳಿಂದ ಸಂಗ್ರಹಿಸಿದ ದೇಣಿಗೆ ಹಾಗೂ ಒಕ್ಕೂಟದ ಸಿಬ್ಬಂದಿ ಗಳ ಒಂದು ದಿನದ ವೇತನ ಮೊತ್ತ ಸೇರಿದಂತೆ ದಕ್ಷಿಣಕನ್ನಡ ಸಹಕಾರಿ ಹಾಲು ಒಕ್ಕೂಟ 50 ಲಕ್ಷ ರೂ.ವನ್ನು ಸಂಗ್ರಹಿಸಿದ್ದು, ಇದನ್ನು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿವಾರಜ ಹೆಗ್ಡೆ ಕೊಡವೂರು ಅವರು ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ, ಪುತ್ತೂರು ಶಾಸಕ ಸಂಜೀವ ಮಠಂದೂರು, ಕ್ಯಾಂಪ್ಕೊ ಅಧ್ಯಕ್ಷ ಸತೀಶ್ಚಂದ್ರ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ.ಜಿ.ವಿ.ಹೆಗ್ಡೆ ಉಪಸ್ಥಿತರಿದ್ದರು.





