Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಡಿತರ ಕಾರ್ಡುಗಳನ್ನು ಅನರ್ಹಗೊಳಿಸಬಾರದು:...

ಪಡಿತರ ಕಾರ್ಡುಗಳನ್ನು ಅನರ್ಹಗೊಳಿಸಬಾರದು: ಸಚಿವ ಕೆ.ಗೋಪಾಲಯ್ಯ

ಕೊರೋನ ಸಂಕಷ್ಟ

ವಾರ್ತಾಭಾರತಿವಾರ್ತಾಭಾರತಿ30 April 2020 12:29 AM IST
share
ಪಡಿತರ ಕಾರ್ಡುಗಳನ್ನು ಅನರ್ಹಗೊಳಿಸಬಾರದು: ಸಚಿವ ಕೆ.ಗೋಪಾಲಯ್ಯ

ಧಾರವಾಡ, ಎ.29: ಕೊರೋನ ಸಂಕಷ್ಟ ಕಾಲದಲ್ಲಿ ಯಾರಿಗೂ ರೇಷನ್ ನಿರಾಕರಿಸಬಾರದು. ಪಡಿತರ ಕಾರ್ಡ್ ಇಲ್ಲದವರಿಗೆ ಕೊರೋನ ಮುಗಿಯುವವರೆಗೂ ಸೌಲಭ್ಯವನ್ನು ಒದಗಿಸಬೇಕು. ಈ ಸಂಕಷ್ಟದ ಸಮಯದಲ್ಲಿ ಯಾವ ಕಾರ್ಡ್‍ಗಳನ್ನೂ ಅನರ್ಹಗೊಳಿಸಬಾರದು ಎಂದು ಆಹಾರ ಮತ್ತು ನಾಗರಿಕ ವ್ಯವಹಾರಗಳ ಸಚಿವ ಕೆ.ಗೋಪಾಲಯ್ಯ ಸೂಚನೆ ನೀಡಿದ್ದಾರೆ.

ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೊರೋನ ಸಂದರ್ಭದಲ್ಲಿ ಪಡಿತರ ದಾಸ್ತಾನು, ವಿತರಣೆ ಹಾಗೂ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ವಿತರಣೆ ಕುರಿತಂತೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.

ತೂಕ, ಅಳತೆಯಲ್ಲಿ ಮೋಸ ಹಾಗೂ ಪಡಿತರದಾರರಿಂದ ಸೇವಾ ವೆಚ್ಚದ ನೆಪದಲ್ಲಿ ಹಣ ವಸೂಲಿ ಮಾಡುವ ನ್ಯಾಯ ಬೆಲೆ ಅಂಗಡಿಗಳ ಲೈಸೆನ್ಸ್ ರದ್ದುಗೊಳಿಸಬೇಕು. ಗ್ರಾಹಕರಿಂದ ಯಾವುದೆ ಸೇವಾ ವೆಚ್ಚವನ್ನು ನ್ಯಾಯಬೆಲೆ ಅಂಗಡಿ ಮಾಲಕರು ವಸೂಲಿ ಮಾಡಬಾರದು. ಸರಕಾರವೆ ಅವರಿಗೆ ಸೇವಾ ವೆಚ್ಚವನ್ನು ನೀಡುತ್ತಿದೆ ಎಂದು ಅವರು ಹೇಳಿದರು.

ಪಡಿತರದಾರರಿಂದ ಯಾರಾದರೂ ಒಂದು ಪೈಸೆ ಹಣ ಪಡೆದರೆ ಅಂತವರ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು. ಕಂದಾಯ, ಆಹಾರ ಇಲಾಖೆ ಹಾಗೂ ತೂಕ ಮತ್ತು ಅಳತೆ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡಂತೆ ತಂಡಗಳನ್ನು ರಚಿಸಿ ಜಿಲ್ಲೆಯ ಎಲ್ಲ 508 ನ್ಯಾಯಬೆಲೆ ಅಂಗಡಿಗಳ ಪಡಿತರ ವಿತರಣೆ ಮೇಲೆ ನಿಗಾವಹಿಸಲು ಅವರು ಸೂಚನೆ ನೀಡಿದರು.

ಪಡಿತರ ಕಾರ್ಡಿಗಾಗಿ ಅರ್ಜಿ ಹಾಕಿದ ಬಿಪಿಎಲ್ ಮತ್ತು ಎಪಿಎಲ್ ಕಾರ್ಡುದಾರರಿಗೆ ರೇಷನ್ ನೀಡಬೇಕು. ಅರ್ಜಿ ಹಾಕಿದವರ ಪಟ್ಟಿಯನ್ನು ಆಯಾ ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರಕಟಿಸಬೇಕು. ಪ್ರತಿ ಬಿಪಿಎಲ್ ಕುಟುಂಬದ ಪ್ರತಿ ಸದಸ್ಯರಿಗೆ 10 ಕೆ.ಜಿ. ಅಕ್ಕಿ ನೀಡಬೇಕು ಹಾಗೂ ಎಪಿಎಲ್ ಕುಟುಂಬ ರೇಷನ್ ಬೇಡಿಕೆ ಸಲ್ಲಿಸಿದರೆ ಒಂದು ಕೆ.ಜಿ. ಅಕ್ಕಿಗೆ 15 ರೂ.ನಂತೆ ವಿತರಿಸಲು ಅವಕಾಶವಿದೆ. ಹಾಗೂ ಮೇ ತಿಂಗಳಲ್ಲಿ ರೇಷನ್ ಜೊತೆಗೆ ತೊಗರಿ ಬೇಳೆಯನ್ನು ನೀಡಲಾಗುವುದು ಎಂದು ಅವರು ಹೇಳಿದರು.

ಮೇ ಹಾಗೂ ಜೂನ್‍ವರೆಗೆ ಅಂತ್ಯೋದಯ ಹಾಗೂ ಬಿಪಿಎಲ್ ಕುಟುಂಬಗಳ ಪ್ರತಿ ಸದಸ್ಯರಿಗೆ 10 ಕೆ.ಜಿ. ಅಕ್ಕಿ ಹಾಗೂ ಪ್ರತಿ ಕಾರ್ಡ್ ಒಂದಕ್ಕೆ ಒಂದು ಕೆ.ಜಿ. ತೊಗರಿಬೇಳೆ ಉಚಿತವಾಗಿ ವಿತರಿಸಲಾಗುತ್ತದೆ. ಈ ಎಲ್ಲ ಮಾಹಿತಿಯನ್ನು ಜಿಲ್ಲೆಯ ಎಲ್ಲ ನ್ಯಾಯ ಬೆಲೆ ಅಂಗಡಿಗಳಲ್ಲಿ ಪ್ರಕಟಿಸಲು ಕ್ರಮವಹಿಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿನಿರ್ದೇಶಕ ಸದಾಶಿವ ಮರ್ಜಿ ಅವರಿಗೆ ಗೋಪಾಲಯ್ಯ ಸೂಚನೆ ನೀಡಿದರು.

ಮೇ5 ರಿಂದ ರಾಜ್ಯದ ಎಲ್ಲ 19,800 ಪಡಿತರ ಅಂಗಡಿಗಳನ್ನು ಏಕಕಾಲದಲ್ಲಿ ತೆರೆದು ಅಕ್ಕಿ ಮತ್ತು ತೊಗರಿ ಬೇಳೆಯನ್ನು ಒಟ್ಟಿಗೆ ವಿತರಿಸುವ ಕುರಿತಂತೆ ಮುಖ್ಯಮಂತ್ರಿ ಜೊತೆ ಚರ್ಚಿಸಿ ಗುರುವಾರ ನಿರ್ಧಾರ ಕೈಗೊಳ್ಳಲಾಗುವುದು. ಜಿಲ್ಲೆಯ 508 ಅಂಗಡಿಗಳಲ್ಲೂ ಏಕಕಾಲದಲ್ಲಿ ತೆರೆದು ಪಡಿತರ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಅವರು ಸೂಚಿಸಿದರು.

ಸಭೆಯಲ್ಲಿ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಶಾಸಕರಾದ ಪ್ರಸಾದ್ ಅಬ್ಬಯ್ಯ, ಸಿ.ಎಂ. ನಿಂಬಣ್ಣವರ, ಕುಸುಮಾವತಿ ಶಿವಳ್ಳಿ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ವಿಜಯಲಕ್ಷ್ಮಿ ಪಾಟೀಲ್, ಜಿಲ್ಲಾಧಿಕಾರಿ ದೀಪಾ ಚೋಳನ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಬಿ.ಸಿ.ಸತೀಶ್, ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಸೇರಿದಂತೆ ಜಿಲ್ಲೆಯ ಎಲ್ಲ ತಹಶೀಲ್ದಾರರು, ಆಹಾರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X