Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ತನ್ನ ಪಾಲಿನ ಆಟವನ್ನು ಅತ್ಯುತ್ತಮವಾಗಿ...

ತನ್ನ ಪಾಲಿನ ಆಟವನ್ನು ಅತ್ಯುತ್ತಮವಾಗಿ ಆಡಿ ಮುಗಿಸಿದ ಇರ್ಫಾನ್

ವೇಣುಗೋಪಾಲ ಶೆಟ್ಟಿವೇಣುಗೋಪಾಲ ಶೆಟ್ಟಿ29 April 2020 10:50 PM IST
share
ತನ್ನ ಪಾಲಿನ ಆಟವನ್ನು ಅತ್ಯುತ್ತಮವಾಗಿ ಆಡಿ ಮುಗಿಸಿದ ಇರ್ಫಾನ್

ಬಾಲಿವುಡ್‌ನ ಹುರಿಗಟ್ಟಿದ ದೇಹದ ನಟರನ್ನು ಮೀರಿ ತುಂಬಾ ತುಂಬಾ ಇಷ್ಟ ಆದವನು ಇರ್ಫಾನ್ ಖಾನ್. ಅದ್ಯಾಕೋ ಗೊತ್ತಿಲ್ಲ.. ಆತನ ಪೀಕು, ದಿ ಲಂಚ್ ಬಾಕ್ಸ್ ಸಹಿತ ಬಹುತೇಕ ಚಿತ್ರಗಳು ನನ್ನನ್ನು ತೀವ್ರವಾಗಿ ಕಾಡಿವೆ. ಆದರೆ ಆತ ನಟಿಸಿದ್ದ , ಸತ್ಯ ಕತೆಯನ್ನಾಧರಿಸಿದ ‘ಪಾನ್ ಸಿಂಗ್ ತೋಮರ್’ಮತ್ತೆ ಮತ್ತೆ ನೋಡಿದ ಸಿನೆಮಾ. ಆ ಚಿತ್ರದ ಕೊನೆಯಲ್ಲಿ ಕತಾ ನಾಯಕ, ಗುಂಡೇಟು ತಿಂದು ಒಂದು ಹನಿ ನೀರಿಗಾಗಿ ಪರದಾಡಿದಾಗಲೇ ಮನಸ್ಸು ಕಸಿವಿಸಿಯಾಗಿತ್ತು. ಆದ್ರೆ ಈಗ ಇರ್ಫಾನ್ ನಿಜ ಬದುಕಿನಲ್ಲಿ ಸಾವಿನ ಜೊತೆಗಿನ ಸೆಣೆಸಾಟದಲ್ಲಿ ಸೋಲೊಪ್ಪಿಕೊಂಡಿದ್ದಾರೆ. ಆದರೆ ಕಲೆಯ ಮೂಲಕ ಆತ ಒಂದು ರೀತಿಯಲ್ಲಿ ಸಾವನ್ನೂ ಗೆದ್ದಿದ್ದಾನೆ. ಯಾಕೆಂದರೆ ದೈಹಿಕವಾಗಿ ಇರ್ಫಾನ್ ನಮ್ಮ ಮುಂದೆ ಇಲ್ಲದೇ ಇರಬಹುದು. ಆದರೆ ಆತ ಜೀವಕೊಟ್ಟ ಪಾತ್ರಗಳು ಮುಂದೆಯೂ ನಮ್ಮ ಜೊತೆ ಜೊತೆಗೇ ಇರುತ್ತವೆ. ನಮ್ಮನ್ನು ಅಳಿಸುತ್ತವೆ, ನಗಿಸುತ್ತವೆ, ವಿಚಾರಕ್ಕೆ ಹಚ್ಚುತ್ತವೆ. ಇಲ್ಲಿ ಇರ್ಫಾನ್ ಖಾನ್ ವರ್ಷದ ಹಿಂದೆ ಆಸ್ಪತ್ರೆಯ ಬೆಡ್ ಮೇಲೆ ಮಲಗಿ ಬದುಕಿನ ಕುರಿತಂತೆ ಧ್ಯಾನಿಸಿದ ಕೆಲವು ಸಾಲುಗಳನ್ನು ಅನುವಾಸಿದ್ದೇನೆ.
***

‘‘ನ್ಯೂರೋ ಎಂಡೋಕ್ರೈನ್ ಕ್ಯಾನ್ಸರ್ ನನ್ನ ಆವರಿಸಿದೆ. ಈ ಹೆಸರೇ ನನ್ನ ಶಬ್ದಕೋಶಕ್ಕೆ ಹೊಸತು. ಇದು ತೀರಾ ಅಪರೂಪದ ಕ್ಯಾನ್ಸರ್ ರೋಗ. ಇದರ ಬಗ್ಗೆ ನಡೆದ ಅಧ್ಯಯನಗಳೂ ಕಡಿಮೆ. ಹೀಗಾಗಿ ನಿಶ್ಚಿತವಾದ ಔಷಧಿ ಇಲ್ಲ. ಹೀಗಾಗಿ, ನಾನೀಗ ವೈದ್ಯಲೋಕಕ್ಕೆ ಟ್ರಯಲ್ ಆ್ಯಂಡ್ ಎರರ್ ಆಟದ ವಸ್ತು.

ಅಸಲಿಗೆ ನಾನೊಂದು ಭಿನ್ನ ಆಟದಲ್ಲಿದ್ದೆ... ವೇಗವಾಗಿ ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಸುತ್ತಿದ್ದೆ. ಕನಸುಗಳು, ಯೋಜನೆಗಳು, ಆಕಾಂಕ್ಷೆಗಳು, ಗುರಿಗಳು ಈ ಎಲ್ಲವೂಗಳಲ್ಲಿ ನಾನು ಎಂಗೇಜ್ ಆಗಿದ್ದೆ. ಥಟ್ಟನೆ ಯಾರೋ ಭುಜ ತಟ್ಟಿದ ಹಾಗಾಯ್ತು. ತಿರುಗಿ ನೋಡಿದರೆ ಟಿಸಿ ನಿಂತಿದ್ದರು. ‘‘ನೀವು ತಲುಪಬೇಕಾದ ಸ್ಥಳ ಬಂದಿದೆ.. ಪ್ಲೀಸ್ ಇಳಿದು ಬಿಡಿ..’’ ಅಂದಾಗ ನನಗೆ ಗೊಂದಲ: ‘‘ಇಲ್ಲ.. ಇಲ್ಲ.. ನಾನು ತಲುಪಬೇಕಾದ ಸ್ಥಳ ಇನ್ನೂ ಬಂದಿಲ್ಲ’’ ಎಂದೆ. ‘‘ಇಲ್ಲ, ಅದೇ ಇದು.. ಕೆಲವೊಮ್ಮೆ ಹಾಗೆಯೇ ಆಗುತ್ತೆ. ’’

ನನಗೆ ಈಗ ಅರ್ಥವಾಗಿದ್ದು ಇಷ್ಟೇ; ಸಾಗರದಲ್ಲಿ ತೇಲುತ್ತಿರುವ ಮರದ ತೊಗಟೆಯಂತಿರುವ ನಿಮಗೆ ಅಲ್ಲಿನ ಅಲೆಗಳು ಹೇಗಿರಬಹುದೆಂದು ಊಹಿಸಲು ಅಸಾಧ್ಯವಾಗುತ್ತದೆ ಹಾಗೂ ಅವುಗಳನ್ನು ನಿಯಂತ್ರಿಸಲು ನೀವು ಹತಾಶರಾಗಿ ಪ್ರಯತ್ನಿಸುತ್ತೀರಿ. ಇಂಥದೊಂದು ಗಾಬರಿ, ಆತಂಕ, ಭಯ ಪರಿಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ ನಾನು, ನನ್ನ ಮಗನ ಬಳಿ ಹೇಳಿಕೊಂಡೆ: ‘‘ನನ್ನಿಂದ ನಾನು ನಿರೀಕ್ಷಿಸುವುದು ಇಷ್ಟೇ. ಈ ಪರಿಸ್ಥಿತಿಯನ್ನು ಮತ್ತೆ ಎಂದಿಗೂ ನಾನು ಎದುರಿಸಬಾರದು. ನನ್ನ ಕಾಲ ಮೇಲೆ ನಾನು ನಿಲ್ಲಬೇಕಿದೆ. ಭೀತಿ ಮತ್ತು ಭಯ ನನ್ನ ಆಕ್ರಮಿಸಿಕೊಳ್ಳಬಾರದು’’.

‘‘ನೋವಿನ ಅರಿವು ನಿಮಗೆ ತಿಳಿದಿದ್ದರೆ, ನನ್ನ ಈಗಿನ ಸ್ವರೂಪ ಮತ್ತು ತೀವ್ರತೆಯ ಅನುಭವ ನಿಮಗೂ ಇರುತ್ತದೆ. ಯಾವುದೇ ಸಮಾಧಾನ, ಪ್ರೇರಣೆ ಕೆಲಸ ಮಾಡುತ್ತಿಲ್ಲ. ಬರೀ ನೋವು ಮತ್ತು ಈ ನೋವು ದೇವರಿಗಿಂತಲೂ ಅಗಾಧವಾದದ್ದು ಅನಿಸುತ್ತಿದೆ.’’

ದುಗುಡ, ದಣಿವಿನಿಂದ ಲಂಡನ್ ಆಸ್ಪತ್ರೆ ಪ್ರವೇಶಿಸಿದಾಗ ಆಸ್ಪತ್ರೆಯ ಮುಂಭಾಗದಲ್ಲಿ ಲಾರ್ಡ್ಸ್ ಸ್ಟೇಡಿಯಂ ಇರೋದು ಅರಿವಾಯಿತು. ಇದು ನನ್ನ ಬಾಲ್ಯದ ಕನಸಿನ ಮಕ್ಕಾ. ನೋವಿನ ಮಧ್ಯೆಯೂ ನಾನು ಅಲ್ಲಿ ನಗುತ್ತಿರುವ ವಿವಿಯನ್ ರಿಚರ್ಡ್ಸ್ ಅವರ ಪೋಸ್ಟರ್ ಕಂಡೆ. ನಾನು ಈ ಜಗತ್ತಿನಲ್ಲಿ ಇಲ್ಲದಿದ್ದರೂ ಈ ಪ್ರಪಂಚದಲ್ಲಿ ಏನೂ ಸಂಭವಿಸುವುದಿಲ್ಲ. ಎಲ್ಲವೂ ಹಾಗೆಯೇ ಇರುತ್ತದೆ.

ನನ್ನ ಕೊಠಡಿಯ ಬಲಭಾಗದಲ್ಲಿ ಕೋಮಾದಲ್ಲಿ ಇರುವವರ ವಾರ್ಡ್ ಇದೆ. ಒಂದೊಮ್ಮೆ ನಾನು ಆಸ್ಪತ್ರೆಯ ಬಾಲ್ಕನಿಯಲ್ಲಿ ನಿಂತು ದೂರಕ್ಕೆ ದೃಷ್ಟಿ ಹರಿಸಿದೆ. ತಕ್ಷಣ ವಿಲಕ್ಷಣವಾದ ಭಾವವೊಂದು ನನ್ನನ್ನು ಕಾಡಿತು. ಜೀವನ ಆಟ ಮತ್ತು ಸಾವಿನ ಆಟದ ನಡುವೆ ಕೇವಲ ಒಂದು ರಸ್ತೆ ಮಾತ್ರ ಅಲ್ಲಿತ್ತು. ಒಂದು ಕಡೆ ಕ್ರೀಡಾಂಗಣ... ಮತ್ತೊಂದು ಕಡೆ ಆಸ್ಪತ್ರೆ ಇತ್ತು. ಆದರೆ ನಾವು ಇವೆರಡರಲ್ಲಿ ಒಂದರ ಭಾಗವಾಗಿದ್ದೇವೆ ಎಂದು ನಿಶ್ಚಿತವಾಗಿ ಹೇಳಲು ಸಾಧ್ಯವಿಲ್ಲ. ಕ್ರೀಡಾಂಗಣಕ್ಕೂ ಸೇರಿದವರಲ್ಲ, ಆಸ್ಪತ್ರೆಗೂ ಸೇರಿದವರಲ್ಲ. ಈ ಸತ್ಯ ನನ್ನನ್ನು ಬಹಳವಾಗಿ ಕಾಡಿತು.

ಈ ಬ್ರಹ್ಮಾಂಡಕ್ಕೆ ಅದೆಂತಹ ಅಭೂತ ಪೂರ್ವ ಶಕ್ತಿ ಇದೆ ಎಂಬುದು ಗೊತ್ತಾಯಿತು. ನನ್ನ ಆಸ್ಪತ್ರೆ ಇರುವ ಸ್ಥಳದ ಈ ಒಂದು ವಿಚಿತ್ರ ಘಟ್ಟ ನನ್ನನ್ನು ಬಹುವಾಗಿ ಕಾಡಿತು. ನನ್ನಲ್ಲೀಗ ಅನಿಶ್ಚಿತತೆ ಮನೆ ಮಾಡಿದೆ. ನಾನೀಗ ಮಾಡಲು ಸಾಧ್ಯವಿರುವುದು ಒಂದನ್ನೇ.. ನನ್ನ ಸಾಮರ್ಥ್ಯವನ್ನು ಅರಿತುಕೊಂಡು, ನನ್ನ ಪಾಲಿನ ಆಟವನ್ನು ಅತ್ಯುತ್ತಮವಾಗಿ ಆಡೋದು.

ಫಲಿತಾಂಶ ಏನಾಗಬಹುದೆಂದು ಯೋಚಿಸಿದೆ, ಇದು ನನ್ನನ್ನು ಎಲ್ಲಿಗೆ ಕರೆದುಕೊಂಡು ಹೋಗಬಹುದೆಂದೂ ಯೋಚಿಸಿದೆ. ಈಗಿನಿಂದ ನಾಲ್ಕು ಎಂಟು ತಿಂಗಳು ಅಥವಾ ಎರಡು ವರ್ಷವಾಗಲಿ, ಫಲಿತಾಂಶ ಏನೇ ಬರಲಿ. ನಾನು ನಂಬಿಕೆ ಕಳೆದುಕೊಳ್ಳಬಾರದು ಎಂದು ನಿರ್ಧರಿಸಿದ್ದೇನೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗ ಮೊದಲ ಬಾರಿಗೆ ಸ್ವಾತಂತ್ರ್ಯ ಎನ್ನುವ ಪದದ ನಿಜವಾದ ಅರ್ಥ ಮನವರಿಕೆಯಾಗಿದೆ. ಜೀವನದ ಮ್ಯಾಜಿಕನ್ನು ಮೊದಲ ಬಾರಿಗೆ ಪರೀಕ್ಷಿಸುತ್ತಿದ್ದೇನೆ. ಫಲಿತಾಂಶ ಏನಾಗಲಿದೆ ಎಂಬುದನ್ನು ಕಾಯುತ್ತಿದ್ದೇನೆ. ನನ್ನ ಪ್ರತಿಯೊಂದು ಕಣಕಣದಲ್ಲೂ ವಿಶ್ವಾಸವಿದೆ. ಅದು ಉಳಿಯುವುದೇ ಎನ್ನುವುದನ್ನು ಸಮಯವೇ ಹೇಳಲಿದೆ.’’

ನನ್ನ ಜೀವನದ ಪ್ರಯಾಣದುದ್ದಕ್ಕೂ ಜಗತ್ತಿನಾದ್ಯಂತ ಜನ ನನಗಾಗಿ ಪ್ರಾರ್ಥಿಸಿಸುತ್ತಿದ್ದಾರೆ... ಶುಭ ಕೋರಿದ್ದಾರೆ. ನನಗೆ ತಿಳಿದಿರುವ, ತಿಳಿಯದೆ ಇರುವ ಜನರು ವಿಶ್ವದ ವಿವಿಧೆಡೆಯಿಂದ ನನಗಾಗಿ ಪ್ರಾರ್ಥಿಸುತ್ತಿದ್ದಾರೆ. ಬೇರೆ ಬೇರೆ ಜಾಗದಲ್ಲಿ ಬೇರೆ ಬೇರೆ ಕಾಲಮಾನದಲ್ಲಿ ಮಾಡಿದ ಈ ಪ್ರಾರ್ಥನೆ ಒಂದಾಗಿ ನನಗೆ ಸ್ಫೂರ್ತಿ ನೀಡುತ್ತಿದೆ... ನನ್ನ ಶಕ್ತಿಯ ಕಿರೀಟವಾಗಿದೆ. ಈ ವಿಶ್ವಾಸ ನಿಧಾನವಾಗಿ ಮೊಗ್ಗಾಗಿ, ಎಲೆಯಾಗಿ, ರೆಂಬೆವಾಗಿ ಬೆಳೆಯುತ್ತಿದೆ. ನಾನು ಈ ಪ್ರಾರ್ಥನೆಯನ್ನು ನೋಡುತ್ತ ತೃಪ್ತಿಪಡುತ್ತಿದ್ದೇನೆ. ಪ್ರತಿ ಹೂವು, ಪ್ರತಿ ರೆಂಬೆಯೂ ಸಾಮೂಹಿಕ ಪ್ರಾರ್ಥನೆಯ ಮೂಲಕ ನನ್ನನ್ನು ತಲುಪಿ ಅಚ್ಚರಿ, ಸಂತೋಷ ಮತ್ತು ಕುತೂಹಲ ಮೂಡಿಸಿದೆ. ಒಂದು ಪ್ರವಾಹವನ್ನು ತಡೆಯಲು ಮುಚ್ಚಳದ ಅಗತ್ಯವಿಲ್ಲ ಎನ್ನುವುದು ಮನವರಿಕೆಯಾಗಿದೆ. ಬಹುಶಃ ಪ್ರಕೃತಿ ನನಗೆ ಸಣ್ಣ ಆಘಾತ ನೀಡಿದೆಯಷ್ಟೆ.’’’’

share
ವೇಣುಗೋಪಾಲ ಶೆಟ್ಟಿ
ವೇಣುಗೋಪಾಲ ಶೆಟ್ಟಿ
Next Story
X