ಉಳ್ಳಾಲದ ವ್ಯಕ್ತಿ ದುಬೈಯಲ್ಲಿ ನಿಧನ

ಉಳ್ಳಾಲ, ಎ.30: ಉಳ್ಳಾಲದ ಕೋಡಿ, ತೋಟ ನಿವಾಸಿ ಯು.ಟಿ.ಜಮಾಲ್ (47) ಎಂಬವರು ಬುಧವಾರ ಸಂಜೆ ದುಬೈಯಲ್ಲಿ ನಿಧನರಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ದುಬೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಂಜೆ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಮೃತದೇಹವನ್ನು ಭಾರತಕ್ಕೆ ತರಲು ಅವಕಾಶ ಇಲ್ಲದಿರುವುದರಿಂದ ಅಲ್ಲೇ ಧಪನ ಮಾಡಲಾಗುವುದು ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.
Next Story





